ಸೋಮವಾರ, ಜನವರಿ 20, 2020

ಇಂದು ಕಾನೂನು ಸಾಕ್ಷರತಾ ರಥಕ್ಕೆ ಚಾಲನೆ
ಯಾದಗಿರಿ, ಜನವರಿ ೨೦ (ಕರ್ನಾಟಕ ವಾರ್ತೆ): ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪೊಲೀಸ್ ಇಲಾಖೆ, ಜಿಲ್ಲಾ ವಕೀಲರ ಸಂಘ, ಕಂದಾಯ ಇಲಾಖೆ, ತಾಲ್ಲೂಕು ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಯಾದಗಿರಿ/ಗುರುಮಠಕಲ್ ಶಿಶು ಅಭಿವೃದ್ಧಿ ಯೋಜನೆಗಳ ಸಂಯುಕ್ತಾಶ್ರದಲ್ಲಿ ಕಾನೂನು ಸಾಕ್ಷರತಾ ರಥ ಹಾಗೂ ಸಂಚಾರಿ ಜನತಾ ನ್ಯಾಯಾಲಯದ ಅಭಿಯಾನವನ್ನು ಯಾದಗಿರಿ ತಾಲ್ಲೂಕಿನಲ್ಲಿ ಜನವರಿ ೨೧ರಿಂದ ೨೪ರವರೆಗೆ ಹಮ್ಮಿಕೊಳ್ಳಲಾಗಿದೆ.
ಜನವರಿ ೨೧ರಂದು ಬೆಳಿಗ್ಗೆ ೧೦ ಗಂಟೆಗೆ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಅಭಿಯಾನಕ್ಕೆ ಚಾಲನೆ ನೀಡುವರು. ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಶಿವನಗೌಡ ಅವರು ಅಧ್ಯಕ್ಷತೆ ವಹಿಸುವರು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಮುಖ್ಯ ನ್ಯಾಯಿಕ ದಂಡಾಧಿಕಾರಿಗಳಾದ ನಾಮದೇವ ಕೆ.ಸಾಲಮಂಟಪಿ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಶ ಅರ್ಜುನ ಬನಸೊಡೆ, ಸಿವಿಲ್ ನ್ಯಾಯಾಧೀಶರಾದ ಲೋಕೇಶ್ ಧನಪಾಲ ಹವಲೆ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಸ್ಮೀತಾ ಮಾಲಗಾಂವೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಸೋನವಣೆ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಬಸವರಾಜ ಪಾಟೀಲ್ ಕ್ಯಾತನಾಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಪ್ರಭಾಕರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ದೊಡ್ಡಪ್ಪ ಎಂ.ಹೊಸಮನಿ ಅವರು ಮುಖ್ಯ ಅತಿಥಿಗಳಾಗಿ ಆಗಮಿಸುವರು.
ಸರ್ಕಾರಿ ಅಭಿಯೋಜಕರಾದ ಜಿ.ಸುದರ್ಶನ್, ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರಾದ ವಿಶ್ವನಾಥ ಉಭಾಳೆ, ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಶಾರಾಭಾಯ್, ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಕಾAತ ರೆಡ್ಡಿ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯರಾದ ಸಿ.ಎಸ್. ಮಾಲಿಪಾಟೀಲ್, ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷರಾದ ನಾಗಯ್ಯ ಗುತ್ತೇದಾರ ಅವರು ಅತಿಥಿಗಳಾಗಿ ಪಾಲ್ಗೊಳ್ಳುವರು.
ಮುದ್ನಾಳ ಗ್ರಾಮ ಪಂಚಾಯಿತಿ: ಜನವರಿ ೨೧ರಂದು ಬೆಳಿಗ್ಗೆ ೧೧ ಗಂಟೆಗೆ ಮುದ್ನಾಳ ಗ್ರಾಮ ಪಂಚಾಯಿತಿಯಲ್ಲಿ ಅಭಿಯಾನದ ಕಾರ್ಯಕ್ರಮ ನಡೆಯಲಿದ್ದು, ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಶಿವನಗೌಡ ಅವರು ಉದ್ಘಾಟಿಸುವರು. ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಂಜುಳಾ ಥಾನು ಅವರು ಅಧ್ಯಕ್ಷತೆ ವಹಿಸುವರು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಶಾರಾಭಾಯ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಬಸವರಾಜ ಪಾಟೀಲ್ ಕ್ಯಾತನಾಳ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ವಕೀಲರಾದ ಬಿ.ಜಿ.ಪಾಟೀಲ್ ಮತ್ತು ಸಾವಿತ್ರಿ ಪಾಟೀಲ್ ಅವರು ಉಪನ್ಯಾಸ ನೀಡುವರು.
ಬಸವಂತಪುರ: ಜನವರಿ ೨೧ರಂದು ಮಧ್ಯಾಹ್ನ ೨ ಗಂಟೆಗೆ ಬಸವಂತಪುರ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಅಭಿಯಾನದ ಕಾರ್ಯಕ್ರಮ ನಡೆಯಲಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಕಾAತ ರೆಡ್ಡಿ ಉದ್ಘಾಟಿಸುವರು. ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಪ್ರೇಮಕುಮಾರ ಚವ್ಹಾಣ ಅವರು ಅಧ್ಯಕ್ಷತೆ ವಹಿಸುವರು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಶ ಅರ್ಜುನ ಬನಸೊಡೆ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಬಸವರಾಜ ಪಾಟೀಲ್ ಕ್ಯಾತನಾಳ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯರಾದ ಸಿ.ಎಸ್. ಮಾಲಿಪಾಟೀಲ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ವಕೀಲರಾದ ಕಲ್ಲಪ್ಪ ಬಿ.ಅಂಗಡಿ ಮತ್ತು ಆನಂದ ಸ್ವಾಮಿ ಅವರು ಉಪನ್ಯಾಸ ನೀಡುವರು.
ಅರಕೇರಾ ಬಿ: ಜನವರಿ ೨೧ರಂದು ಸಂಜೆ ೫ ಗಂಟೆಗೆ ಅರಕೇರಾ (ಬಿ) ಗ್ರಾಮ ಪಂಚಾಯಿತಿಯಲ್ಲಿ ಅಭಿಯಾನದ ಕಾರ್ಯಕ್ರಮ ನಡೆಯಲಿದ್ದು, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಮುಖ್ಯ ನ್ಯಾಯಿಕ ದಂಡಾಧಿಕಾರಿಗಳಾದ ನಾಮದೇವ ಕೆ.ಸಾಲಮಂಟಪಿ ಅವರು ಉದ್ಘಾಟಿಸುವರು. ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಪ್ರೇಮಕುಮಾರ ಚವ್ಹಾಣ ಅಧ್ಯಕ್ಷತೆ ವಹಿಸುವರು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಶ ಅರ್ಜುನ ಬನಸೊಡೆ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಬಸವರಾಜ ಪಾಟೀಲ್ ಕ್ಯಾತನಾಳ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯರಾದ ಸಿ.ಎಸ್. ಮಾಲಿಪಾಟೀಲ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ವಕೀಲರಾದ ಆರ್.ಎಸ್ ಪಾಟೀಲ್ ಮತ್ತು ಶಾಂತಪ್ಪ ಜಾಧವ್ ಅವರು ಉಪನ್ಯಾಸ ನೀಡುವರು.

ಇಂದು ನಿಜಶರಣ ಅಂಬಿಗರ ಚೌಡಯ್ಯ ಜಯಂತಿ
ಯಾದಗಿರಿ, ಜನವರಿ ೨೦ (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರ ಸಭೆ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಜಯಂತ್ಯೋತ್ಸವ ಸಮಿತಿ ಸಂಯುಕ್ತಾಶ್ರದಲ್ಲಿ ಶ್ರೀ ನಿಜಶರಣ ಅಂಬಿಗರ ಚೌಡಯ್ಯರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಕಾರ್ಯಕ್ರಮವನ್ನು ಜನವರಿ ೨೧ರಂದು ಬೆಳಿಗ್ಗೆ ೧೧ ಗಂಟೆಗೆ ಯಾದಗಿರಿ ನಗರದ ಜಿಲ್ಲಾಡಳಿತ ಭವನ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದೆ.
ಪಶುಸಂಗೋಪನೆ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಬಿ.ಚವ್ಹಾಣ್ ಅವರು ಉದ್ಘಾಟಿಸುವರು. ವಿಧಾನಸಭಾ ಸದಸ್ಯರಾದ ವೆಂಕಟರೆಡ್ಡಿಗೌಡ ಮುದ್ನಾಳ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತ ಅಧ್ಯಕ್ಷರಾದ ರಾಜಶೇಖರಗೌಡ ಪಾಟೀಲ ವಜ್ಜಲ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಲೋಕಸಭಾ ಸದಸ್ಯರಾದ ರಾಜಾ ಅಮರೇಶ್ವರ ನಾಯಕ, ಡಾ.ಉಮೇಶ ಜಿ.ಜಾಧವ ಅತಿಥಿಗಳಾಗಿ ಭಾಗವಹಿಸುವರು. ವಿಧಾನಸಭಾ ಸದಸ್ಯರಾದ ಶರಣಬಸಪ್ಪಗೌಡ ದರ್ಶನಾಪೂರ, ನರಸಿಂಹ ನಾಯಕ (ರಾಜುಗೌಡ), ನಾಗನಗೌಡ ಕಂದಕೂರ, ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ ಪಾಟೀಲ, ಶರಣಪ್ಪ ಮಟ್ಟೂರ, ಬಿ.ಜಿ.ಪಾಟೀಲ್, ಜಿಲ್ಲಾ ಪಂಚಾಯತ ಉಪಾಧ್ಯಕ್ಷರಾದ ಗಿರಿಜಮ್ಮ ಸದಾಶಿವಪ್ಪಗೌಡ ರೋಟ್ನಡಗಿ, ತಾಲ್ಲೂಕು ಪಂಚಾಯತ ಅಧ್ಯಕ್ಷರಾದ ಭೀಮವ್ವ ಮಲ್ಲೇಶಪ್ಪ ಅಚ್ಚೋಲಾ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು. ಅಲ್ಲೂರ (ಬಿ) ಸರ್ಕಾರಿ ಪ್ರೌಢಶಾಲೆಯ ಅಧ್ಯಾಪಕರಾದ ಶಿವಕುಮಾರ ಕಟ್ಟಿಮನಿ ವಿಶೇಷ ಉಪನ್ಯಾಸ ನೀಡುವರು.

ಬೆಳೆ ಸಮೀಕ್ಷೆ: ಆಕ್ಷೇಪಣೆ ಸಲ್ಲಿಕೆಗೆ ಅವಕಾಶ
ಯಾದಗಿರಿ, ಜನವರಿ ೨೦ (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಬೆಳೆ ಸಮೀಕ್ಷೆ ಮೂಲಕ ಸಂಗ್ರಹಿಸಲಾದ ಬೆಳೆ ಮಾಹಿತಿ ಕುರಿತು ಆಕ್ಷೇಪಣೆಗಳನ್ನು ಸಲ್ಲಿಸಲು “ಬೆಳೆ ದರ್ಶಕ್” ಮೊಬೈಲ್ ಆ್ಯಪ್ ಅಭಿವೃದ್ಧಿಪಡಿಸಲಾಗಿದ್ದು, ರೈತರಿಂದ ಆಕ್ಷೇಪಣೆ ಸಲ್ಲಿಕೆಗೆ ಜನವರಿ ೩೦ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರಾದ ಆರ್.ದೇವಿಕಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರೈತರು ಬೆಳೆ ದರ್ಶಕ್ ಮೊಬೈಲ್ ಆ್ಯಪ್ ಅಥವಾ ಬೆಳೆ ಸಮೀಕ್ಷೆ ತಂತ್ರಾAಶದ ಮೂಲಕ ಬೆಳೆ ಮಾಹಿತಿ/ವಿಸ್ತೀರ್ಣದ ಮಾಹಿತಿ ಕುರಿತು ಆಕ್ಷೇಪಣೆ ಸಲ್ಲಿಸಬಹುದು. ಇದಲ್ಲದೆ ರೈತರು ಲಿಖಿತವಾಗಿ ರೈತ ಸಂಪರ್ಕ ಕೇಂದ್ರಗಳಿಗೆ ಆಕ್ಷೇಪಣೆ ಸಲ್ಲಿಸಬಹುದು.
ಬೆಳೆ ಸಮೀಕ್ಷೆ ಮಾಹಿತಿ ಪ್ರಕಾರ ಯಾವುದೇ ಬೆಳೆ ಮಾಹಿತಿ ಲಭ್ಯವಿಲ್ಲದ ರೈತರು ತಾವು ಬೆಳೆ ಬೆಳೆದಿರುವುದಾಗಿ ಆಕ್ಷೇಪಣೆ ವ್ಯಕ್ತಪಡಿಸಬಹುದು. ಬೆಳೆ ಮಾಹಿತಿ ಪ್ರಕಾರ ಪಾಳು/ ಕಟಾವಾದ ಪ್ರದೇಶ ಎಂದು ನಮೂದಿಸಿದ್ದು, ರೈತರು ತಾವು ಬೆಳೆ ಬೆಳೆದಿರುವುದಾಗಿ ಆಕ್ಷೇಪಣೆ ವ್ಯಕ್ತಪಡಿಸಬಹುದು. ದಾಖಲಾಗುವ ಎಲ್ಲ ದೂರುಗಳನ್ನು ಸಂಬAಧಪಟ್ಟ ಮೇಲ್ವಿಚಾರಕರಿಗೆ ತಂತ್ರಾAಶದಲ್ಲಿ ಗುರುತಿಸಲಾಗುವುದು. ಆಕ್ಷೇಪಣೆಗಳನ್ನು ಪರಿಶೀಲಿಸಿ ೭ ದಿನದ ಒಳಗೆ ಇತ್ಯರ್ಥಪಡಿಸಲಾಗುವುದು. ಬೆಳೆ ಮಾಹಿತಿ ಆಧಾರದ ಮೇಲೆ ಇತ್ಯರ್ಥಪಡಿಸಲು ಸಾಧ್ಯವಿಲ್ಲದ ಸನ್ನಿವೇಶದಲ್ಲಿ ಮೇಲ್ವಿಚಾರಕರು ಖುದ್ದಾಗಿ ಸ್ಥಳ ಪರಿಶೀಲನೆ ನಡೆಸಿ ಮಹಜರು ಪಡಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ನಾಳೆ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟನೆ
ಯಾದಗಿರಿ, ಜನವರಿ ೨೦ (ಕರ್ನಾಟಕ ವಾರ್ತೆ): ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ೨೦೧೯-೨೦ನೇ ಸಾಲಿನ ಜಿಲ್ಲಾ ಮಟ್ಟದ ಇನ್‌ಸ್ಪೆöÊರ್ ಆವಾರ್ಡ್ (ಮಾನಕ್) ವಿಜ್ಞಾನ ವಸ್ತು ಪ್ರದರ್ಶನ ಹಾಗೂ ಪ್ರಾಜೆಕ್ಟ್ ಸ್ಪರ್ಧೆ ಉದ್ಘಾಟನೆ ಕಾರ್ಯಕ್ರಮವನ್ನು ಜನವರಿ ೨೨ರಂದು ಬೆಳಿಗ್ಗೆ ೧೧.೩೦ ಗಂಟೆಗೆ ಯಾದಗಿರಿ ನಗರದ ಚಿತ್ತಾಪುರ ರಸ್ತೆ ಮಾರ್ಗದಲ್ಲಿರುವ ಆದರ್ಶ ವಿದ್ಯಾಲಯದಲ್ಲಿ ಆಯೋಜಿಸಲಾಗಿದೆ.
ವಿಜ್ಞಾನ ವಸ್ತು ಪ್ರದರ್ಶನ ಹಾಗೂ ಪ್ರಾಜೆಕ್ಟ್ ಸ್ಪರ್ಧೆ ಎರಡು ದಿನ ನಡೆಯಲಿದ್ದು, ಪಶುಸಂಗೋಪನೆ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಬಿ.ಚವ್ಹಾಣ್ ಅವರು ಉದ್ಘಾಟಿಸುವರು. ವಿಧಾನಸಭಾ ಸದಸ್ಯರಾದ ವೆಂಕಟರೆಡ್ಡಿಗೌಡ ಮುದ್ನಾಳ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತ ಅಧ್ಯಕ್ಷರಾದ ರಾಜಶೇಖರಗೌಡ ಪಾಟೀಲ ವಜ್ಜಲ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಲೋಕಸಭಾ ಸದಸ್ಯರಾದ ರಾಜಾ ಅಮರೇಶ್ವರ ನಾಯಕ, ಡಾ.ಉಮೇಶ ಜಿ.ಜಾಧವ ಅತಿಥಿಗಳಾಗಿ ಭಾಗವಹಿಸುವರು.
ವಿಧಾನಸಭಾ ಸದಸ್ಯರಾದ ಶರಣಬಸಪ್ಪಗೌಡ ದರ್ಶನಾಪೂರ, ನರಸಿಂಹ ನಾಯಕ (ರಾಜುಗೌಡ), ನಾಗನಗೌಡ ಕಂದಕೂರ, ವಿಧಾನ ಪರಿಷತ್ ಸದಸ್ಯರಾದ ಶರಣಪ್ಪ ಮಟ್ಟೂರ, ಡಾ.ಚಂದ್ರಶೇಖರ ಪಾಟೀಲ, ಬಿ.ಜಿ.ಪಾಟೀಲ್, ಜಿಲ್ಲಾ ಪಂಚಾಯತ ಉಪಾಧ್ಯಕ್ಷರಾದ ಗಿರಿಜಮ್ಮ ಸದಾಶಿವಪ್ಪಗೌಡ ರೋಟ್ನಡಗಿ, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶಿವಲಿಂಗಪ್ಪ ಪುಟಗಿ, ತಾಲ್ಲೂಕು ಪಂಚಾಯತ ಅಧ್ಯಕ್ಷರಾದ ಭೀಮವ್ವ ಮಲ್ಲೇಶಪ್ಪ ಅಚ್ಚೋಲಾ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು. ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಋಷಿಕೇಶ ಭಗವಾನ್ ಸೋನವಣೆ ಅವರು ಗೌರವಾನ್ವಿತ ಆಹ್ವಾನಿತರಾಗಿ ಪಾಲ್ಗೊಳ್ಳುವರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...