ಶನಿವಾರ, ಜನವರಿ 4, 2020

ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ: ಡಾ.ಲಕ್ಷಿö್ಮÃಕಾಂತ

ಯಾದಗಿರಿ, ಜನವರಿ ೦೪ (ಕರ್ನಾಟಕ ವಾರ್ತೆ): ಜಿಲ್ಲೆಯಾದ್ಯಂತ ಜನವರಿ ೩ರಿಂದ ತೀವ್ರತರದ ಮಿಷನ್ ಇಂದ್ರಧನುಷ್ ಲಸಿಕೆ ಅಭಿಯಾನ- ೨.೦ ಎರಡನೇ ಸುತ್ತಿನ ಕಾರ್ಯಕ್ರಮ ಆರಂಭವಾಗಿದ್ದು, ಅಭಿಯಾನದಲ್ಲಿ ಪೋಷಕರು ತಮ್ಮ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಬೇಕು ಎಂದು ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಲಕ್ಷಿö್ಮÃಕಾಂತ ಕುಲಕರ್ಣಿ ಅವರು ಮನವಿ ಮಾಡಿದರು.
ನಗರದ ಲಾಡಿಸ್‌ಗಲ್ಲಿಯ ಅಂಗನವಾಡಿ ಕೇಂದ್ರದಲ್ಲಿ ಶುಕ್ರವಾರ ತೀವ್ರಗೊಂಡ ಮಿಷನ್ ಇಂದ್ರಧನುಷ್ ಲಸಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪೋಷಕರು ತಮ್ಮ ಮಗುವಿಗೆ ೧೦ ಮಾರಕ ರೋಗಗಳ ವಿರುದ್ಧ ತಪ್ಪದೇ ಲಸಿಕೆ ನೀಡಬೇಕು. ಗರ್ಭಿಣಿಯರು ಸಹ ಟಿ.ಟಿ ಮತ್ತು ವರ್ಧಕ ಲಸಿಕೆಗಳನ್ನು ಹಾಕಿಸಿದರೆ ತಾಯಿ ಮತ್ತು ಮಗು ಆರೋಗ್ಯದಿಂದ ಇರಲು ಸಾಧ್ಯ. ೫ ವರ್ಷದಲ್ಲಿ ೭ ಬಾರಿ ತಪ್ಪದೇ ಲಸಿಕೆಯನ್ನು ಹಾಕಿಸುವಂತೆ ಅವರು ತಿಳಿಸಿದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಯಾದ ಬಿರಾದಾರ ಶಂಕರ ಅವರು ಮಾತನಾಡಿ, ಮಕ್ಕಳಿಗೆ ಲಸಿಕೆ ಕೊಡಿಸುವುದು ಪೋಷಕರ ಕರ್ತವ್ಯವಾಗಿದೆ ಮತ್ತು ಲಸಿಕೆ ಪಡೆಯುವುದು ಪ್ರತಿ ಮಗುವಿನ ಹಕ್ಕು. ೦-೫ ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ ರೋಗ ಬಾರದಂತೆ ಎಚ್ಚರವಹಿಸಬೇಕು. ಮೂರನೇ ಸುತ್ತು ಫೆಬ್ರುವರಿ ೩ರಿಂದ ಹಾಗೂ ನಾಲ್ಕನೇ ಸುತ್ತು ಮಾರ್ಚ್ ೨ರಿಂದ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಕಿರಿಯ ಆರೋಗ್ಯ ಸಹಾಯಕರು, ಅಂಗನವಾಡಿ, ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಬಹುದು ಅಥವಾ ಉಚಿತ ಸಹಾಯವಾಣಿ ಸಂಖ್ಯೆ ೧೦೪ಕ್ಕೆ ಕರೆ ಮಾಡಬಹುದು ಎಂದು ಸಲಹೆ ನೀಡಿದರು.
ಆರೋಗ್ಯ ಮೇಲ್ವಿಚಾರಕರಾದ ಸತ್ಯನಾರಾಯಣ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ನಂದಣ್ಣ ಪಾಟೀಲ್, ಕಿರಿಯ ಆರೋಗ್ಯ ಸಹಾಯಕಿ ಸಕ್ಕುಬಾಯಿ, ಅಂಗನವಾಡಿ ಕಾರ್ಯಕರ್ತೆಯರಾದ ಸೀತಾಬಾಯಿ, ಸಾಬಮ್ಮ, ಅಶ್ವತ್, ಶರಣು ಸೇರಿದಂತೆ ತಾಯಂದಿರು ಹಾಗೂ ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...