ಬುಧವಾರ, ಜನವರಿ 8, 2020

ತೆಂಗಿನಕಾಯಿ ಮಾರಾಟ ಹರಾಜು
ಯಾದಗಿರಿ, ಜನವರಿ ೦೮ (ಕರ್ನಾಟಕ ವಾರ್ತೆ): ವಡಗೇರಾ ತಾಲ್ಲೂಕಿನ ಹೈಯ್ಯಾಳ (ಬಿ) ಗ್ರಾಮದ ಶ್ರೀ ಹೈಯ್ಯಾಳಲಿಂಗೇಶ್ವರ ದೇವಸ್ಥಾನದ ಜಾತ್ರೆಯಲ್ಲಿ ತೆಂಗಿನಕಾಯಿ ಮಾರಾಟ ಹಾಗೂ ಜಾಗದ ಹರಾಜು ಪ್ರಕ್ರಿಯೆಯನ್ನು ಜನವರಿ ೧೦ರಂದು ಬೆಳಿಗ್ಗೆ ೧೧ ಗಂಟೆಗೆ ವಡಗೇರಾ ತಹಶೀಲ್ ಕಾರ್ಯಾಲಯದಲ್ಲಿ ನಿಗದಿಪಡಿಸಲಾಗಿದೆ.
ಹರಾಜಿನಲ್ಲಿ ಭಾಗವಹಿಸುವವರು ೨೫ ಸಾವಿರ ರೂ. ಠೇವಣಿ ಇಟ್ಟು ಭಾಗವಹಿಸಬೇಕು. ಹರಾಜಿನ ನಂತರ ೩ ದಿನಗಳಲ್ಲಿ ಹರಾಜಿನ ಪೂರ್ತಿ ಹಣವನ್ನು ತುಂಬಬೇಕು. ತಪ್ಪಿದಲ್ಲಿ ಠೇವಣಿಯನ್ನು ಮುಟ್ಟುಗೋಲು ಹಾಕಿಕೊಂಡು ಪುನಃ ಹರಾಜು ನಡೆಸಲಾಗುವುದು ಎಂದು ತಹಶೀಲ್ದಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರಸು ನಿಗಮದಿಂದ ಅರ್ಜಿ ಆಹ್ವಾನ
ಯಾದಗಿರಿ, ಜನವರಿ ೦೮ (ಕರ್ನಾಟಕ ವಾರ್ತೆ): ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಹಿಂದುಳಿದ ವರ್ಗಗಳ ಜನರ ಆರ್ಥಿಕ ಅಭಿವೃದ್ಧಿಗಾಗಿ ೨೦೧೯-೨೦ನೇ ಸಾಲಿನಲ್ಲಿ ರಾಷ್ಟಿçÃಯ ಹಿಂದುಳಿದ ವರ್ಗಗಳ ಹಣಕಾಸು ಮತ್ತು ಅಭಿವೃದ್ಧಿ ನಿಗಮದ ಸಹಯೋಗದೊಂದಿಗೆ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಲ್ಲಿ ಸೌಲಭ್ಯ ಪಡೆಯಬಯಸುವವರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅವಧಿಸಾಲ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಕಡಿಮೆ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ, ನ್ಯೂ ಸ್ವರ್ಣಿಮಾ ಯೋಜನೆ, ಮೈಕ್ರೋ ಫೈನಾನ್ಸ್ ಸಾಲ ಯೋಜನೆ, ಮಹಿಳಾ ಸಮೃದ್ಧಿ ಯೋಜನೆ, ಚಿಕ್ಕ ಸಾಲ ಯೋಜನೆ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗದ ಫಲಾಪೇಕ್ಷಿಗಳು, ನಿಗದಿತ ಅರ್ಜಿ ನಮೂನೆಗಳನ್ನು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ಆಯಾ ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ವಿಸ್ತರಣಾಧಿಕಾರಿಗಳ ಕಚೇರಿಯಲ್ಲಿ ಹಾಗೂ ನಿಗಮದ ವೆಬ್‌ಸೈಟ್ www.karnataka.gov.in/dbcdc  ನಲ್ಲಿ ಅರ್ಜಿ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಜನವರಿ ೩೧ರೊಳಗೆ ಸಲ್ಲಿಸಬೇಕು. ಒಂದು ಬಾರಿ ನಿಗಮದ ಯಾವುದಾದರು ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
ಅರ್ಜಿದಾರರು ಹಿಂದುಳಿದ ವರ್ಗಗಳ ಪ್ರವರ್ಗ-೧, ೨ಎ, ೩ಎ ಮತ್ತು ೩ಬಿಗೆ ಸೇರಿದವರಾಗಿರಬೇಕು (ವಿಶ್ವಕರ್ಮ ಅದರ ಉಪ ಸಮುದಾಯಗಳನ್ನು ಮತ್ತು ಮತಿಯ ಅಲ್ಪಸಂಖ್ಯಾತರನ್ನು ಹೊರತುಪಡಿಸಿ) (ಕಬ್ಬಲಿಗ ಅದರ ಉಪ ಜಾತಿ ಹೊರತುಪಡಿಸಿ) (ಉಪ್ಪಾರ ಅದರ ಉಪ ಜಾತಿ ಹೊರತುಪಡಿಸಿ). ಅರ್ಜಿದಾರರ ವಯೋಮಿತಿ ೧೮ರಿಂದ ೫೫ ವರ್ಷ ಇದ್ದು, ಕುಟುಂಬದ ವಾರ್ಷಿಕ ವರಮಾನ ೩ ಲಕ್ಷ ರೂ. ಇರಬೇಕು. ಅರ್ಜಿದಾರರು ಆಧಾರ್ ಸಂಖ್ಯೆ, ಐ.ಎಫ್.ಸಿ. ಕೋಡ್ ಹೊಂದಿರುವ ರಾಷ್ಟಿçÃಕೃತ/ಗ್ರಾಮೀಣ ಬ್ಯಾಂಕ್ ಖಾತೆಗಳನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್: www.karnataka.gov.in/dbcdc ಸಂಪರ್ಕಿಸಬಹುವುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೌಶಲ್ಯ ತರಬೇತಿಗೆ ಹೆಸರು ನೋಂದಾಯಿಸಿ
ಯಾದಗಿರಿ, ಜನವರಿ ೦೮ (ಕರ್ನಾಟಕ ವಾರ್ತೆ): ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆಯಡಿ ೨೦೧೯-೨೦ನೇ ಸಾಲಿನಲ್ಲಿ ಯಾದಗಿರಿ ಜಿಲ್ಲೆಯಲ್ಲಿ ಈಗಾಗಲೇ ಕೌಶಲ್ಯ ಮಿಷನ್ ಬೆಂಗಳೂರು ವತಿಯಿಂದ ಅನುಮೋದನೆ ಪಡೆದುಕೊಂಡ ತರಬೇತಿ ಸಂಸ್ಥೆಗಳ ಮುಖಾಂತರ ನಿರುದ್ಯೋಗ ಯುವಕ, ಯುವತಿಯರು ಉಚಿತವಾಗಿ ವಿವಿಧ ಕೌಶಲ್ಯ ತರಬೇತಿಗಳನ್ನು ಪಡೆಯಲು ತಮ್ಮ ಹೆಸರನ್ನು kaushalkar.com  ನಲ್ಲಿ ನೋಂದಾಯಿಸಿಕೊಳ್ಳಬಹುದು.
ಬಿ.ಕಾA, ಬಿ.ಬಿ.ಎಮ್, ಬಿಬಿಎ, ಎಂ.ಕಾA ಮತ್ತು ಎಂ.ಬಿ.ಎ ಪದವಿ ಪಡೆದುಕೊಂಡವರುAccounts Executive (Accounts Payable & Receivable) ತರಬೇತಿ ಪಡೆಯಲು ಅರ್ಹತೆ ಹೊಂದಿರುತ್ತಾರೆ. ತಮ್ಮ ಹೆಸರನ್ನು kaushalkar.com ನಲ್ಲಿ ನೋಂದಾಯಿಸಿಕೊಳ್ಳಬಹುದು ಅಥವಾ ಶಹಾಪುರ ಟರ್ನಿಂಗ್ ಪಾಯಿಂಟ್ ಕಂಪ್ಯೂಟರ್ ತರಬೇತಿ ಕೇಂದ್ರವನ್ನು ಸಂಪರ್ಕಿಸಬಹುದು. ಜಿಲ್ಲೆಯ ಗ್ರಾಮೀಣ ಮತ್ತು ನಗರ ಪ್ರದೇಶದ ನಿರುದ್ಯೋಗ ಯುವಕ- ಯುವತಿಯರು ಉಚಿತವಾಗಿ ಕೌಶಲ್ಯ ತರಬೇತಿ ಪಡೆಯಲು ಇಚ್ಛಿಸಿದಲ್ಲಿ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಮೊ:೮೨೧೭೬೪೦೦೮೪, ೯೩೮೦೪೩೨೮೯೪, ೯೯೦೧೫೪೧೪೨೪ ಅವರನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ರಿಯಾಯಿತಿ ದರದಲ್ಲಿ ಪುಸ್ತಕ ಲಭ್ಯ
ಯಾದಗಿರಿ, ಜನವರಿ ೦೮ (ಕರ್ನಾಟಕ ವಾರ್ತೆ): ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಗಣರಾಜ್ಯೋತ್ಸವದ ಪ್ರಯುಕ್ತ ಜನವರಿ ೩೧ರವರೆಗೆ ಶೆ.೫೦ರ ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತದೆ. ಆನ್‌ಲೈನ್ ವೆಬ್‌ಸೈಟ್ www.kuvempubhashabharati.org ಮೂಲಕವು ಶೇ.೫೦ರ ರಿಯಾಯಿತಿ ದರದಲ್ಲಿ ಪುಸ್ತಕಗಳನ್ನು ಖರೀದಿಸಬಹುದು. ಓದುಗರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...