ಭಾನುವಾರ, ಜನವರಿ 19, 2020

ವಿದ್ಯುತ್ ಅವಘಡ ತಡೆಗೆ ಅಗತ್ಯ ಕ್ರಮ
-ಡಾ.ಆರ್.ರಾಗಪ್ರಿಯಾ
ಯಾದಗಿರಿ, ಜನವರಿ ೧೮ (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ನಿರಂತರ ವಿದ್ಯುತ್ ಪೂರೈಸಲು ಹಾಗೂ ವಿದ್ಯುತ್ ಅವಘಡÀ ಆಗದಂತೆ ತಡೆಯಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಆರ್.ರಾಗಪ್ರಿಯಾ ಅವರು ತಿಳಿಸಿದರು.
ನಗರದ ಜೆಸ್ಕಾಂ ವಿಭಾಗೀಯ ಕಚೇರಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ “ವಿದ್ಯುತ್ ಗ್ರಾಹಕರ ಸಂವಾದ ಸಭೆ”ಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.
ವಿದ್ಯುತ್ ಸುರಕ್ಷತಾ ಸಮಸ್ಯೆಗಳನ್ನು ಕಾರ್ಯನಿರ್ವಾಹಕ ಅಭಿಯಂತರವರ ಅವಗಹನೆಗೆ ತಂದಿದ್ದು, ಅವುಗಳನ್ನು ಈಗಾಗಲೇ ಪರಿಹರಿಸಲಾಗಿದೆ. ಕೆಲವೊಂದನ್ನು ಶೀಘ್ರದಲ್ಲಿಯೇ ಇತ್ಯರ್ಥಗೊಳಿಸಲಾಗುವುದು. ಗ್ರಾಹಕರು ಸಮಯಕ್ಕೆ ಸರಿಯಾಗಿ ವಿದ್ಯುತ್ ಬಿಲ್‌ಗಳನ್ನು ಪಾವತಿಸಬೇಕು ಎಂದು ತಿಳಿಸಿದರು.
ಮಾರ್ಗದಾಳುಗಳು ಕಡ್ಡಾಯವಾಗಿ ಸುರಕ್ಷತಾ ಉಪಕರಣಗಳನ್ನು ಬಳಸಿ, ಅಚ್ಚುಕಟ್ಟಾಗಿ ಕೆಲಸ ನಿರ್ವಹಿಸಬೇಕು. ಗ್ರಾಹಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವAತೆ ಅವರು ಈ ಸಂದರ್ಭದಲ್ಲಿ ಸೂಚಿಸಿದರು.
ಸಭೆಯಲ್ಲಿ ಭಾಗವಹಿಸಿದ್ದ ರೈತರು ಮತ್ತು ವಿದ್ಯುತ್ ಗ್ರಾಹಕರು ಮಾತನಾಡಿ, ಹಳೆ ವಿದ್ಯುತ್ ತಂತಿಗಳನ್ನು ಬದಲಾಯಿಸಬೇಕು. ಬೀದಿದೀಪಗಳ ಮತ್ತು ನೀರು ಸರಬರಾಜು ಸ್ಥಾವರಗಳಿಗೆ ಮೀಟರ್ ಅಳವಡಿಸಬೇಕೆಂದು ಕೋರಿದರು. ಯಾದಗಿರಿ ನಗರದ ಕೈಗಾರಿಕಾ ಕೇಂದ್ರಗಳಿಗೆ ಉತ್ತಮ ಗುಣಮಟ್ಟದ ವಿದ್ಯುತ್ ಸರಬರಾಜು ಮಾಡಿರುವುದರಿಂದ ವ್ಯವಸ್ಥಾಪಕ ನಿರ್ದೇಶಕರಿಗೆ ಕೃತಜ್ಞತೆಯನ್ನು ಸಲ್ಲಿಸಿದರು.
ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ವೃತ್ತದ ಪ್ರಭಾರಿ ಅಧೀಕ್ಷಕ ಇಂಜಿನಿಯರ್ ಬಸವರಾಜ ಪಾಟೀಲ್, ಯಾದಗಿರಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ರಾಘವೇಂದ್ರ ಹಾಗೂ ಉಪ ವಿಭಾಗಗಳ ಅಧಿಕಾರಿ, ಸಿಬ್ಬಂದಿಗಳು ಸಭೆಯಲ್ಲಿ ಹಾಜರಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...