ಸಿಆರ್‌ಪಿ, ಬಿಆರ್‌ಪಿ ಲಿಖಿತ ಪರೀಕ್ಷೆ ಮುಂದೂಡಿಕೆ
ಯಾದಗಿರಿ, ಜನವರಿ ೧೦ (ಕರ್ನಾಟಕ ವಾರ್ತೆ): ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕ ವೃಂದದ ಸಿ.ಆರ್.ಪಿ/ಬಿ.ಆರ್.ಪಿ/ಶಿಕ್ಷಣ ಸಂಯೋಜಕರ ಹುದ್ದೆಗಳಿಗೆ ಜನವರಿ ೧೧ ರಂದು ಹಾಗೂ ೧೨ ರಂದು ಲಿಖಿತ ಪರೀಕ್ಷೆಯನ್ನು ನಡೆಸುವಂತೆ ತಿಳಿಸಲಾಗಿತ್ತು. ಮಾನ್ಯ ಆಯುಕ್ತರು ಸಾ.ಶಿ.ಇ ರವರ ಮೌಖಿಕ ಆದೇಶದಂತೆ ಅನಿವಾರ್ಯ ಕಾರಣಗಳಿಂದ ಸದರಿ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಪರೀಕ್ಷಾ ದಿನಾಂಕವನ್ನು ಅತೀ ಶೀಘ್ರದಲ್ಲಿ ತಿಳಿಸಲಾಗುವುದು ಎಂದು ಕೆಎಸ್‌ಕ್ಯುಎಎಸಿ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ