ಭಾನುವಾರ, ಜನವರಿ 19, 2020

ಪ್ರತಿ ತಾಲ್ಲೂಕಿನಲ್ಲಿ ೪ ದಿನಗಳಂತೆ ದಿನಕ್ಕೆ ೩ ಕಾರ್ಯಕ್ರಮ
ಜ.೨೧ರಿಂದ ಜಿಲ್ಲೆಯಲ್ಲಿ ಕಾನೂನು ಸಾಕ್ಷರತಾ ರಥÀ ಸಂಚಾರ
-ನ್ಯಾ. ಶ್ರೀ ಶಿವನಗೌಡ
ಯಾದಗಿರಿ, ಜನವರಿ ೧೮ (ಕರ್ನಾಟಕ ವಾರ್ತೆ): ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾನೂನು ಸಾಕ್ಷರತಾ ರಥ ಮತ್ತು ಜನತಾ ನ್ಯಾಯಾಲಯದ ಸಂಚಾರಿ ವಾಹನವು ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲಿ ೪ ದಿನಗಳಂತೆ ಜನವರಿ ೨೧ರಿಂದ ಫೆಬ್ರುವರಿ ೭ರವರೆಗೆ ಸಂಚರಿಸಲಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಶಿವನಗೌಡ ಅವರು ತಿಳಿಸಿದರು. ನಗರದ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಶುಕ್ರವಾರ ಸಂಜೆ ನಡೆದ ಕಾನೂನು ಸಾಕ್ಷರತಾ ರಥ ಮತ್ತು ಜನತಾ ನ್ಯಾಯಾಲಯದ ಸಂಚಾರಿ ವಾಹನವು ಜಿಲ್ಲೆಯಲ್ಲಿ ಪ್ರವಾಸ ಮಾಡುವ ಕುರಿತಾದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.
ಯಾದಗಿರಿ ತಾಲ್ಲೂಕಿನಲ್ಲಿ ಜನವರಿ ೨೧ರಿಂದ ೨೪ರವರೆಗೆ ಸಾಕ್ಷರತಾ ರಥ ಸಂಚರಿಸಲಿದೆ. ಕಾನೂನು ಸೇವೆಗಳ ಪ್ರಾಧಿಕಾರದ ಧ್ಯೇಯೋದ್ದೇಶಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಹಾಗೂ ಅರ್ಥಪೂರ್ಣವಾಗಿ ಗ್ರಾಮಾಂತರ ಪ್ರದೇಶದ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ವಾಹನವು ಜಿಲ್ಲೆಯಲ್ಲಿ ಪ್ರವಾಸ ಮಾಡಲಿದೆ. ದಿನಕ್ಕೆ ಮೂರು ಕಾನೂನು ಸಾಕ್ಷರತಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಈ ಕಾರ್ಯಕ್ರಮದಲ್ಲಿ ಅಧಿಕಾರಿಗಳು ತಮ್ಮ ಇಲಾಖೆಯ ಯೋಜನೆಗಳನ್ನು ಪ್ರಚಾರ ಮಾಡಬೇಕು ಎಂದು ಅವರು ಸೂಚಿಸಿದರು.
ಕಾನೂನು ಸಾಕ್ಷರತಾ ರಥದ ಸಂಚಾರ ಯಶಸ್ವಿಗೆ ಸಂಬAಧಪಟ್ಟ ಇಲಾಖೆಯ ಅಧಿಕಾರಿಗಳು ಸಹಕರಿಸಬೇಕು. ವಾಹನ ಸಂಚಾರ ನಿಗದಿಪಡಿಸಿದ ಗ್ರಾಮಗಳಲ್ಲಿ ಕಾರ್ಯಕ್ರಮದ ಹಿಂದಿನ ದಿನ ಡಂಗುರ ಸಾರಬೇಕು. ಶಾಲೆಗಳಲ್ಲಿ ಕಾರ್ಯಕ್ರಮ ನಡೆಸಿದಾಗ ವಿದ್ಯಾರ್ಥಿಗಳು ಲಭ್ಯವಿರುತ್ತಾರೆ. ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯಕ್ರಮ ಏರ್ಪಡಿಸಿದಾಗ ಸಾರ್ವಜನಿಕರನ್ನು ಸೇರಿಸುವ ಜವಾಬ್ದಾರಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರದ್ದು ಎಂದು ತಿಳಿಸಿದರು.
ಕಾರ್ಯಕ್ರಮಗಳಲ್ಲಿ ಜನನ ಮರಣ ನೋಂದಣಿ, ಮಕ್ಕಳ ಹಕ್ಕುಗಳು, ಕಡ್ಡಾಯ ಶಿಕ್ಷಣದ ಹಕ್ಕು, ಉತ್ತರಾಧಿಕಾರತ್ವ, ಗ್ರಾಮ ಪಂಚಾಯಿತಿ ಆಸ್ತಿ ಸಂರಕ್ಷಣೆ, ಬಾಲ ಕಾರ್ಮಿಕ ಪದ್ಧತಿ ಮತ್ತು ಬಾಲ್ಯ ವಿವಾಹ ನಿಷೇಧ, ವಿಕಲಚೇತನರ ಕಾಯ್ದೆ, ಹಿರಿಯ ನಾಗರಿಕರ ಕಾಯ್ದೆ ಸೇರಿದಂತೆ ಮುಂತಾದ ವಿಷಯಗಳ ಕುರಿತು ಉಪನ್ಯಾಸ ನೀಡಬೇಕು ಎಂದು ಹೇಳಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಮುಖ್ಯ ನ್ಯಾಯಿಕ ದಂಡಾಧಿಕಾರಿಗಳಾದ ನಾಮದೇವ ಕೆ.ಸಾಲಮಂಟಪಿ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಶ ಅರ್ಜುನ ಬನಸೊಡೆ, ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ, ಸಿವಿಲ್ ನ್ಯಾಯಾಧೀಶರಾದ ಲೋಕೇಶ್ ಧನಪಾಲ ಹವಲೆ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಸ್ಮೀತಾ ಮಾಲಗಾಂವೆ ಅವರು ಉಪಸ್ಥಿತರಿದ್ದರು.
ಡಿವೈಎಸ್‌ಪಿ ಯು.ಶರಣಪ್ಪ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಗಳಾದ ಮುಕ್ಕಣ್ಣ ಕರಿಗಾರ, ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯರಾದ ಸಿ.ಎಸ್. ಮಾಲಿಪಾಟೀಲ್, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ಶರಣಪ್ಪ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ವಕೀಲರು ಸಭೆಯಲ್ಲಿ ಹಾಜರಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...