ಬುಧವಾರ, ಜನವರಿ 8, 2020

ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ
ಜ.೧೨ರಂದು ಸ್ವಾಮಿ ವಿವೇಕಾನಂದರ ಜಯಂತ್ಯೋತ್ಸವ
ಯಾದಗಿರಿ, ಜನವರಿ ೦೮ (ಕರ್ನಾಟಕ ವಾರ್ತೆ): ಜಿಲ್ಲಾಡಳಿತದ ವತಿಯಿಂದ ಸ್ವಾಮಿ ವಿವೇಕಾನಂದರ ೧೫೬ನೇ ಜನ್ಮ ದಿನಾಚರಣೆಯನ್ನು ಜನವರಿ ೧೨ರಂದು ಬೆಳಿಗ್ಗೆ ೧೦ ಗಂಟೆಗೆ ಯಾದಗಿರಿ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡು ಯಶಸ್ವಿಗೊಳಿಸಬೇಕು. ಕಾರ್ಯಕ್ರಮದಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆ ಮಾಡುವಂತೆ ಎಂದು ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸ್ವಾಮಿ ವಿವೇಕಾನಂದರ ಜಯಂತಿ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.
ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಅಂಗವಾಗಿ “ಸ್ವಾಮಿ ವಿವೇಕಾನಂದ ರಾಷ್ಟಿçÃಯ ಯುವ ಸಪ್ತಾಹ”ವನ್ನು ಅರ್ಥಪೂರ್ಣವಾಗಿ ಮತ್ತು ವಿಜೃಂಭಣೆಯಿAದ ಆಚರಿಸುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ ಸಮಿತಿಯನ್ನು ಪುನರ್ ರಚಿಸಿ ಆದೇಶಿಸಿದೆ. ಅದರಂತೆ ಸಮಿತಿ ಸದಸ್ಯರು ಕ್ರಮ ಕೈಗೊಳ್ಳಬೇಕು ಅವರು ನಿರ್ದೇಶಿಸಿದರು.
ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಅರ್ಹತಾ ದಿನಾಂಕ: ೦೧-೦೧-೨೦೨೦ರಂತೆ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಪಟ್ಟಿಯ ಬಗ್ಗೆ ಯಾವುದೇ ದೂರು, ಆಕ್ಷೇಪಣೆಗಳಿದ್ದಲ್ಲಿ ಜನವರಿ ೧೫ರ ವರೆಗೆ ಸಲ್ಲಿಸಲು ಅವಕಾಶ ಇದೆ. ಇನ್ನೂ ಸೇರ್ಪಡೆಯಾಗದೆ ಇರುವ ಅರ್ಹ ಯುವಕ-ಯುವತಿಯರು, ನಾಗರಿಕರು ಜನವರಿ ೧೫ರವರೆಗೆ ಹೆಸರು ನೋಂದಾಯಿಸಬಹುದಾಗಿದೆ. ಈ ಬಗ್ಗೆಯೂ ಕಾರ್ಯಕ್ರಮದಲ್ಲಿ ಮಾಹಿತಿ ನೀಡುವಂತೆ ಅವರು ತಿಳಿಸಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ರಾಮಕೃಷ್ಣ ವಿವೇಕಾನಂದ ಆಶ್ರಮದ ಸಂಯುಕ್ತಾಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಜೀವನ ಚರಿತ್ರೆ ಮತ್ತು ಸಾಧನೆಗಳ ಕುರಿತು “ವಿವೇಕ ಸಪ್ತಾಹ”ವನ್ನು ಜನವರಿ ೧೩ರಿಂದ ೧೮ರವರೆಗೆ ಯಾದಗಿರಿ ನಗರದ ಶಾಲಾ-ಕಾಲೇಜು ಮತ್ತು ವಿವಿಧ ಸ್ಥಳಗಳಲ್ಲಿ ಆಚರಣೆ ಮಾಡಲು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಸಿಇಒ ಅವರು ಅನುಮೋದಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನವಣೆ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ, ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಸುಭಾಶ್ಚಂದ್ರ ಕೌಲಗಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಚನ್ನಬಸಪ್ಪ ಕುಳಗೇರಿ, ಸ್ವಾಮಿ ವಿವೇಕಾನಂದ ಆಶ್ರಮದ ವೇಣುಗೋಪಾಲ, ಜಿಲ್ಲಾ ಭಾವೈಕ್ಯತಾ ಸಮಿತಿ ಅಧ್ಯಕ್ಷ ಬಾಬು ದೋಖಾ, ಶರಣಗೌಡ ಬಾಡಿಯಾಳ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...