ನಾಳೆ ಪೂರ್ವಸಿದ್ಧತಾ ಸಭೆ
ಯಾದಗಿರಿ, ಜನವರಿ ೦೪ (ಕರ್ನಾಟಕ ವಾರ್ತೆ): ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿಯನ್ನು ಜನವರಿ ೧೪ರಂದು ವಿಜೃಂಭಣೆಯಿAದ ಆಚರಣೆ ಮಾಡಲು ಜಯಂತಿ ಪೂರ್ವ ಸಿದ್ಧತಾ ಸಭೆಯನ್ನು ಜನವರಿ ೬ರಂದು ಸಾಯಂಕಾಲ ೪ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಸಂಘ-ಸAಸ್ಥೆಗಳ ಪ್ರತಿನಿಧಿಗಳು ಹಾಜರಾಗುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಜ.೮ರಂದು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಸಭೆ
ಯಾದಗಿರಿ, ಜನವರಿ ೦೪ (ಕರ್ನಾಟಕ ವಾರ್ತೆ): ಜಿಲ್ಲಾ ಪಂಚಾಯತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಸರಸ್ವತಿ ಸುಭಾಶ್ಚಂದ್ರ ಅವರ ಅಧ್ಯಕ್ಷತೆಯಲ್ಲಿ ಸಮಿತಿ ಸಭೆಯನ್ನು ಜನವರಿ ೮ರಂದು ಮಧ್ಯಾಹ್ನ ೧೧ ಗಂಟೆಗೆ ಜಿಲ್ಲಾ ಪಂಚಾಯತಿಯ ಸ್ಥಾಯಿ ಸಮಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಹಿಂದೆ ಜನವರಿ ೬ರಂದು ನಿಗದಿಪಡಿಸಿದ್ದ ಸದರಿ ಸಭೆಯನ್ನು ಕಾರಣಾಂತರಗಳಿAದ ಮುಂದೂಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಜ.೯ರಂದು ಜಿ.ಪಂ ಸಾಮಾನ್ಯ ಸ್ಥಾಯಿ ಸಮಿತಿ ಸಭೆ
ಯಾದಗಿರಿ, ಜನವರಿ ೦೪ (ಕರ್ನಾಟಕ ವಾರ್ತೆ): ಜಿಲ್ಲಾ ಪಂಚಾಯಿತಿಯ ಸಾಮಾನ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಗಿರಿಜಮ್ಮ ಸದಾಶಿವಪ್ಪಗೌಡ ಅವರ ಅಧ್ಯಕ್ಷತೆಯಲ್ಲಿ ಸಮಿತಿ ಸಭೆಯನ್ನು ಜನವರಿ ೯ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ