ಶುಕ್ರವಾರ, ಜನವರಿ 3, 2020

ಬಂದಳ್ಳಿ ವಸತಿನಿಲಯ ಪಾಲಕ ಅಮಾನತು
ಯಾದಗಿರಿ, ಜನವರಿ ೦೩ (ಕರ್ನಾಟಕ ವಾರ್ತೆ): ತಾಲ್ಲೂಕಿನ ಬಂದಳ್ಳಿ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿನಿಲಯ ಪಾಲಕ ಅನಿಲಕುಮಾರ ಪಾಂಚಾಳ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.
ಪಶುಸಂಗೋಪನೆ, ಅಲ್ಪ ಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಬಿ.ಚವ್ಹಾಣ್ ಅವರು ಗುರುವಾರ ರಾತ್ರಿ ವಸತಿನಿಲಯಕ್ಕೆ ಅನಿರೀಕ್ಷಿತ ಭೇಟಿ ನೀಡಿದಾಗ, ನಿಲಯಪಾಲಕ ಅನಿಲಕುಮಾರ ಪಂಚಾಳ ಅವರು ಸ್ಥಳದಲ್ಲಿರಲಿಲ್ಲ. ವಿದ್ಯಾರ್ಥಿ ನಿಲಯದಲ್ಲಿ ಹಲವಾರು ನ್ಯೂನತೆಗಳು ಹಾಗೂ ಕುಂದುಕೊರತೆಗಳು ಕಂಡುಬAದಿವೆ. ವಸತಿನಿಲಯ ಹಾಗೂ ಆವರಣದಲ್ಲಿ ಸ್ವಚ್ಛತೆ ಕಾಪಾಡದಿರುವುದನ್ನು ಕಂಡು ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿದಾಗ ಮೊಬೈಲ್ ಸಂಖ್ಯೆ ಚಾಲ್ತಿಯಲ್ಲಿರಲಿಲ್ಲ. ಸಚಿವರ ಭೇಟಿ ಸಮಯದಲ್ಲಿ ಉದ್ದೇಶಪೂರ್ವಕವಾಗಿಯೇ ಗೈರು ಹಾಜರಾಗಿರುವುದು ಕಂಡುಬAದಿದೆ. ಸಿಬ್ಬಂದಿಯ ಕರ್ತವ್ಯಲೋಪ, ಬೇಜವಾಬ್ದಾರಿತನದ ವರ್ತನೆ, ಅಶಿಸ್ತಿನ ನಡವಳಿಕೆ ಹಿನ್ನೆಲೆಯಲ್ಲಿ ಅವರನ್ನು ಅಮಾನತಿನಲ್ಲಿಡಲು ಸಚಿವರು ಶಿಫಾರಸು ಮಾಡಿರುತ್ತಾರೆ.
ಅಲ್ಲದೇ, ಈ ಹಿಂದೆ ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳು, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿಗಳು ಭೇಟಿ ನೀಡಿ ನೋಟಿಸ್ ನೀಡಿದರೂ ಅನಿಲಕುಮಾರ ಪಾಂಚಾಳ ಅವರಲ್ಲಿ ಯಾವುದೇ ಸುಧಾರಣೆ ಕಂಡುಬAದಿರುವುದಿಲ್ಲ. ಹಾಗಾಗಿ, ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳ ೧೯೫೭ರ ೧೦(೮)(೨) ನಿಯಮದಡಿ ಅನಿಲಕುಮಾರ ಅವರನ್ನು ಇಲಾಖಾ ವಿಚಾರಣೆ ಕಾಯ್ದಿರಿಸಿ ತಕ್ಷಣ ಜಾರಿಗೆ ಬರುವಂತೆ ಅಮಾನತಿಲ್ಲಿಟ್ಟು ಆದೇಶಿಸಿದ್ದಾರೆ. ಅಮಾನತಿನ ಅವಧಿಯಲ್ಲಿ ಜೀವನ ನಿರ್ವಹಣಾ ಭತ್ಯೆ ಪಡೆಯಲು ಅರ್ಹರಿದ್ದು, ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಪಡೆಯದೇ ಕೇಂದ್ರ ಸ್ಥಾನವನ್ನು ಬಿಡತಕ್ಕದಲ್ಲ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...