ವಾರ್ತಾ ಇಲಾಖೆಯಿಂದ ಉಚಿತ ಚಲನಚಿತ್ರ ಪ್ರದರ್ಶನ
ಯಾದಗಿರಿ, ಜನವರಿ ೨೫ (ಕರ್ನಾಟಕ ವಾರ್ತೆ): ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿ ಸಹಯೋಗದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಸ್ವಾತಂತ್ರ÷್ಯ ಹೋರಾಟ ಹಾಗೂ ಭಾರತದ ಸಂವಿಧಾನದ ನಿರ್ಮಾತೃಗಳ ಮಹತ್ವ ತಿಳಿಸುವ ಚಲನಚಿತ್ರಗಳ ಉಚಿತ ಪ್ರದರ್ಶನವನ್ನು ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಶನಿವಾರ ಆಯೋಜಿಸಲಾಗಿತ್ತು. ಡಾ.ಜಬ್ಬಾರ್ ಪಟೇಲ್ ನಿರ್ದೇಶನದ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ರಿಚರ್ಡ್ ಅಟೆನ್‌ಬರೊ ನಿರ್ದೇಶನದ ಗಾಂಧಿ ಚಲನಚಿತ್ರಗಳನ್ನು ಪ್ರದರ್ಶಿಸಲಾಯಿತು.
ಚಲನಚಿತ್ರ ವೀಕ್ಷಿಸಿದ ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಮಾತನಾಡಿ, ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಗಾಂಧಿ ಚಲನಚಿತ್ರಗಳು ಸ್ವಾತಂತ್ರ÷್ಯ ಹೋರಾಟ ಸಾಗಿ ಬಂದ ಹಾದಿ ಮತ್ತು ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ ಮಹತ್ವ ತಿಳಿಸುತ್ತವೆ. ಈ ಚಲನಚಿತ್ರಗಳು ವಿದ್ಯಾರ್ಥಿಗಳು ಸೇರಿದಂತೆ ಪ್ರತಿಯೊಬ್ಬರಿಗೂ ಅನುಕೂಲವಾಗುತ್ತವೆ. ಉಚಿತ ಚಲನಚಿತ್ರ ಪ್ರದರ್ಶನ ಆಯೋಜಿಸಿರುವುದು ಶ್ಲಾಘನೀಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ, ಸಹಾಯಕ ಆಯುಕ್ತರಾದ ಶಂಕರಗೌಡ ಎಸ್.ಸೋಮನಾಳ, ಡಿವೈಎಸ್ಪಿ ಯು.ಶರಣಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಪ್ರಭಾಕರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಸಿದ್ದೇಶ್ವರಪ್ಪ ಜಿ.ಬಿ., ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ ಸೇರಿದಂತೆ ಅಧಿಕಾರಿಗಳು, ವಿವಿಧ ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಚಲನಚಿತ್ರ ವೀಕ್ಷಣೆ ಮಾಡಿದರು
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ