ಉಪ ಲೋಕಾಯುಕ್ತರ ಪ್ರವಾಸ
ಯಾದಗಿರಿ, ಜನವರಿ ೨೨ (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಅವರು ಜನವರಿ ೨೫ರಂದು ಯಾದಗಿರಿ ಜಿಲ್ಲೆಗೆ ಆಗಮಿಸಲಿದ್ದು, ಬೆಳಿಗ್ಗೆ ೯.೩೦ ಗಂಟೆಗೆ ಜಿಲ್ಲೆಯ ಭೀಮರಾಯನಗುಡಿ ಕೃಷಿ ಮಹಾವಿದ್ಯಾಲಯದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಬೆಳಿಗ್ಗೆ ೧೧.೩೦ ಗಂಟೆಗೆ ಹೈದರಾಬಾದ್‌ಗೆ ತೆರಳಿ ಅಲ್ಲಿಂದ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು.
ವಿವಿಧ ಗ್ರಾಮಗಳಲ್ಲಿ ಕಾನೂನು ಸಾಕ್ಷರತಾ ರಥ ಸಂಚಾರ
ಯಾದಗಿರಿ, ಜನವರಿ ೨೨ (ಕರ್ನಾಟಕ ವಾರ್ತೆ): ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪೊಲೀಸ್ ಇಲಾಖೆ, ಜಿಲ್ಲಾ ವಕೀಲರ ಸಂಘ, ಕಂದಾಯ ಇಲಾಖೆ, ತಾಲ್ಲೂಕು ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಯಾದಗಿರಿ/ಗುರುಮಠಕಲ್ ಶಿಶು ಅಭಿವೃದ್ಧಿ ಯೋಜನೆಗಳ ಸಂಯುಕ್ತಾಶ್ರದಲ್ಲಿ ಜನವರಿ ೨೧ರಿಂದ ೨೪ರವರೆಗೆ ಹಮ್ಮಿಕೊಂಡಿರುವ ಕಾನೂನು ಸಾಕ್ಷರತಾ ರಥ ಹಾಗೂ ಸಂಚಾರಿ ಜನತಾ ನ್ಯಾಯಾಲಯದ ಮೂರನೇ ದಿನದ ಅಭಿಯಾನವು ಜನವರಿ ೨೩ರಂದು ಯಾದಗಿರಿ ತಾಲ್ಲೂಕಿನ ಮೂರು ಗ್ರಾಮಗಳಲ್ಲಿ ಸಂಚರಿಸಲಿದೆ.
ಕAದಕೂರ: ಬೆಳಿಗ್ಗೆ ೧೦ ಗಂಟೆಗೆ ಕಂದಕೂರ ಸರಕಾರಿ ಪ್ರೌಢ ಶಾಲೆಯಲ್ಲಿ ಅಭಿಯಾನದ ಕಾರ್ಯಕ್ರಮ ನಡೆಯಲಿದ್ದು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಶಾರಾಭಾಯ್ ಅವರು ಉದ್ಘಾಟಿಸುವರು. ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸಾಬಮ್ಮ ಅವರು ಅಧ್ಯಕ್ಷತೆ ವಹಿಸುವರು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಶ ಅರ್ಜುನ ಬನಸೊಡೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮುರುಗೇಶ್ ಗುಣಾರಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಬಸವರಾಜ ಪಾಟೀಲ್ ಕ್ಯಾತನಾಳ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ವಕೀಲರಾದ ಶಿವಪ್ರಸಾದಗೌಡರ ಅವರು “ಮೋಟಾರು ವಾಹನ ಕಾಯ್ದೆ” ಕುರಿತು ಮತ್ತು ಬಿ.ಜಿ.ಪಾಟೀಲ್ ಅವರು “ಪೊಲೀಸ್ ದೂರು ಪ್ರಾಧಿಕಾರ” ಕುರಿತು ಉಪನ್ಯಾಸ ನೀಡುವರು.
ಗುರುಮಠಕಲ್: ಮಧ್ಯಾಹ್ನ ೨ ಗಂಟೆಗೆ ಗುರುಮಠಕಲ್ ಸಿ.ಪಿ.ಎಸ್. ಶಾಲೆಯಲ್ಲಿ ಅಭಿಯಾನದ ಕಾರ್ಯಕ್ರಮ ನಡೆಯಲಿದ್ದು, ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಮುರುಗೇಶ್ ಗುಣಾರಿ ಅವರು ಉದ್ಘಾಟಿಸುವರು. ಮುಖ್ಯಗುರು ರಾಮುಲು ಅವರು ಅಧ್ಯಕ್ಷತೆ ವಹಿಸುವರು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಶ ಅರ್ಜುನ ಬನಸೊಡೆ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಬಸವರಾಜ ಪಾಟೀಲ್ ಕ್ಯಾತನಾಳ ಅವರು ಮುಖ್ಯ ಅತಿಥಿಗಳಾಗಿ ಆಗಮಿಸುವರು. ವಕೀಲರಾದ ಎಸ್.ಎಸ್.ಪಾಟೀಲ್ ಅವರು “ಜೀವನಾಂಶ ಕಾಯ್ದೆ” ಕುರಿತು ಮತ್ತು ಪಿ.ಸಿ.ಮಾಲಿಪಾಟೀಲ್ ಅವರು “ಮೋಟಾರು ವಾಹನ ಕಾಯ್ದೆ” ಕುರಿತು ಉಪನ್ಯಾಸ ನೀಡುವರು.
ಚಿನ್ನಕಾರ: ಸಂಜೆ ೫ ಗಂಟೆಗೆ ಚಿನ್ನಕಾರ ಗ್ರಾಮ ಪಂಚಾಯಿತಿಯಲ್ಲಿ ಅಭಿಯಾನದ ಕಾರ್ಯಕ್ರಮ ನಡೆಯಲಿದ್ದು, ಸಿವಿಲ್ ನ್ಯಾಯಾಧೀಶರಾದ ಲೋಕೇಶ್ ಧನಪಾಲ ಹವಲೆ ಅವರು ಉದ್ಘಾಟಿಸುವರು. ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಆನಂದಮ್ಮ ಅವರು ಅಧ್ಯಕ್ಷತೆ ವಹಿಸುವರು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಶ ಅರ್ಜುನ ಬನಸೊಡೆ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಬಸವರಾಜ ಪಾಟೀಲ್ ಕ್ಯಾತನಾಳ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ವಕೀಲರಾದ ರಾಘವೇಂದ್ರ ಅವರು “ಮೋಟಾರು ವಾಹನ ಕಾಯ್ದೆ”ಯ ಬಗ್ಗೆ ಮತ್ತು ಕೆ.ಬಿ.ಅಂಗಡಿ ಅವರು “ಬಾಲ್ಯ ವಿವಾಹ ನಿಷೇಧ ಕಾಯ್ದೆ” ಕುರಿತು ಉಪನ್ಯಾಸ ನೀಡುವರು.
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ
ಯಾದಗಿರಿ, ಜನವರಿ ೨೨ (ಕರ್ನಾಟಕ ವಾರ್ತೆ): ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ೨೦೧೯-೨೦ನೇ ಸಾಲಿಗೆ ಪೊಲೀಸ್ ಸಬ್-ಇನ್‌ಸ್ಪೆಕ್ಟರ್ ಸಿವಿಲ್ (ಪುರುಷ ಮತ್ತು ಮಹಿಳೆ), ಬಿಎಸ್‌ಎಫ್, ಸಿಆರ್‌ಪಿಎಫ್, ಸಿಐಎಸ್‌ಎಫ್, ಕೆಎಸ್‌ಆರ್‌ಪಿ, ಸಿಎಆರ್, ಡಿಎಆರ್ ಗೆ ಸೇರಬಯಸುವ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ ೯೦ ದಿನಗಳ ಉಚಿತ ಪೂರ್ವಿಭಾವಿ ತರಬೇತಿ ಮತ್ತು ಮಾರ್ಗದರ್ಶನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಪ್ರತಿಯೊಬ್ಬ ಅಭ್ಯರ್ಥಿಗೆ ತರಬೇತಿ ಅವಧಿಯಲ್ಲಿ ಊಟ, ವಸತಿ ಮತ್ತು ವಿಮೆ ಸೌಲಭ್ಯ ಇರುತ್ತದೆ. ಪ್ರತಿ ವಿದ್ಯಾರ್ಥಿಗೆ ಒಮ್ಮೆ ಮಾತ್ರ ತರಬೇತಿ ಸೌಲಭ್ಯ ಇದ್ದು, ಸ್ಟೆöÊಫಂಡ್ ನೀಡುವುದಿಲ್ಲ. ಅರ್ಹ ವಿದ್ಯಾರ್ಥಿಗಳು ತಮ್ಮ ಹೆಸರನ್ನು ಜನವರಿ ೩೧ರೊಳಗೆ ವೆಬ್‌ಸೈಟ್ www.gokdom.kar.nic.in ನಲ್ಲಿ ಮಾತ್ರ ನೋಂದಾಯಿಸಿಕೊಳ್ಳಬೇಕು. ಆನ್‌ಲೈನ್ ಫಾರಂ ಪ್ರಿಂಟ್‌ಔಟ್ ಪಡೆದುಕೊಂಡು, ಅಗತ್ಯ ದಾಖಲಾತಿಗಳೊಂದಿಗೆ ಸಂಬAಧಪಟ್ಟ ಜಿಲ್ಲೆಯ (ವಾಸವಿರುವ ಜಿಲ್ಲೆ) ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಕಾರ್ಯಾಲಯದಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ ಅಥವಾ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಕಾರ್ಯಾಲಯ ಕಚೇರಿ ದೂ:೦೮೪೭೩-೨೫೩೨೩೫ ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸೇನೆ ಸೇರುವ ಅಭ್ಯರ್ಥಿಗಳಿಗೆ ಉಚಿತ ತರಬೇತಿ
ಯಾದಗಿರಿ, ಜನವರಿ ೨೨ (ಕರ್ನಾಟಕ ವಾರ್ತೆ): ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ೨೦೧೯-೨೦ನೇ ಸಾಲಿಗೆ ಭಾರತೀಯ ಸೇನೆ ಮತ್ತು ಸಂಬAಧಿಸಿದ ದಳಗಳಿಗೆ ಸೇರಬಯಸುವ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ ೬೦ ದಿನಗಳ ಉಚಿತ ಪೂರ್ವಿಭಾವಿ ತರಬೇತಿ ಮತ್ತು ಮಾರ್ಗದರ್ಶನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಪ್ರತಿಯೊಬ್ಬ ಅಭ್ಯರ್ಥಿಗೆ ತರಬೇತಿ ಅವಧಿಯಲ್ಲಿ ಊಟ, ವಸತಿ ಮತ್ತು ವಿಮೆ ಸೌಲಭ್ಯ ಇರುತ್ತದೆ. ಪ್ರತಿ ವಿದ್ಯಾರ್ಥಿಗೆ ಒಮ್ಮೆ ಮಾತ್ರ ತರಬೇತಿ ಸೌಲಭ್ಯ ಇದ್ದು, ಸ್ಟೆöÊಫಂಡ್ ನೀಡುವುದಿಲ್ಲ. ಅರ್ಹ ವಿದ್ಯಾರ್ಥಿಗಳು ತಮ್ಮ ಹೆಸರನ್ನು ಜನವರಿ ೩೧ರೊಳಗೆ ವೆಬ್‌ಸೈಟ್ www.gokdom.kar.nic.in ನಲ್ಲಿ ಮಾತ್ರ ನೋಂದಾಯಿಸಿಕೊಳ್ಳಬೇಕು. ಆನ್‌ಲೈನ್ ಫಾರಂ ಪ್ರಿಂಟ್‌ಔಟ್ ಪಡೆದುಕೊಂಡು, ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ, ಸಂಬAಧಪಟ್ಟ ಜಿಲ್ಲೆಯ (ವಾಸವಿರುವ ಜಿಲ್ಲೆ) ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಕಾರ್ಯಾಲಯದಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ ಅಥವಾ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಕಾರ್ಯಾಲಯ ಕಚೇರಿ ದೂ:೦೮೪೭೩-೨೫೩೨೩೫ ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ