ಸೋಮವಾರ, ಜನವರಿ 20, 2020

ಯುವ ಸಪ್ತಾಹ ಸಮಾರೋಪ ಸಮಾರಂಭ
ಯುವಜನರು ಜೀವನಲ್ಲಿ ಶಿಸ್ತು ರೂಢಿಸಿಕೊಳ್ಳಬೇಕು
-ಸುಚೇತಾ ನೆಲವಗಿ
ಯಾದಗಿರಿ, ಜನವರಿ ೨೦ (ಕರ್ನಾಟಕ ವಾರ್ತೆ): ಯುವಜನರು ಜೀವನದಲ್ಲಿ ಶಿಸ್ತು ರೂಢಿಸಿಕೊಳ್ಳಬೇಕು. ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಂಡು ಸಮಾಜದಲ್ಲಿ ಉನ್ನತ ಸ್ಥಾನಕ್ಕೆ ಬೆಳೆಯಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಸುಚೇತಾ ನೆಲವಗಿ ಅವರು ಸಲಹೆ ನೀಡಿದರು.
ನಗರದ ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಮಕೃಷ್ಣ ವಿವೇಕಾನಂದ ಆಶ್ರಮದ ಸಂಯುಕ್ತಾಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಜಯಂತ್ಯೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ವಿವೇಕ ಸಪ್ತಾಹ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಒಳ್ಳೆಯ ಹವ್ಯಾಸಗಳನ್ನು ಸತತ ೨೧ ದಿನಗಳ ಕಾಲ ನಿರಂತರ ರೂಢಿಸಿಕೊಂಡರೆ ಅವು ನಮಗೆ ನಿತ್ಯದ ಹವ್ಯಾಸಗಳಾಗಿ ಪರಿವರ್ತನೆಗೊಳ್ಳುತ್ತವೆ. ವಿವೇಕಾನಂದರ ಕುರಿತು ಓದುವುದು ಮತ್ತು ಅವರ ಮಾರ್ಗದಲ್ಲಿ ಸಾಗಿದರೆ ಜೀವನದಲ್ಲಿ ಸಾಧನೆ ಮಾಡಬಹುದು ಎಂದು ನುಡಿದರು.
ನೂತನ ಕೆಎಎಸ್ ಅಧಿಕಾರಿ ಚೇತನಾ ಆಲೆಮನಿ ಅವರು ಮಾತನಾಡಿ, ವಿದ್ಯಾರ್ಥಿಗಳು ಮೊದಲು ಗುರಿಯನ್ನು ನಿಗದಿಪಡಿಸಿಕೊಳ್ಳಬೇಕು. ಆ ಗುರಿಯನ್ನು ತಲುಪಲು ಸೂಕ್ತ ವಿವೇಚನೆ ಬಳಸಬೇಕು. ಗುರು- ಹಿರಿಯರ ಮಾರ್ಗದರ್ಶನ ಪಡೆದುಕೊಂಡು ಸಾಗಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ತಾಂತ್ರಿಕತೆ ರೂಢಿಸಿಕೊಳ್ಳಬೇಕು. ಶಿಸ್ತಿನಿಂದ ತಾಂತ್ರಿಕತೆಯನ್ನು ಅಳವಡಿಸಿಕೊಂಡು ಓದಿದಲ್ಲಿ ಯಶಸ್ಸು ಸಾಧ್ಯ ಎಂದು ಸಲಹೆ ನೀಡಿದರು.
ರಾಮಕೃಷ್ಣ ವಿವೇಕಾನಂದ ಆಶ್ರಮದ ಜಿಲ್ಲಾ ಸಂಚಾಲಕರಾದ ಪಿ.ವೇಣುಗೋಪಾಲ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲಾಡಳಿತ ಸಹಯೋಗದಲ್ಲಿ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಸ್ವಾಮಿ ವಿವೇಕಾನಂದರ ಜಯಂತ್ಯೋತ್ಸವ ಅಂಗವಾಗಿ ವಿವೇಕ ಸಪ್ತಾಹ ಆಯೋಜಿಸಿರುವುದು ಶ್ಲಾಘನೀಯವಾದದ್ದು. ಇಂತಹ ಕಾರ್ಯಕ್ರಮಗಳು ಯುವಕರಿಗೆ ಸ್ಫೂರ್ತಿ ನೀಡುತ್ತವೆ ಎಂದು ಅಭಿಪ್ರಾಯಪಟ್ಟರು.
ಮೆರವಣಿಗೆ: ಕಾರ್ಯಕ್ರಮಕ್ಕೂ ಮೊದಲು ನಗರದ ಸರ್ಕಾರಿ ಪದವಿ ಮಹಾವಿದ್ಯಾಲಯ ಆವರಣದಿಂದ ರಾಮಕೃಷ್ಣ ವಿವೇಕಾನಂದ ಆಶ್ರಮದ ವರೆಗೆ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದರ ಭಾವಚಿತ್ರದ ಮೆರವಣಿಗೆಗೆ ಪ್ರಾಂಶುಪಾಲರಾದ ಡಾ.ಸುಭಾಶ್ಚಂದ್ರ ಕೌಲಗಿ ಅವರು ಚಾಲನೆ ನೀಡಿದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...