ಬುಧವಾರ, ಜನವರಿ 29, 2020

ಹೆಣ್ಣು ಮಕ್ಕಳಿಗೆ ಕಡ್ಡಾಯ ಶಿಕ್ಷಣ ಕೊಡಿಸಿ

-ನ್ಯಾ. ನಾಮದೇವ ಕೆ.ಸಾಲಮಂಟಪಿ

ಯಾದಗಿರಿ, ಜನವರಿ 29 (ಕರ್ನಾಟಕ ವಾರ್ತೆ): ಗಂಡುಮಕ್ಕಳಂತೆ ಹೆಣ್ಣುಮಕ್ಕಳಿಗೂ ಪೋಷಕರು ಕಡ್ಡಾಯವಾಗಿ ಶಿಕ್ಷಣ ಕೊಡಿಸಬೇಕು. ಬೇಧ-ಭಾವ ಮಾಡಬಾರದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಮುಖ್ಯ ನ್ಯಾಯಿಕ ದಂಡಾಧಿಕಾರಿಗಳಾದ ನಾಮದೇವ ಕೆ.ಸಾಲಮಂಟಪಿ ಅವರು ಸಲಹೆ ನೀಡಿದರು.
ನಗರದ ಸ್ಟೇಷನ್ ಬಜಾರ ಸರಕಾರಿ ಪ್ರೌಢ ಶಾಲೆಯಲ್ಲಿ ಇತ್ತೀಚೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಮಹಿಳಾ ಶಕ್ತಿ ಕೇಂದ್ರ ಯೋಜನೆ ಹಾಗೂ ಶಿಶು ಅಭಿವೃದ್ಧಿ ಯೋಜನೆ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ “ಬೇಟಿ ಬಚಾವೋ ಬೇಟಿ ಪಡಾವೋ” ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರು ಮಾತನಾಡಿದರು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಶ ಅರ್ಜುನ ಬನಸೊಡೆ ಅವರು ಮಹಿಳೆಯರಿಗೆ ಇರುವ ಸ್ಥಾನಮಾನಗಳ ಬಗ್ಗೆ ಹಾಗೂ ಸಂವಿಧಾನದಲ್ಲಿ ಮಹಿಳೆಯರಿಗೆ ಕಾನೂನು ಶಿಕ್ಷಣದ ಬಗ್ಗೆ ವಿವರಿಸಿದರು.

ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ ಅವರು ಅತಿಥಿಗಳಾಗಿ ಆಗಮಿಸಿದ್ದರು. ಯಾದಗಿರಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಾಧಾ ಜಿ.ಮಣ್ಣೂರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪಿಎಸ್‍ಐ ಕೃಷ್ಣಪ್ಪ ಸುಬೇದಾರ, ಸಿಆರ್‍ಪಿ ಶಿವರಾಜ ಪಾಟೀಲ್, ಸರಕಾರಿ ಪ್ರೌಢ ಶಾಲೆಯ ಮುಖ್ಯಗುರು ಬಸ್ಸಪ್ಪ ಅವರು ಉಪಸ್ಥಿತರಿದ್ದರು.
ಎಂ.ಎಸ್.ಕೆ ಯೋಜನೆಯ ಜಿಲ್ಲಾ ಸಂಯೋಜಕರಾದ ಸಂಗೀತಾ ಪೂಜಾರಿ ಅವರು ಬೇಟಿ ಬಚಾವೋ ಬೇಟಿ ಪಡಾವೋ ಪ್ರತಿಜ್ಞಾ ವಿಧಿ ಬೋಧಿಸಿದರು. ಅಂಗನವಾಡಿ ಮೇಲ್ವಿಚಾರಕಿಯರು ಮತ್ತು ಕಾರ್ಯಕರ್ತೆಯರು, ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು, ಮಹಿಳಾ ಶಕ್ತಿ ಕೇಂದ್ರ ಯೋಜನೆಯ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು. ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಶಿವಮಂಗಳ ಎಂ.ಪ್ರಸನ್ನ ಅವರು ಸ್ವಾಗತಿಸಿದರು. ಅಂಗನವಾಡಿ ಮೇಲ್ವಿಚಾರಕಿ ಶರಣಮ್ಮ ಎಸ್.ಸಜ್ಜನ್ ನಿರೂಪಿಸಿದರು. ಕಾರ್ಯಕ್ರಮಕ್ಕೂ ಮೊದಲು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಅಂಗವಾಗಿ ಸ್ಟೇಷನ್ ಬಜಾರ ಶಾಲೆಯಿಂದ ಜಾಗೃತಿ ಜಾಥಾ ಹಾಗೂ ವಿದ್ಯಾರ್ಥಿಗಳಿಂದ ಮಾನವ ಸರಪಳಿ ನಿರ್ಮಿಸಲಾಯಿತು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...