ಮಂಗಳವಾರ, ಜನವರಿ 21, 2020

ಶ್ರೀ ನಿಜಶರಣ ಅಂಬಿಗರ ಚೌಡಯ್ಯರವರ ಜಯಂತ್ಯೋತ್ಸವ  
ದಿಟ್ಟ ವಚನಗಳಿಂದ ಸಾಮಾಜಿಕ ಅನಿಷ್ಠ ಅಳಿಸಿದ ನಿಜಶರಣ
-ವೆಂಕಟರೆಡ್ಡಿಗೌಡ ಮುದ್ನಾಳ

ಯಾದಗಿರಿ, ಜನವರಿ ೨೧ (ಕರ್ನಾಟಕ ವಾರ್ತೆ): ನೇರ, ದಿಟ್ಟ ವ್ಯಕ್ತಿತ್ವ ಹೊಂದಿದ್ದ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರು ಅಂದಿನ ಸಾಮಾಜಿಕ ವ್ಯವಸ್ಥೆಯಲ್ಲಿ ಆಚರಣೆಯಲ್ಲಿದ್ದ ಅನಿಷ್ಠಗಳನ್ನು ತೊಲಗಿಸಲು ಶ್ರಮಿಸಿದರು. ಇಂತಹ ಶರಣರ ತತ್ವಾದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಸುಭದ್ರ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದು ಶಾಸಕರಾದ ವೆಂಕಟರೆಡ್ಡಿಗೌಡ ಮುದ್ನಾಳ ಅವರು ಹೇಳಿದರು. ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಮಂಗಳವಾರ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತ್ಯೋತ್ಸವ ಸಮಿತಿ ಸಂಯುಕ್ತಾಶ್ರಯದಲ್ಲಿ ಶ್ರೀ ನಿಜಶರಣ ಅಂಬಿಗರ ಚೌಡಯ್ಯರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ೧೨ನೇ ಶತಮಾನದ ಶರಣರ ಸಾಮಾಜಿಕ ಕ್ರಾಂತಿ ಯುಗದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರು ಬಸವಣ್ಣನವರಿಗೆ ಬೆನ್ನೆಲುಬಾಗಿದ್ದರು. ಸಮಾಜದಲ್ಲಿನ ಮೇಲು-ಕೀಳು ಎಂಬುದನ್ನು ಕಠೋರವಾಗಿ ವಿರೋಧಿಸಿದರು. ಎಲ್ಲೂರು ಸಮಾನರು ಎಂದು ಸಾರಿದರು. ಬಸವಣ್ಣನವರು ಕೂಡ ಎಲ್ಲಾ ಜಾತಿ, ಜನಾಂಗದವರನ್ನು ಒಂದುಗೂಡಿಸಿ ನಾವೆಲ್ಲರೂ ಒಂದೇ ಎಂದು ಪ್ರತಿಪಾದಿಸಿದರು. ಇಂತಹ ಶರಣರ ಜಯಂತಿಗಳನ್ನು ಆಚರಣೆ ಮಾಡಿದರೆ ಸಾಲದು. ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯುವ ಪ್ರಯತ್ನದೊಂದಿಗೆ ಸೌಹಾರ್ದತೆಯಿಂದ ಬಾಳಬೇಕು ಎಂದು ಸಲಹೆ ನೀಡಿದರು.

ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ ಅವರು ಮಾತನಾಡಿ, ೧೨ನೇ ಶತಮಾನವನ್ನು ಎಂದಿಗೂ ಮರೆಯದ ಕಾಲ. ಅನೇಕ ಶರಣರು ತಮ್ಮದೇ ತತ್ವ- ಸಿದ್ಧಾಂತಗಳಿAದ ಅನೇಕ ವಚನಗಳನ್ನು ರಚಿಸುವ ಮೂಲಕ ಅನಿಷ್ಠ ಪದ್ಧತಿಗಳನ್ನು ಖಂಡಿಸಿದರು. ವಿಶೇಷವಾಗಿ ನಿಜಶರಣ ಅಂಬಿಗರ ಚೌಡಯ್ಯನವರು ನೇರ, ದಿಟ್ಟವಾಗಿ ವಚನಗಳನ್ನು ರಚಿಸಿ, ಸಮಾಜದ ಅಂಕುಡೊAಕುಗಳನ್ನು ತಿದ್ದಿದರು. ಯುವಕರು ಅವರ ಮಾರ್ಗದಲ್ಲಿ ನಡೆದು ಸುಶಿಕ್ಷಿತ ಸಮಾಜವನ್ನು ನಿರ್ಮಿಸಬೇಕು ಎಂದು ಹೇಳಿದರು. ಅಲ್ಲೂರ (ಬಿ) ಸರ್ಕಾರಿ ಪ್ರೌಢಶಾಲೆಯ ಅಧ್ಯಾಪಕರಾದ ಶಿವಕುಮಾರ ಕಟ್ಟಿಮನಿ ಅವರು ವಿಶೇಷ ಉಪನ್ಯಾಸ ನೀಡಿ, ನಿಜಶರಣ ಅಂಬಿಗರ ಚೌಡಯ್ಯನವರು ತಮ್ಮ ವಚನಗಳ ಮೂಲಕ ಸಮಾಜವನ್ನು ತಿದ್ದುವ ಕೆಲಸ ಮಾಡಿದರು. ಅಲ್ಲಮಪ್ರಭು ಅವರು ಅಂಬಿಗರ ಚೌಡಯ್ಯನವರಿಗೆ ನಿಜಶರಣ ಎಂದು ಕರೆದಿದ್ದರು. ನಿಜಶರಣರ ದೈವಶಕ್ತಿ, ಗಟ್ಟಿತನ ಅವರಲ್ಲಿತ್ತು. ಅವರ ಮಾರ್ಗದರ್ಶನದಲ್ಲಿ ನಡೆಯುವ ಮೂಲಕ ಶೈಕ್ಷಣಿಕ, ರಾಜಕೀಯ, ಆರ್ಥಿಕ ಪ್ರಗತಿ ಸಾಧಿಸಬೇಕು. ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು ಎಂದರು.
ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಭೀಮವ್ವ ಮಲ್ಲೇಶಪ್ಪ ಅಚ್ಚೋಲಾ, ಅಂಬಿಗರ ಚೌಡಯ್ಯನವರ ಜಯಂತ್ಯೋತ್ಸವ ಸಮಿತಿಯ ಜಿಲ್ಲಾಧ್ಯಕ್ಷರಾದ ಹಣಮಂತ ಮಡ್ಡಿ, ಮೌಲಾಲಿ ಅನಪುರ, ಮೋಹನ ಬಾಬು, ನಗರಸಭೆಯ ಸದಸ್ಯರಾದ ಪರಶುರಾಮ, ಸ್ವಾಮಿದೇವ, ವಿಲಾಸ್ ಪಾಟೀಲ್, ಸುರೇಶ ಮಡ್ಡಿ, ನಾಗರತ್ನ ಅನಪುರ, ಸುರೇಶ ಕೋಟಿಮನಿ, ದೇವಿಂದ್ರ ಬಳಿಚಕ್ರ ಸೇರಿದಂತೆ ಮುಂತಾದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಲಿAಗೇರಿ ಸ್ಟೇಷನ್ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಂಗೀತ ಶಿಕ್ಷಕರಾದ ಚಂದ್ರಶೇಖರ ಗೋಗಿ ಹಾಗೂ ತಂಡದವರು ನಾಡಗೀತೆ ಹಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ದತ್ತಪ್ಪ ಸಾಗನೂರ ಅವರು ಸ್ವಾಗತಿಸಿದರು. ಶುಭಂ ಪದವಿ ಮಹಾವಿದ್ಯಾಲಯದ ಉಪನ್ಯಾಸಕರಾದ ಗುರುಪ್ರಸಾದ ವೈದ್ಯ ಅವರು ಕಾರ್ಯಕ್ರಮ ನಿರೂಪಿಸಿದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...