ಇಂದು ಪೂರ್ವಸಿದ್ಧತಾ ಸಭೆ
ಯಾದಗಿರಿ, ಜನವರಿ ೦೬ (ಕರ್ನಾಟಕ ವಾರ್ತೆ): ಜಿಲ್ಲಾಡಳಿತ ವತಿಯಿಂದ ಜನವರಿ ೨೬ರಂದು ಗಣರಾಜ್ಯೋತ್ಸವ ಮತ್ತು ಜನವರಿ ೧೨ರಂದು ಸ್ವಾಮಿ ವಿವೇಕಾನಂದರ ೧೫೬ನೇ ಜಯಂತಿಯನ್ನು ವಿಜೃಂಭಣೆಯಿAದ ಆಚರಣೆ ಮಾಡಲು ಪೂರ್ವ ಸಿದ್ಧತಾ ಸಭೆಯನ್ನು ಜನವರಿ ೭ರಂದು ಬೆಳಿಗ್ಗೆ ೧೦ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಸಂಘ-ಸAಸ್ಥೆಗಳ ಪ್ರತಿನಿಧಿಗಳು ಹಾಜರಾಗುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಎಸಿಬಿ ಅಧಿಕಾರಿಗಳಿಂದ ಅಹವಾಲು ಸ್ವೀಕಾರ
ಯಾದಗಿರಿ, ಜನವರಿ ೦೬ (ಕರ್ನಾಟಕ ವಾರ್ತೆ): ಯಾದಗಿರಿ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ಯಾದಗಿರಿಯ ತಹಸೀಲ್ ಕಾರ್ಯಾಲಯದಲ್ಲಿ ಜನವರಿ ೮ರಂದು ಬೆಳಿಗ್ಗೆ ೧೧ರಿಂದ ಮಧ್ಯಾಹ್ನ ೨ ಗಂಟೆಯವರೆಗೆ ಜನಸಂಪರ್ಕ ಸಭೆ ನಡೆಸಿ ಅರ್ಜಿ ಅಹವಾಲು ಸ್ವೀಕಾರ ಮಾಡಲಿದ್ದು, ಸಾರ್ವಜನಿಕರು ಅಧಿಕಾರಿಗಳಿಗೆ ಭೇಟಿಯಾಗಿ ಭ್ರಷ್ಟಾಚಾರಕ್ಕೆ ಸಂಬAಧಿಸಿದAತೆ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ.
ಭ್ರಷ್ಟಾಚಾರ ನಿಗ್ರಹ ದಳದ ಡಿಎಸ್‌ಪಿ ಡಾ.ಸಂತೋಷ ಕೆ.ಎಂ (೯೪೮೦೮೦೬೨೪೨), ಪೊಲೀಸ್ ಇನ್‌ಸ್ಪೆಕ್ಟರ್ ಬಾಬಾಸಾಹೇಬ ಪಾಟೀಲ್ (ಮೊ:೯೪೮೦೮ ೦೬೩೧೩), ಪೊಲೀಸ್ ಇನ್‌ಸ್ಪೆಕ್ಟರ್ ಗುರುಪಾದ ಎಸ್.ಬಿರಾದಾರ (ಮೊ:೯೪೮೦೮ ೦೬೩೧೪) ಅವರು ಅಹವಾಲು ಸ್ವೀಕರಿಸುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಲೋಕಾಯುಕ್ತ ಪೊಲೀಸರಿಂದ ಅಹವಾಲು ಸ್ವೀಕಾರ
ಯಾದಗಿರಿ, ಜನವರಿ ೦೬ (ಕರ್ನಾಟಕ ವಾರ್ತೆ): ಯಾದಗಿರಿಯ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರಾದ ಉಮೇಶ ಬಿ.ಚಿಕ್ಕಮಠ ಅವರು ಜಿಲ್ಲೆಯ ವಿವಿಧೆಡೆ ನಿಗದಿಪಡಿಸಿದ ದಿನಾಂಕಗಳAದು ಸಾರ್ವಜನಿಕರಿಂದ ಭ್ರಷ್ಟಾಚಾರ ಮತ್ತು ಸರ್ಕಾರಿ ಕಚೇರಿಗಳಲ್ಲಿನ ಕುಂದುಕೊರತೆಗಳ ಕುರಿತು ಅಹವಾಲು ಸ್ವೀಕರಿಸುವರು.
ಜನವರಿ ೯ರಂದು ಬೆಳಿಗ್ಗೆ ೧೧ ಗಂಟೆಗೆ ಗುರುಮಠಕಲ್ ಪುರಸಭೆ ಸಭಾಂಗಣದಲ್ಲಿ, ಜನವರಿ ೧೭ರಂದು ಬೆಳಿಗ್ಗೆ ೧೧ ಗಂಟೆಗೆ ಯಾದಗಿರಿ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು. ಈ ದಿನಾಂಕಗಳAದು ಸಂಬAಧಪಟ್ಟ ತಾಲ್ಲೂಕಿನ ಎಲ್ಲಾ ಅಧಿಕಾರಿಗಳು ಉಪಸ್ಥಿತರಿರುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ