ಗುರುವಾರ, ಜನವರಿ 2, 2020

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ
ಯಾದಗಿರಿ, ಜನವರಿ ೦೨ (ಕರ್ನಾಟಕ ವಾರ್ತೆ): ಪಶುಸಂಗೋಪನೆ, ಅಲ್ಪ ಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಬಿ.ಚವ್ಹಾಣ್ ಅವರು ಜನವರಿ ೩ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಶುಕ್ರವಾರ ಬೆಳಿಗ್ಗೆ ೯.೩೦ ಗಂಟೆಗೆ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ಬೆಳಿಗ್ಗೆ ೧೧ ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಮಧ್ಯಾಹ್ನ ೨.೩೦ಕ್ಕೆ ಸ್ಥಳೀಯ ಕಾರ್ಯಕ್ರಗಳಲ್ಲಿ ಪಾಲ್ಗೊಳ್ಳುವರು. ರಾತ್ರಿ ೯ ಗಂಟೆಗೆ ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು.
ಕ್ರೀಡಾಕೂಟದಲ್ಲಿ ಭಾಗವಹಿಸುವ ನೌಕರರು ಹೆಸರು ನೋಂದಾಯಿಸಲು ಮನವಿ
ನಾಳೆ ಸರ್ಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟ
ಯಾದಗಿರಿ, ಜನವರಿ ೦೨ (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಉದ್ಘಾಟನಾ ಕಾರ್ಯಕ್ರಮವನ್ನು ಜನವರಿ ೪ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಯಾದಗಿರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ಅವರು ಧ್ವಜಾರೋಹಣ ನೆರವೇರಿಸುವರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಸೋನವಣೆ ಅವರು ಕ್ರೀಡಾಜ್ಯೋತಿ ಸ್ವೀಕಾರ ಮಾಡುವರು.
ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಮಹಿಪಾಲರಡ್ಡಿ ಮಾಲಿಪಾಟೀಲ್ ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷರಾದ ಪರಮರಡ್ಡಿ ಕಂದಕೂರ, ಕೋಶಾಧ್ಯಕ್ಷರಾದ ಯಾಮರಡ್ಡಿ, ಕಾರ್ಯಾಧ್ಯಕ್ಷರಾದ ಆರ್.ಎಂ.ನಾಟೇಕಾರ, ರಾಜ್ಯ ಪರಿಷತ್ ಸದಸ್ಯರಾದ ಸಂತೋಷ ನೀರಟಿ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಹಿರಿಯ ಉಪಾಧ್ಯಕ್ಷರಾದ ರಾಚಣ್ಣಗೌಡ, ಬಸವರಾಜ ಕೆರೂಟಗಿ ಅವರು ಅತಿಥಿಗಳಾಗಿ ಆಗಮಿಸುವರು.
ಹೆಸರು ನೋಂದಾಯಿಸಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಜನವರಿ ೪ ಮತ್ತು ೫ರಂದು ಹಮ್ಮಿಕೊಳ್ಳಲಾಗಿದೆ. ಭಾಗವಹಿಸುವ ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರು ತಮ್ಮ ಹೆಸರುಗಳನ್ನು ನೋಂದಾಯಿಸಲು ಜಿಲ್ಲಾ ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಸಾಬರೆಡ್ಡಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಚೆನ್ನಬಸಪ್ಪ ಕುಳಗೇರಿ ಅವರನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ಕೋರಲಾಗಿದೆ.
ಜ.೧೩ರಂದು ಜಿ.ಪಂ ಕೆಡಿಪಿ ಸಭೆ
ಯಾದಗಿರಿ, ಜನವರಿ ೦೨ (ಕರ್ನಾಟಕ ವಾರ್ತೆ): ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಜಶೇಖರಗೌಡ ಪಾಟೀಲ್ ವಜ್ಜಲ್ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ (ಕೆಡಿಪಿ)ಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ಜನವರಿ ೧೩ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚೊಚ್ಚಲ ಕೃತಿ ಪ್ರಕಟಿಸಲು ಪ್ರೋತ್ಸಾಹಧನ: ಅರ್ಜಿ ಆಹ್ವಾನ
ಯಾದಗಿರಿ, ಜನವರಿ ೦೨ (ಕರ್ನಾಟಕ ವಾರ್ತೆ): ಕನ್ನಡ ಪುಸ್ತಕ ಪ್ರಾಧಿಕಾರದಿಂದ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಯುವ ಬರಹಗಾರರಿಗೆ ಕನ್ನಡದ ಚೊಚ್ಚಲ ಕೃತಿ ಪ್ರಕಟಣೆಗಾಗಿ ೨೫,೦೦೦ ರೂ.ಗಳ ಪ್ರೋತ್ಸಾಹಧನ ನೀಡಲಾಗುತ್ತಿದ್ದು, ಇದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್‌ಸಿಂಗ್ ಅವರು ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕಡ್ಡಾಯವಾಗಿ ತಮ್ಮ ಆರ್.ಡಿ. ನಂಬರ್ ಇರುವ ಜಾತಿ ಪ್ರಮಾಣಪತ್ರ, ಆಧಾರ್ ಕಾರ್ಡ್, ಪಡಿತರ ಚೀಟಿ, ಪ್ಯಾನ್‌ಕಾರ್ಡ್ ಜಿರಾಕ್ಸ್ ಪ್ರತಿ, ವಯಸ್ಸಿನ ದೃಢೀಕರಣಕ್ಕಾಗಿ ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷಾ ಪ್ರಮಾಣಪತ್ರದ ಪ್ರತಿಯನ್ನು ಗೆಜೆಡೆಟ್ ಅಧಿಕಾರಿಗಳಿಂದ ದೃಢೀಕರಿಸಿದ ಪ್ರತಿಗಳನ್ನು ಸಲ್ಲಿಸಬೇಕು. ಎ೪ ಸೈಜ್ ಹಾಳೆಯಲ್ಲಿ ಕನಿಷ್ಠ ೧೦೦ ಪುಟಗಳಿರುವ ಡಿಟಿಪಿ ಮಾಡಿದ ಕೃತಿಯನ್ನು ಸಲ್ಲಿಸಬೇಕು. ವಯೋಮಿತಿ ೧೮ ರಿಂದ ೪೦ ವರ್ಷದೊಳಗಿರಬೇಕು.
ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಕನ್ನಡ ಸಾಹಿತ್ಯ ಪ್ರಕಾರಗಳಲ್ಲಿ ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶೆ, ಲೇಖನ, ಲಲಿತ ಪ್ರಬಂಧ, ಮಕ್ಕಳ ಸಾಹಿತ್ಯ ಮತ್ತು ಪ್ರಬಂಧ (ಜೀವನ ಚರಿತ್ರೆ, ಪ್ರವಾಸ ಕಥನ ಮತ್ತು ಅಂಕಣ ಬರಹ), ಸಾಹಿತ್ಯ ಮಾನವಿಕ, ವಿಜ್ಞಾನ, ವಿಚಾರ ಹಾಗೂ ಇತರೆ ಜ್ಞಾನ ಶಿಸ್ತುಗಳ ವಿಚಾರಗಳಿಗೆ ಸಂಬAಧಿಸಿರಬೇಕು. ಅನುವಾದಗಳನ್ನು, ಪಠ್ಯ ಪುಸ್ತಕಗಳನ್ನು, ಅಭಿನಂದನಾ ಗ್ರಂಥಗಳನ್ನು ಹಾಗೂ ಬೇರಾವುದೇ ಪದವಿಗಾಗಿ ಸಿದ್ಧಪಡಿಸಿರುವ ಪ್ರಬಂಧಗಳನ್ನು, ಯಾವುದೇ ಧರ್ಮ, ದೇವರು, ಜಾತಿ ಕೋಮು, ವೃತ್ತಿ ಸಮುದಾಯ, ಭಾಷೆ, ಆಚರಣೆ, ಪದ್ಧತಿ, ನಿರ್ದಿಷ್ಟ ಸಂಗತಿ, ರಾಷ್ಟಿçÃಯ ನಾಯಕರು ಮುಂತಾದವುಗಳ ಕುರಿತು ನೇರವಾಗಿಯೇ ಅಥವಾ ಪರೋಕ್ಷಗಾಗಿಯೇ ಆಗಲಿ ಮನನೋಯಿಸುವಂತಹ ಹಾಗೂ ರಾಷ್ಟಿçÃಯ ಭಾವೈಕ್ಯತೆಗಳಿಗೆ ಧಕ್ಕೆ ತರುವಂತಹ ಪ್ರಸ್ತಾಪ ಆಗಿದ್ದಲ್ಲಿ ಅವುಗಳನ್ನು ಪರಿಗಣಿಸುವುದಿಲ್ಲ.
ಪ್ರಾಧಿಕಾರಕ್ಕೆ ಸಲ್ಲಿಸಲ್ಪಡುವ ಅರ್ಜಿಗಳನ್ನು/ ಹಸ್ತಪ್ರತಿಗಳನ್ನು ಹಿಂದಿರುಗಿಸಲಾಗುವುದಿಲ್ಲ. ಭರ್ತಿ ಮಾಡಿದ ಅರ್ಜಿಗಳನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-೫೬೦೦೦೨ ಈ ವಿಳಾಸಕ್ಕೆ ಜನವರಿ ೨೫ರೊಳಗಾಗಿ ಸಲ್ಲಿಸಬೇಕು. ಪ್ರಾಧಿಕಾರದ www.kannadapustakapradhikara.com ವೆಬ್‌ಸೈಟ್ ಅಥವಾ ಮೇಲ್ಕಂಡ ಕಚೇರಿ ವಿಳಾಸಕ್ಕೆ ಅಥವಾ ಕಚೇರಿ ದೂರವಾಣಿ ಸಂಖ್ಯೆ ೦೮೦-೨೨೪೮೪೫೧೬, ೨೨೦೧೭೭೦೪ ಸಂಪರ್ಕಿಸಲು ಕೋರಲಾಗಿದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...