ಗುರುವಾರ, ಜನವರಿ 23, 2020

ನಾಲ್ಕನೇ ದಿನದ ಕಾರ್ಯಕ್ರಮ
ವಿವಿಧ ಗ್ರಾಮಗಳಲ್ಲಿ ಕಾನೂನು ಸಾಕ್ಷರತಾ ರಥ ಸಂಚಾರ
ಯಾದಗಿರಿ, ಜನವರಿ ೨೩ (ಕರ್ನಾಟಕ ವಾರ್ತೆ): ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪೊಲೀಸ್ ಇಲಾಖೆ, ಜಿಲ್ಲಾ ವಕೀಲರ ಸಂಘ, ಕಂದಾಯ ಇಲಾಖೆ, ತಾಲ್ಲೂಕು ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಯಾದಗಿರಿ/ಗುರುಮಠಕಲ್ ಶಿಶು ಅಭಿವೃದ್ಧಿ ಯೋಜನೆಗಳ ಸಂಯುಕ್ತಾಶ್ರಯದಲ್ಲಿ ಜನವರಿ ೨೧ರಿಂದ ೨೪ರವರೆಗೆ ಹಮ್ಮಿಕೊಂಡಿರುವ ಕಾನೂನು ಸಾಕ್ಷರತಾ ರಥ ಹಾಗೂ ಸಂಚಾರಿ ಜನತಾ ನ್ಯಾಯಾಲಯದ ನಾಲ್ಕನೇ ದಿನದ ಅಭಿಯಾನವು ಜನವರಿ ೨೪ರಂದು ಯಾದಗಿರಿ ತಾಲ್ಲೂಕಿನ ಮೂರು ಗ್ರಾಮಗಳಲ್ಲಿ ಸಂಚರಿಸಲಿದೆ.
ಎಲ್ಹೇರಿ: ಬೆಳಿಗ್ಗೆ ೧೦ ಗಂಟೆಗೆ ಎಲ್ಹೇರಿ ಸರಕಾರಿ ಪ್ರೌಢ ಶಾಲೆಯಲ್ಲಿ ಅಭಿಯಾನದ ಕಾರ್ಯಕ್ರಮ ನಡೆಯಲಿದ್ದು, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಶ ಅರ್ಜುನ ಬನಸೊಡೆ ಅವರು ಉದ್ಘಾಟಿಸುವರು. ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಾಂತಾ ಅವರು ಅಧ್ಯಕ್ಷತೆ ವಹಿಸುವರು. ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಬಸವರಾಜ ಪಾಟೀಲ್ ಕ್ಯಾತನಾಳ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯರಾದ ಸಿ.ಎಸ್.ಮಾಲಿಪಾಟೀಲ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ವಕೀಲರಾದ ಅಬ್ದುಲ್ ರಜಾಕ್ ಅವರು “ಮಹಿಳೆಯರ ಆಸ್ತಿ ಹಕ್ಕುಗಳು” ಕುರಿತು ಮತ್ತು ಸುಷ್ಮಾ ಜಾಧವ್ ಅವರು “ನಾಗರಿಕರ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳು” ಕುರಿತು ಉಪನ್ಯಾಸ ನೀಡುವರು.
ಕೊಂಕಲ್: ಮಧ್ಯಾಹ್ನ ೨ ಗಂಟೆಗೆ ಕೊಂಕಲ್ ಸರಕಾರಿ ಪ್ರೌಢ ಶಾಲೆಯಲ್ಲಿ ಅಭಿಯಾನದ ಕಾರ್ಯಕ್ರಮ ನಡೆಯಲಿದ್ದು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಶಾರಾಭಾಯ್ ಅವರು ಉದ್ಘಾಟಿಸುವರು. ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಲಕ್ಷö್ಮಮ್ಮ ಅವರು ಅಧ್ಯಕ್ಷತೆ ವಹಿಸುವರು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಶ ಅರ್ಜುನ ಬನಸೊಡೆ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಬಸವರಾಜ ಪಾಟೀಲ್ ಕ್ಯಾತನಾಳ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯರಾದ ಸಿ.ಎಸ್.ಮಾಲಿಪಾಟೀಲ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ವಕೀಲರಾದ ಗೋವಿಂದ ಜಾಧವ್ ಅವರು “ಬಾಲಕಾರ್ಮಿಕ ನಿಷೇಧ ಕಾಯ್ದೆ” ಕುರಿತು ಮತ್ತು ರಾಜಕುಮಾರ ದೊಡ್ಡಮನಿ ಅವರು “ವರದಕ್ಷಣೆ ನಿಷೇಧ ಕಾಯ್ದೆ” ಕುರಿತು ಉಪನ್ಯಾಸ ನೀಡುವರು.
ಅನಪೂರ: ಸಂಜೆ ೫ ಗಂಟೆಗೆ ಅನಪೂರ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಅಭಿಯಾನದ ಕಾರ್ಯಕ್ರಮ ನಡೆಯಲಿದ್ದು, ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಶಿವನಗೌಡ ಅವರು ಉದ್ಘಾಟಿಸುವರು. ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಗೋವರ್ಧನರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಶ ಅರ್ಜುನ ಬನಸೊಡೆ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಬಸವರಾಜ ಪಾಟೀಲ್ ಕ್ಯಾತನಾಳ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯರಾದ ಸಿ.ಎಸ್.ಮಾಲಿಪಾಟೀಲ್ ಅವರು “ಆಸ್ತಿ ವರ್ಗಾವಣೆ”ಯ ಬಗ್ಗೆ ಮತ್ತು ವಕೀಲರಾದ ಭೀಮರಾಯ ಕಿಲ್ಲನಕೇರಾ ಅವರು “ಕಂದಾಯ ಗ್ರಾಮ” ಕುರಿತು ಉಪನ್ಯಾಸ ನೀಡುವರು.

ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಲು ಅರ್ಜಿ
ಯಾದಗಿರಿ, ಜನವರಿ ೨೩ (ಕರ್ನಾಟಕ ವಾರ್ತೆ): ಶಹಾಪೂರ ತಾಲ್ಲೂಕಿನ ಭೀಮರಾಯನಗುಡಿ ಅಧಿಸೂಚಿತ ಪ್ರದೇಶ ಸಮಿತಿ ವ್ಯಾಪ್ತಿಯಲ್ಲಿ ೨೦೧೯-೨೦ನೇ ಸಾಲಿನ ಎಸ್.ಎಫ್.ಸಿ ಯೋಜನೆಯಡಿ ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಲು ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಜನರಿಂದ ಅರ್ಜಿ ಆಹ್ವಾನಿಸಲಾಗಿದೆ.
ಹಿಂದುಳಿದ ವರ್ಗದ ಜನರಿಗೆ ಶೌಚಾಲಯ ನಿರ್ಮಾಣಕ್ಕಾಗಿ ಸಹಾಯಧನ ೧೩*೧೫೦೦೦ ಒಟ್ಟು ೧.೯೧ ಲಕ್ಷ ರೂ. ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನರಿಗೆ ವೈಯಕ್ತಿಕ ಶೌಚಾಲಯ ನಿರ್ಮಾಣ ಸಹಾಯಧನ ೫೨*೧೫೦೦೦ ಒಟ್ಟು ೭.೮೦ ಲಕ್ಷ ರೂ. ನಿಗದಿಪಡಿಸಲಾಗಿದೆ. ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಫೆಬ್ರುವರಿ ೮ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿ ಹಾಗೂ ಷರತ್ತುಗಳಿಗೆ ಅಧಿಸೂಚಿತ ಪ್ರದೇಶ ಸಮಿತಿ ಮುಖ್ಯಾಧಿಕಾರಿಗಳ ಕಚೇರಿ ಅಥವಾ ಮೊ:೮೮೬೧೧೨೯೧೫೯, ೯೭೪೩೬೭೨೧೧೬ ಸಂಪರ್ಕಿಸಲು ಪ್ರಕಟಣೆಯಲ್ಲಿ ಕೋರಲಾಗಿದೆ.

ವಿಕಲಚೇತನರಿಂದ ಅರ್ಜಿ ಆಹ್ವಾನ
ಯಾದಗಿರಿ, ಜನವರಿ ೨೩ (ಕರ್ನಾಟಕ ವಾರ್ತೆ): ಶಹಾಪೂರ ತಾಲ್ಲೂಕಿನ ಭೀಮರಾಯನಗುಡಿ ಅಧಿಸೂಚಿತ ಪ್ರದೇಶ ಸಮಿತಿ ವ್ಯಾಪ್ತಿಯಲ್ಲಿ ೨೦೧೯-೨೦ನೇ ಸಾಲಿನ ಎಸ್.ಎಫ್.ಸಿ ಯೋಜನೆಯಡಿ ವಾಹನ ಸೌಲಭ್ಯ ಕಲ್ಪಿಸಲು ಬಡ ವಿಕಲಚೇತನ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಧಿಸೂಚಿತ ಪ್ರದೇಶ ಸಮಿತಿ ವ್ಯಾಪ್ತಿಯಲ್ಲಿ ವಾಸಿಸುವ ವಿಕಲಚೇತನ ಜನರಿಗೆ ವಾಹನ ಖರೀದಿಗಾಗಿ ೧೨* ೩.೩೦ ಲಕ್ಷ ರೂ. ನಿಗದಿಪಡಿಸಲಾಗಿದೆ. ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಫೆಬ್ರುವರಿ ೮ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿ ಹಾಗೂ ಷರತ್ತುಗಳಿಗೆ ಅಧಿಸೂಚಿತ ಪ್ರದೇಶ ಸಮಿತಿ ಮುಖ್ಯಾಧಿಕಾರಿಗಳ ಕಚೇರಿ ಅಥವಾ ಮೊ:೮೮೬೧೧೨೯೧೫೯, ೯೭೪೩೬೭೨೧೧೬ ಸಂಪರ್ಕಿಸಲು ಪ್ರಕಟಣೆಯಲ್ಲಿ ಕೋರಲಾಗಿದೆ.

ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಯಾದಗಿರಿ, ಜನವರಿ ೨೩ (ಕರ್ನಾಟಕ ವಾರ್ತೆ): ಶಹಾಪೂರ ತಾಲ್ಲೂಕಿನ ಭೀಮರಾಯನಗುಡಿ ಅಧಿಸೂಚಿತ ಪ್ರದೇಶ ಸಮಿತಿ ವ್ಯಾಪ್ತಿಯಲ್ಲಿ ೨೦೧೯-೨೦ನೇ ಸಾಲಿನ ಎಸ್.ಎಫ್.ಸಿ ಅನುದಾನ ಅಡಿಯಲ್ಲಿ ಜಿಲ್ಲಾಧಿಕಾರಿಗಳಿಂದ ಕ್ರಿಯಾ ಯೋಜನೆ ಮಂಜೂರಿಯಾದAತೆ ವ್ಯಕ್ತಿ ಸಂಬAಧಿತ ವಿವಿಧ ಸೌಲಭ್ಯಗಳಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಎಸ್.ಎಸ್.ಎಲ್.ಸಿ ಓದುತ್ತಿರುವ ವಿದ್ಯಾಥಿಗಳಿಗೆ ತಲಾ ೩೦೦೦ ರೂ.ನಂತೆ ಸಹಾಯಧನ, ಪಿ.ಯು.ಸಿ/ ಉದ್ಯೋಗ ಆಧಾರಿತ/ ಡಿಪ್ಲೊಮಾ ತಲಾ ೪೫೦೦ ರೂ.ನಂತೆ ಸಹಾಯಧನ, ಐ.ಟಿ.ಐ ಮತ್ತು ವೃತ್ತಿಪರ ತರಬೇತಿ ತಲಾ ೩೦೦೦ ರೂ.ನಂತೆ, ಪ್ಯಾರಾ ಮೆಡಿಕಲ್ ಕೋರ್ಸ್ ಡಿಪ್ಲೊಮಾ/ ಡಿ.ಇಡಿ/ ಸಿ.ಪಿ.ಇಡಿ/ ಇತರೆ ತಾಂತ್ರಿಕ ತರಗತಿಗಳಿಗಾಗಿ ತಲಾ ೪೫೦೦೦ ರೂ.ನಂತೆ, ಬಿ.ಎ/ಬಿ.ಎಸ್‌ಸಿ/ಬಿ.ಕಾಂ ಇತರೆ ಪದವಿ ವಿದ್ಯಾರ್ಥಿಗಳಿಗೆ ತಲಾ ೬೦೦೦ ರೂ.ನಂತೆ, ಬಿ.ಇಡಿ/ಬಿ.ಪಿ.ಇಡಿ/ಇತರೆ ಡಿಪ್ಲೊಮಾ ತಲಾ ೬೦೦೦ ರೂ.ನಂತೆ ಹಾಗೂ ಎಂ.ಎ/ ಎಂ.ಎಸ್‌ಸಿ/ ಎಂ.ಕಾಮ್/ ಎಂ.ಎಸ್.ಡಬ್ಲೂö್ಯ/ ಎಂ.ಸಿ.ಎ/ ಬಿ.ಇ ತಲಾ ೧೫,೦೦೦ ರೂ.ನಂತೆ ಸಹಾಯಧನ ನೀಡಲಾಗುವುದು. ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಫೆಬ್ರುವರಿ ೮ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿ ಹಾಗೂ ಷರತ್ತುಗಳಿಗೆ ಅಧಿಸೂಚಿತ ಪ್ರದೇಶ ಸಮಿತಿ ಮುಖ್ಯಾಧಿಕಾರಿಗಳ ಕಚೇರಿ ಅಥವಾ ಮೊ:೮೮೬೧೧೨೯೧೫೯, ೯೭೪೩೬೭೨೧೧೬ ಸಂಪರ್ಕಿಸಲು ಪ್ರಕಟಣೆಯಲ್ಲಿ ಕೋರಲಾಗಿದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...