ಭಾನುವಾರ, ಜನವರಿ 26, 2020

ವಿದ್ಯಾಮಂಗಲ ಕಾರ್ಯಾಲಯದಲ್ಲಿ ಎರಡು ದಿನ ಪ್ರದರ್ಶನ 
ಫಲಪುಷ್ಪ ಪ್ರದರ್ಶನ, ಸಾವಯವ ಸಿರಿಧಾನ್ಯ ಮೇಳಕ್ಕೆ ಚಾಲನೆ
ಯಾದಗಿರಿ, ಜನವರಿ ೨೬ (ಕರ್ನಾಟಕ ವಾರ್ತೆ): ತೋಟಗಾರಿಕೆ, ಕೃಷಿ ಹಾಗೂ ಕೃಷಿ ಸಂಬAಧಿತ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಗರದ ಸ್ಟೇಷನ್ ರಸ್ತೆಯ ವಿದ್ಯಾಮಂಗಲ ಕಾರ್ಯಾಲಯದಲ್ಲಿ ಎರಡು ದಿನಗಳವರೆಗೆ ಹಮ್ಮಿಕೊಂಡಿರುವ ಫಲ ಪುಷ್ಪ ಪ್ರದರ್ಶನ ಹಾಗೂ ಸಾವಯವ ಸಿರಿಧಾನ್ಯ ಮೇಳಕ್ಕೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಜಶೇಖರಗೌಡ ಪಾಟೀಲ್ ವಜ್ಜಲ್ ಅವರು ಭಾನುವಾರ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಅಧ್ಯಕ್ಷರು, ಫಲ ಪುಷ್ಪ ಪ್ರದರ್ಶನ ಹಾಗೂ ಸಾವಯವ ಸಿರಿಧಾನ್ಯ ಮೇಳವನ್ನು ಅಚ್ಚುಕಟ್ಟಾಗಿ ಆಯೋಜಿಸಲಾಗಿದೆ. ಹೆಚ್ಚಿನ ರೈತರು ಪ್ರದರ್ಶನವನ್ನು ವೀಕ್ಷಿಸಬೇಕು. ತುಂತುರು ಮತ್ತು ಸೂಕ್ಷö್ಮ ಹನಿ ನೀರಾವರಿ ಹಾಗೂ ಜಲ ಕೃಷಿ ಅಳವಡಿಕೆ ಪದ್ಧತಿ ಕುರಿತು ತಾಂತ್ರಿಕವಾಗಿ ರೈತರಿಗೆ ಮಾಹಿತಿ ನೀಡಲಾಗುತ್ತಿದೆ. ಮೇಳದಲ್ಲಿ ಪ್ರದರ್ಶನಕ್ಕಿಡಲಾದ ಫಲಪುಷ್ಪಗಳನ್ನು ಬೆಳೆದ ಕ್ರಮಗಳ ಬಗ್ಗೆ ಮಾಹಿತಿ ಪಡೆದು ತಮ್ಮ ಜಮೀನುಗಳಲ್ಲಿ ಪ್ರಯೋಗ ಮಾಡಬೇಕು ಎಂದು ಸಲಹೆ ನೀಡಿದರು. ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಮಾತನಾಡಿ, ಫಲಪುಷ್ಪ ಪ್ರದರ್ಶನ ಮತ್ತು ಸಿರಿಧಾನ್ಯಗಳ ಮೇಳಗಳ ಕಾರ್ಯಕ್ರಮದಡಿ ಇಲಾಖೆ ವತಿಯಿಂದ ರೈತರು ಬೆಳೆದಿರುವ ವಿವಿಧ ನಮೂನೆಯ ಹೂವು, ಹಣ್ಣು ಮತ್ತು ತರಕಾರಿ ಪ್ರದರ್ಶಿಸಲಾಗುತ್ತಿದೆ. ಫಲ ಪುಷ್ಪ ಪ್ರದರ್ಶನ ಹಾಗೂ ಸಾವಯವ ಸಿರಿಧಾನ್ಯ ಮೇಳದಲ್ಲಿ ಹೂವಿನಿಂದ ನಿರ್ಮಿಸಿದ ಮಿನಿ ವಿಧಾನಸೌಧ ಗಮನ ಸೆಳೆಯುತ್ತಿದೆ. ಜೇನು ಕೃಷಿ ಸೇರಿದಂತೆ ಇತ್ಯಾದಿ ಮಾಹಿತಿಯನ್ನೊಳಗೊಂಡ ಪ್ರದರ್ಶನವನ್ನು ಜಿಲ್ಲೆಯ ರೈತರು ಹಾಗೂ ಸಾರ್ವಜನಿಕರು ವೀಕ್ಷಿಸಲು ತಿಳಿಸಿದರು.

ನರ್ಸರಿಯಲ್ಲಿ ಬೆಳೆದಿರುವ ವಿವಿಧ ಜಾತಿಯ ಹಣ್ಣು ಮತ್ತು ಅಲಂಕಾರಿಕ ಸಸ್ಯಗಳನ್ನು ಪ್ರದರ್ಶನ ಮತ್ತು ಸರ್ಕಾರ ನಿಗಧಿಪಡಿಸಿದ ಅತೀ ಕಡಿಮೆ ದರದಲ್ಲಿ ಮಾರಾಟಕ್ಕಿಡಲಾಗಿದೆ ಎಂದು ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಮಲ್ಲಿಕಾರ್ಜುನ ಬಾಬು ಅವರು ಈ ಸಂದರ್ಭದಲ್ಲಿ ತಿಳಿಸಿದರು. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಗಿರಿಜಮ್ಮ ಸದಾಶಿವಪ್ಪ ರೊಟ್ನಡಗಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ²¯Áà ±ÀªÀiÁð, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನವಣೆ, ಸಹಾಯಕ ಆಯುಕ್ತರಾದ ಶಂಕರಗೌಡ ಎಸ್.ಸೋಮನಾಳ, ಜಂಟಿ ಕೃಷಿ ನಿರ್ದೇಶಕರಾದ ಆರ್.ದೇವಿಕಾ, ಕೃಷಿ ಇಲಾಖೆಯ ಉಪನಿರ್ದೇಶಕರಾದ ಸಮದ್ ಪಟೇಲ್ ಸೇರಿದಂತೆ ತೋಟಗಾರಿಕಾ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...