ಗುರುವಾರ, ಜನವರಿ 16, 2020

ಇಂದು ಪೂರ್ವಭಾವಿ ಸಭೆ
ಯಾದಗಿರಿ, ಜನವರಿ ೧೬ (ಕರ್ನಾಟಕ ವಾರ್ತೆ): ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾನೂನು ಸಾಕ್ಷರತಾ ಸಂಚಾರಿ ರಥ ಮತ್ತು ಜನತಾ ನ್ಯಾಯಾಲಯದ ಸಂಚಾರಿ ವಾಹನವು ಜಿಲ್ಲೆಯಲ್ಲಿ ಜನವರಿ ೨೧ರಿಂದ ಫೆಬ್ರುವರಿ ೭ರವರೆಗೆ ಸಂಚರಿಸಲಿದ್ದು, ಕಾನೂನು ಸಾಕ್ಷರತಾ ಕಾರ್ಯಕ್ರಮವನ್ನು ಯಶಸ್ವಿಯಾಗಿಸುವ ನಿಟ್ಟಿನಲ್ಲಿ ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆಯನ್ನು ಜನವರಿ ೧೭ರಂದು ಸಂಜೆ ೫ ಗಂಟೆಗೆ ಜಿಲ್ಲಾ ನ್ಯಾಯಾಲಯದಲ್ಲಿ ಕರೆಯಲಾಗಿದೆ.

ಇಂದು ಜಿ.ಪಂ ಸಾಮಾನ್ಯ ಸಭೆ
ಯಾದಗಿರಿ, ಜನವರಿ ೧೬ (ಕರ್ನಾಟಕ ವಾರ್ತೆ): ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಜಶೇಖರಗೌಡ ಪಾಟೀಲ್ ವಜ್ಜಲ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯನ್ನು ಜನವರಿ ೧೭ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪತ್ರಕರ್ತರ ಬಸ್‌ಪಾಸ್ ಅವಧಿ ವಿಸ್ತರಣೆ
ಯಾದಗಿರಿ, ಜನವರಿ ೧೬ (ಕರ್ನಾಟಕ ವಾರ್ತೆ): ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಮಾನ್ಯತೆ ಕಾರ್ಡ್ ಹೊಂದಿದ ಪತ್ರಕರ್ತರ ಬಸ್ ಪಾಸ್ ಅವಧಿಯನ್ನು ಫೆಬ್ರುವರಿ ೨೯ರವರೆಗೆ ವಿಸ್ತರಿಸಲಾಗಿದೆ ಎಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಸಂತೋಷ ಗೋಗೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಮಾನ್ಯತೆ ಕಾರ್ಡ್ ಪಡೆದ ಪತ್ರಕರ್ತರಿಗೆ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿAದ ವಿತರಿಸಲಾಗಿರುವ ಸ್ಮಾರ್ಟ್ಕಾರ್ಡ್ ಬಸ್ ಪಾಸ್‌ಗಳ ಮಾನ್ಯತಾ ಅವಧಿಯು ಕಳೆದ ಡಿಸೆಂಬರ್ ೩೧ರಂದು ಮುಕ್ತಾಯವಾಗಿರುತ್ತದೆ. ಸ್ಮಾರ್ಟ್ಕಾರ್ಡ್ಗಳ ಮಾನ್ಯತಾ ಅವಧಿಯು ನವೀಕರಣ ಮಾಡಬೇಕಾಗಿದ್ದು, ಮುದ್ರಣ ಕಾರ್ಯ ವಿಳಂಬವಾಗುತ್ತಿರುವ ಹಿನ್ನಲೆಯಲ್ಲಿ ಈಗಾಗಲೇ ವಿತರಣೆಯಾಗಿರುವ ಸ್ಮಾರ್ಟ್ಕಾರ್ಡ್ಗಳನ್ನು ಬರುವ ಫೆಬ್ರುವರಿ ೨೯ರವರೆಗೆ ಸಂಸ್ಥೆಯ ಬಸ್‌ಗಳಲ್ಲಿ ಅನುಮತಿಸಲು ತೀರ್ಮಾನಿಸಲಾಗಿದೆ. ಈ ಕುರಿತಂತೆ ಎಲ್ಲಾ ಚಾಲನಾ ಮತ್ತು ಸಂಚಾರ ಸಿಬ್ಬಂದಿಗಳಿಗೆ ತಿಳುವಳಿಕೆ ನೀಡಲಾಗಿದ್ದು, ಮಾನ್ಯತೆ ಕಾರ್ಡ್ ಹೊಂದಿದ ಪತ್ರಕರ್ತರು ಸದುಪಯೋಗ ಪಡೆದುಕೊಳ್ಳುವಂತೆ ಕೋರಿದ್ದಾರೆ.
ಜ.೧೯ರಂದು ಮಹಾಯೋಗಿ ವೇಮನ ಜಯಂತಿ
ಯಾದಗಿರಿ, ಜನವರಿ ೧೬ (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಶ್ರೀ ಮಹಾಯೋಗಿ ವೇಮನ ಜಯಂತ್ಯೋತ್ಸವ ಸಮಿತಿ ಸಂಯುಕ್ತಾಶ್ರಯದಲ್ಲಿ ಶ್ರೀ ಮಹಾಯೋಗಿ ವೇಮನರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಕಾರ್ಯಕ್ರಮವನ್ನು ಜನವರಿ ೧೯ರಂದು ಬೆಳಿಗ್ಗೆ ೧೧ ಗಂಟೆಗೆ ಯಾದಗಿರಿ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದೆ.
ಪಶುಸಂಗೋಪನೆ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಬಿ.ಚವ್ಹಾಣ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ವಿಧಾನಸಭಾ ಸದಸ್ಯರಾದ ವೆಂಕಟರೆಡ್ಡಿಗೌಡ ಮುದ್ನಾಳ ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಜಶೇಖರಗೌಡ ಪಾಟೀಲ್ ವಜ್ಜಲ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಲೋಕಸಭಾ ಸದಸ್ಯರಾದ ರಾಜಾ ಅಮರೇಶ್ವರ ನಾಯಕ ಅವರು ಅತಿಥಿಗಳಾಗಿ ಆಗಮಿಸುವರು.
ವಿಧಾನಸಭಾ ಸದಸ್ಯರಾದ ಶರಣಬಸಪ್ಪಗೌಡ ದರ್ಶನಾಪೂರ, ನರಸಿಂಹ ನಾಯಕ (ರಾಜುಗೌಡ), ನಾಗನಗೌಡ ಕಂದಕೂರ, ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ ಪಾಟೀಲ, ಶರಣಪ್ಪ ಮಟ್ಟೂರ, ಬಿ.ಜಿ.ಪಾಟೀಲ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಗಿರಿಜಮ್ಮ ಸದಾಶಿವಪ್ಪಗೌಡ ರೊಟ್ನಡಗಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಭೀಮವ್ವ ಮಲ್ಲೇಶಪ್ಪ ಅಚ್ಚೋಲಾ ಅವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು. ಶಿಕ್ಷಕರಾದ ಸುರೇಶ ಅವರು ವಿಶೇಷ ಉಪನ್ಯಾಸ ನೀಡುವರು.

ಜ.೨೦ರಂದು ಮುಂಗಡಪತ್ರ ಪೂರ್ವಭಾವಿ ಸಭೆ
ಯಾದಗಿರಿ, ಜನವರಿ ೧೬ (ಕರ್ನಾಟಕ ವಾರ್ತೆ): ಯಾದಗಿರಿ ನಗರಸಭೆಯ ೨೦೨೦-೨೧ನೇ ಸಾಲಿನ ಮುಂಗಡ ಪತ್ರವನ್ನು ತಯಾರಿಸಲು ಪೂರ್ವಭಾವಿಯಾಗಿ ಸಲಹೆ-ಸೂಚನೆ ಪಡೆಯಲು ಆಡಳಿತಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರ ಅಧ್ಯಕ್ಷತೆಯಲ್ಲಿ ಸಾರ್ವಜನಿಕರು, ನಗರಸಭೆ ಪ್ರತಿನಿಧಿಗಳು, ಜನಪ್ರತಿನಿಧಿಗಳು, ನೋಂದಾಯಿತ ಸ್ಥಳೀಯ ಸಂಘ-ಸAಸ್ಥೆಗಳು, ವ್ಯಾಪಾರ ಮತ್ತು ಉದ್ಯಮ ಸಂಸ್ಥೆಗಳು, ಎನ್‌ಜಿಒ ಹಾಗೂ ಸ್ಥಳೀಯ ನಾಗರಿಕರ ಸಭೆಯನ್ನು ಜನವರಿ ೨೦ರಂದು ಸಂಜೆ ೪ ಗಂಟೆಗೆ ನಗರಸಭೆಯ ಸಭಾಂಗಣದಲ್ಲಿ ಕರೆಯಲಾಗಿದೆ ಎಂದು ಪೌರಾಯುಕ್ತರಾದ ರಮೇಶ ಸುಣಗಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜ.೨೧ರಂದು ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ
ಯಾದಗಿರಿ, ಜನವರಿ ೧೬ (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಜಯಂತ್ಯೋತ್ಸವ ಸಮಿತಿ ಸಂಯುಕ್ತಾಶ್ರಯದಲ್ಲಿ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಕಾರ್ಯಕ್ರಮವನ್ನು ಜನವರಿ ೨೧ರಂದು ಬೆಳಿಗ್ಗೆ ೧೧ ಗಂಟೆಗೆ ಯಾದಗಿರಿ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದೆ.
ಪಶುಸಂಗೋಪನೆ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಬಿ.ಚವ್ಹಾಣ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ವಿಧಾನಸಭಾ ಸದಸ್ಯರಾದ ವೆಂಕಟರೆಡ್ಡಿಗೌಡ ಮುದ್ನಾಳ ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಜಶೇಖರಗೌಡ ಪಾಟೀಲ್ ವಜ್ಜಲ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಲೋಕಸಭಾ ಸದಸ್ಯರಾದ ರಾಜಾ ಅಮರೇಶ್ವರ ನಾಯಕ, ಡಾ.ಉಮೇಶ ಜಿ.ಜಾಧವ ಅವರು ಅತಿಥಿಗಳಾಗಿ ಆಗಮಿಸುವರು.
ವಿಧಾನಸಭಾ ಸದಸ್ಯರಾದ ಶರಣಬಸಪ್ಪಗೌಡ ದರ್ಶನಾಪೂರ, ನರಸಿಂಹ ನಾಯಕ (ರಾಜುಗೌಡ), ನಾಗನಗೌಡ ಕಂದಕೂರ, ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ ಪಾಟೀಲ, ಶರಣಪ್ಪ ಮಟ್ಟೂರ, ಬಿ.ಜಿ.ಪಾಟೀಲ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಗಿರಿಜಮ್ಮ ಸದಾಶಿವಪ್ಪಗೌಡ ರೊಟ್ನಡಗಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಭೀಮವ್ವ ಮಲ್ಲೇಶಪ್ಪ ಅಚ್ಚೋಲಾ ಅವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು. ಅಲ್ಲೂರ (ಬಿ) ಸರ್ಕಾರಿ ಪ್ರೌಢಶಾಲಾ ಅಧ್ಯಾಪಕರಾದ ಶಿವಕುಮಾರ ಕಟ್ಟಿಮನಿ ಅವರು ವಿಶೇಷ ಉಪನ್ಯಾಸ ನೀಡುವರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...