ಗುರುವಾರ, ಜನವರಿ 9, 2020

ತೊಗರಿ ಖರೀದಿ ಅವಧಿ ವಿಸ್ತರಣೆ
ಯಾದಗಿರಿ, ಜನವರಿ ೦೯ (ಕರ್ನಾಟಕ ವಾರ್ತೆ): ೨೦೧೯-೨೦ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ತೊಗರಿ ಖರೀದಿಸಲು ತಾಂತ್ರಿಕ ಕಾರಣಗಳಿಂದ ನೋಂದಣಿ ಪ್ರಕ್ರಿಯೆಯು ತಾತ್ಕಾಲಿಕವಾಗಿ ಸ್ಥಗಿವಾಗಿರುವ ಕಾರಣ ನೋಂದಣಿ ಅವಧಿಯನ್ನು ಜನವರಿ ೩೧ರ ವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಸಲು ಈಗಾಗಲೇ ೩೪ ಖರೀದಿ ಕೇಂದ್ರಗಳನ್ನು ಗುರುತಿಸಲಾಗಿರುತ್ತದೆ. ನೋಂದಣಿ ಮಾಡಿಕೊಂಡ ರೈತರ ತೊಗರಿಯನ್ನು ಖರೀದಿಸುವ ಕಾಲಾವಧಿಯನ್ನು ಫೆಬ್ರುವರಿ ೨೦ರವರೆಗೆ ವಿಸ್ತರಿಸಲಾಗಿದೆ. ಆದರೆ, ತಾಂತ್ರಿಕ ಕಾರಣಗಳಿಂದಾಗಿ ತಾತ್ಕಾಲಿಕವಾಗಿ ನೋಂದಣಿ ಪ್ರಕ್ರಿಯೆ ಪ್ರಾರಂಭಗೊAಡಿರುವುದಿಲ್ಲ. ತೊಗರಿ ಖರೀದಿಸಲು ರೈತರ ನೋಂದಣಿಯನ್ನು ಶೀಘ್ರದಲ್ಲಿ ಆರಂಭಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಜ.೧೩ಕ್ಕೆ ಅಂಬಿಗರ ಚೌಡಯ್ಯ ಜಯಂತಿ ಪೂರ್ವಸಿದ್ಧತಾ ಸಭೆ
ಯಾದಗಿರಿ, ಜನವರಿ ೦೯ (ಕರ್ನಾಟಕ ವಾರ್ತೆ): ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜನವರಿ ೨೧ರಂದು ಅಂಬಿಗರ ಚೌಡಯ್ಯ ಜಯಂತಿಯನ್ನು ವಿಜೃಂಭಣೆಯಿAದ ಆಚರಣೆ ಮಾಡಲು ಪೂರ್ವ ಸಿದ್ಧತಾ ಸಭೆಯನ್ನು ಜನವರಿ ೧೩ರಂದು ಸಾಯಂಕಾಲ ೪ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಸಂಘ-ಸAಸ್ಥೆಗಳ ಪ್ರತಿನಿಧಿಗಳು ಹಾಜರಾಗುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಜ.೧೩ರಂದು ವೇಮನ ಜಯಂತಿ ಪೂರ್ವಸಿದ್ಧತಾ ಸಭೆ 
ಯಾದಗಿರಿ, ಜನವರಿ ೦೯ (ಕರ್ನಾಟಕ ವಾರ್ತೆ): ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜನವರಿ ೧೯ರಂದು ಮಹಾಯೋಗಿ ವೇಮನ ಜಯಂತಿಯನ್ನು ವಿಜೃಂಭಣೆಯಿAದ ಆಚರಣೆ ಮಾಡಲು ಪೂರ್ವ ಸಿದ್ಧತಾ ಸಭೆಯನ್ನು ಜನವರಿ ೧೩ರಂದು ಸಾಯಂಕಾಲ ೫ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಸಂಘ-ಸAಸ್ಥೆಗಳ ಪ್ರತಿನಿಧಿಗಳು ಹಾಜರಾಗುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...