ಶುಕ್ರವಾರ, ಜನವರಿ 3, 2020

ವಿವಿಧ ಗ್ರಾಮದ ಅಂಗಡಿಗಳ ಮೇಲೆ ಅನಿರೀಕ್ಷಿತ ದಾಳಿ
ನಿಷೇಧಿತ ಪ್ಲಾಸ್ಟಿಕ್, ತಂಬಾಕು ಮಾರಾಟ: ೨೭ ಪ್ರಕರಣ ದಾಖಲು
ಯಾದಗಿರಿ, ಜನವರಿ ೦೩ (ಕರ್ನಾಟಕ ವಾರ್ತೆ): ತಾಲ್ಲೂಕಿನ ವಿಶ್ವಾಸಪುರ, ಬಸವಂತಪುರ, ಠಾಣಗುಂದಿ, ಕ್ಯಾಸಪನಹಳ್ಳಿ ಹಾಗೂ ಅಲ್ಲಿಪುರ ಗ್ರಾಮಗಳ ಸ್ಟಾಲ್, ಮಳಿಗೆ, ಅಂಗಡಿಗಳ ಮೇಲೆ ಗುರುವಾರ ಅನಿರೀಕ್ಷಿತ ದಾಳಿ ನಡೆಸಿದ ಅಧಿಕಾರಿಗಳ ತಂಡ ಪ್ಲಾಸ್ಟಿಕ್, ತಂಬಾಕು ಉತ್ಪನ್ನಗಳನ್ನು ವಶಪಡಿಸಿಕೊಂಡಿದೆ. ದಾಳಿಯಲ್ಲಿ ಒಟ್ಟು ೨೭ ಪ್ರಕರಣಗಳನ್ನು ದಾಖಲಿಸಿಕೊಂಡು, ೮ ಸಾವಿರ ರೂ.ಗಳಿಗೂ ಅಧಿಕ ದಂಡ ವಿಧಿಸಲಾಗಿದೆ.
ಜಿಲ್ಲಾ ಬಾಲಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕರಾದ ರಘುವೀರಸಿಂಗ್ ಠಾಕೂರ್ ಅವರು ಈ ಸಂದರ್ಭದಲ್ಲಿ ಮಾತನಾಡಿ, ಜಿಲ್ಲಾಧಿಕಾರಿಗಳ ಆದೇಶ ಮೇರೆಗೆ ದಾಳಿ ನಡೆಸಲಾಗಿದೆ. ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಬಳಸುವುದು ಕಾನೂನು ಪ್ರಕಾರ ಅಪರಾಧವಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕುವುದು ನಿಷೇಧಿಸಲಾಗಿದ್ದು, ಉಲ್ಲಂಘಿಸಿದಲ್ಲಿ ೨೫೦೦೦ ರೂ.ಗಳವರೆಗೆ ದಂಡ ವಿಧಿಸುವುದರ ಜೊತೆಗೆ ಶಿಕ್ಷೆಗೆ ಒಳಪಡಬೇಕಾಗುತ್ತದೆ ಎಂದು ಹೇಳಿದರು.ಬಾಲಕಾರ್ಮಿಕ ಪದ್ಧತಿ ೧೯೮೬ರ ಕಾಯ್ದೆಯಡಿಯಲ್ಲಿ ೬ ರಿಂದ ೧೮ ವರ್ಷದೊಳಗಿನ ಮಕ್ಕಳನ್ನು ಯಾವುದೇ ಅಪಾಯಕಾರಿ ಉದ್ದಿಮೆಗಳಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ. ಅನಿರೀಕ್ಷಿತ ತಪಾಸಣೆ ವೇಳೆ ಪತ್ತೆಯಾದ ಮಕ್ಕಳ ದಾಖಲೆಗಳನ್ನು ವೀಕ್ಷಿಸಿ, ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಸೇರಿಸಲು ಸೂಚಿಸಲಾಗಿದೆ. ಒಂದು ವೇಳೆ ಕಾನೂನು ಉಲ್ಲಂಘನೆ ಮಾಡಿದಲ್ಲಿ ಮಾಲೀಕರಿಗೆ ೫೦,೦೦೦ ರೂ. ಗಳ ದಂಡ ವಿಧಿಸಲಾಗುತ್ತದೆ. ಜೊತೆಗೆ ಜೈಲು ವಾಸ ಕೂಡ ವಿಧಿಸಬಹುದು ತಿಳಿಸಿದರು.
ಸಾಕಷ್ಟು ಬಾರಿ ಜಾಥಾ ಮೂಲಕ, ಆಟೊ ಪ್ರಚಾರ, ಕರಪತ್ರಗಳ ವಿತರಣೆ, ಕಾನೂನು ಅರಿವು- ನೆರವು ಕಾರ್ಯಕ್ರಮಗಳು ಮತ್ತು ಹಲವಾರು ಬಾರಿ ಅನಿರೀಕ್ಷಿತ ತಪಾಸಣೆ, ದಾಳಿ ಮಾಡಿ ಸಾರ್ವಜನಿಕರಿಗೆ ಹಾಗೂ ಸಬಂಧಿಸಿದ ಅಂಗಡಿ ಮಾಲೀಕರುಗಳಿಗೆ ಮಾಹಿತಿ ನೀಡಿದರೂ ಸಹ ಹಲವಾರು ಅಂಗಡಿ ಮಾಲೀಕರು ನಿಯಮಗಳನ್ನು ಉಲ್ಲಂಘಿಸಿ, ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಬಳಸುತ್ತಿರುವುದು, ಬಹಿರಂಗವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಹಾಗೂ ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಕಂಡುಬರುತ್ತಿದೆ. ಈ ಹಿನ್ನೆಲೆಯಲ್ಲಿ ದಾಳಿ ನಡೆಸಿ, ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ ಎಂದರು.
ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರರಾದ ಮಹಾಲಕ್ಷಿö ಸಜ್ಜನ್ ಅವರು ಮಾತನಾಡಿ, ಕೋಟ್ಪಾ-೨೦೦೩ ಕಾಯ್ದೆಯಡಿಯಲ್ಲಿ ಸೆಕ್ಷನ್ ೪, ೫, ೬, ೬ಎ, ೬ಬಿ ಮತ್ತು ೭ರ ಪ್ರಕಾರ ಸಂಬAಧಿಸಿದ ಕಾಯ್ದೆಗಳನುಸಾರ ಹೋಟೆಲ್, ರೆಸ್ಟೊರೆಂಟ್, ಬಾರ್, ಧಾಬಾ, ಅಂಗಡಿಗಳಲ್ಲಿ ಮತ್ತು ಶಾಲಾ-ಕಾಲೇಜು ಪ್ರದೇಶದ ೧೦೦ ಮೀಟರ್ ಅಂತರದಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕಿಗೆ ಸಂಬAಧಿಸಿದ ಉತ್ಪನ್ನಗಳನ್ನು ಬಹಿರಂಗವಾಗಿ ಮಕ್ಕಳಿಂದ ಮಾರುವುದಕ್ಕೆ ಪ್ರಚೋದನೆ ನೀಡುವುದು, ದುಡಿಸಿಕೊಳ್ಳುವುದು ಮತ್ತು ಸೇದುವುದು ಕಾನೂನಿನ ಪ್ರಕಾರ ನಿಷೇಧಿಸಲಾಗಿರುತ್ತದೆ. ನಿಯಮಗಳನ್ನು ಉಲ್ಲಂಘಿಸಿದಲ್ಲಿ ದಂಡ ವಿಧಿಸುವುದರ ಜೊತೆಗೆ ಶಿಕ್ಷೆಗೆ ಒಳಪಡಬೇಕಾಗುತ್ತದೆ ಎಂದು ತಿಳಿವಳಿಕೆ ನೀಡಿದರು.
ದಾಳಿಯಲ್ಲಿ ಅಂಗಡಿಗಳ ಮಾಲೀಕರಿಗೆ ದಂಡ ವಿಧಿಸಲಾಗಿದೆ. ಸೆಕ್ಷೆನ್ ೫ರಲ್ಲಿ ೬ ನೋಟಿಸು ನೀಡಲಾಗಿರುತ್ತದೆ. ಸೆಕ್ಷನ್ ೭ರಲ್ಲಿ ೩ ನೋಟಿಸು ನೀಡಲಾಗಿರುತ್ತದೆ ಎಂದು ಮಾಹಿತಿ ನೀಡಿದರು.
ಕಾರ್ಮಿಕ ಇಲಾಖೆಯ ಚಂದ್ರಶೇಖರ ಬಂದಳ್ಳಿ, ಅಮೃತರಾವ್ ಕೊತ್ವಾಲ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳಾದ ಸಾಬಯ್ಯ ಮತ್ತು ವೆಂಕಟೇಶ ಅವರು ದಾಳಿಯಲ್ಲಿ ಪಾಲ್ಗೊಂಡಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...