ಹಿಂದೂಸ್ತಾನಿ ಸಂಗೀತ ನೃತ್ಯ ತರಬೇತಿ
ಯಾದಗಿರಿ, ಜನವರಿ ೦೮ (ಕರ್ನಾಟಕ ವಾರ್ತೆ): ತಾಲ್ಲೂಕಿನ ಲಿಂಗೇರಿ ಸ್ಟೇಷನ್ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಇತ್ತೀಚೆಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯಲ್ಲಿ ಆಯ್ಕೆಗೊಂಡ ಶಾಲಾ ಮಕ್ಕಳಿಗೆ ಎಸ್‌ಪಿಐಸಿ, ಎಂಎಸಿಎವೈ ಎನ್‌ಜಿಒ ದೆಹಲಿ ಅವರ ವತಿಯಿಂದ ವಸತಿ ಶಾಲೆಯ ಮಕ್ಕಳಿಗೆ ಹಿಂದೂಸ್ತಾನಿ ಸಂಗೀತ ಪ್ರಕಾರ ನೃತ್ಯ ತರಬೇತಿಯನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಮಂಜುಳಾ ಮೂರ್ತಿ ಅವರು ತರಬೇತಿ ನೀಡಿದರು. ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಚನ್ನಬಸ್ಸಪ್ಪ, ಕ್ಷೇತ್ರ ಶಿಕ್ಷಣಾದಿಕಾರಿ ಚಂದ್ರಕಾAತರೆಡ್ಡಿ, ದೈಹಿಕ ಶಿಕ್ಷಣಾಧಿಕಾರಿ ವಿಶ್ವನಾಥ ಕೆ, ಶರಣಪ್ಪ ದಳಪತಿ ಶೆಟ್ಟಿಗೇರಾ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಶಾಲೆಯ ಪ್ರಾಂಶುಪಾಲರಾದ ಶಾಂತಾ ಸಜ್ಜನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರಾಘವೇಂದ್ರ ದಳಪತಿ ನಿರೂಪಿಸಿದರು. ಸಂಗೀತ ಶಿಕ್ಷಕರಾದ ಚಂದ್ರಶೇಖರ ಗೋಗಿ ಅವರು ವಂದಿಸಿದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ