ಸೋಮವಾರ, ಜನವರಿ 6, 2020

ಜ.೧೮ರಂದು ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತ್ಯೋತ್ಸವ
ಯಾದಗಿರಿ, ಜನವರಿ ೦೬ (ಕರ್ನಾಟಕ ವಾರ್ತೆ): ಜಿಲ್ಲಾಡಳಿತದ ವತಿಯಿಂದ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಜನವರಿ ೧೮ರಂದು ಬೆಳಿಗ್ಗೆ ೧೧ ಗಂಟೆಗೆ ಯಾದಗಿರಿ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕರಾದ ಪಂಡಿತ ಬಿರಾದಾರ ಅವರ ಅಧ್ಯಕ್ಷತೆಯಲ್ಲಿ ನಡೆದ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತ್ಯೋತ್ಸವ ಪೂರ್ವಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. ಯಾದಗಿರಿ ತಾಲ್ಲೂಕಿನ ಮೈಲಾಪುರದ ಶ್ರೀ ಮೈಲಾರಲಿಂಗೇಶ್ವರ ಜಾತ್ರೆ ಹಾಗೂ ಮಕರ ಸಂಕ್ರಮಣ ಹಬ್ಬವು ಜನವರಿ ೧೪ ಮತ್ತು ೧೫ರಂದು ಜರುಗುವ ಪ್ರಯುಕ್ತ ಜ.೧೪ರಂದು ಆಚರಿಸಬೇಕಾದ ಜಯಂತಿಯನ್ನು ಸಮಾಜದ ಮುಖಂಡರ ಒಪ್ಪಿಗೆಯ ಮೇರೆಗೆ ಜನವರಿ ೧೮ರಂದು ಆಚರಿಸಲು ನಿರ್ಧರಿಸಲಾಯಿತು.
ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕರಾದ ಪಂಡಿತ ಬಿರಾದಾರ ಅವರು ಮಾತನಾಡಿ, ಜಯಂತ್ಯೋತ್ಸವ ಅಂಗವಾಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಅಂದು ಬೆಳಿಗ್ಗೆ ೯ ಗಂಟೆಗೆ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಗುವುದು. ಅದರಂತೆ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿ ಹಾಗೂ ಸರ್ಕಾರಿ, ಅನುದಾನಿತ ಶಾಲಾ-ಕಾಲೇಜುಗಳಲ್ಲಿಯೂ ಸಹ ಶ್ರದ್ಧಾ, ಭಕ್ತಿಯೊಂದಿಗೆ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಬೇಕು. ತಹಶೀಲ್ದಾರರು ತಾಲ್ಲೂಕು ಮಟ್ಟದಲ್ಲಿ ಸದರಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಬೇಕು ಎಂದು ಸೂಚಿಸಿದರು.
ಜಿಲ್ಲಾಡಳಿತ ಕಾರ್ಯಕ್ರಮದ ಪೂರ್ವದಲ್ಲಿ ನಡೆಯುವ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಭಾವಚಿತ್ರದ ಮೆರವಣಿಗೆಗಾಗಿ ಸಮಾಜದ ಸಂಘಟನೆಗೆ ಒಂದು ದಿನ ಮುಂಚಿತವಾಗಿ ಟ್ರಾö್ಯಕ್ಟರ್ ನೀಡಬೇಕು. ಮೆರವಣಿಗೆಯಲ್ಲಿ ಡೊಳ್ಳುಕುಣಿತ ಅಥವಾ ಇನ್ನಿತರೆ ಒಂದು ನುರಿತ ಕಲಾವಿದರ ತಂಡವನ್ನು ಏರ್ಪಾಡು ಮಾಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ದತ್ತಪ್ಪ ಸಾಗನೂರ ಅವರಿಗೆ ನಿರ್ದೇಶಿಸಿದರು.
 ಜಿಲ್ಲಾಡಳಿತ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಮಾಜದ ಮುಖಂಡರು, ವಿದ್ಯಾರ್ಥಿಗಳು, ಸಭಿಕರಿಗೆ ಉಪಾಹಾರ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಲು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಮತ್ತು ಜಿಲ್ಲಾ ಅಂಕಿತ ಅಧಿಕಾರಿಗಳಿಗೆ ವಹಿಸಲಾಯಿತು. ಜಯಂತಿಯಲ್ಲಿ ಶಾಂತಿ, ಸುವ್ಯವಸ್ಥೆಯನ್ನು ಕಾಪಾಡಲು ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡುವಂತೆ ಜಿಲ್ಲಾ ಪೊಲೀಸ್ ಇಲಾಖೆಗೆ ತಿಳಿಸಲಾಯಿತು.
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರಾದ ದತ್ತಪ್ಪ ಕಲ್ಲೂರ, ಜಿಲ್ಲಾ ಭೋವಿ ಸಮಾಜದ ಅಧ್ಯಕ್ಷರಾದ ನಾಗಪ್ಪ, ಸಮಾಜದ ಮುಖಂಡರಾದ ಚಂದಪ್ಪ ಧೋತ್ರೆ, ಹಣಮಂತ ವಲ್ಯಾಪುರ, ಗೋಪಾಲ್ ಕಣೇಕಲ್, ಚಂದಪ್ಪ ಕಿಲ್ಲನಕೇರಾ, ಹಣಮಂತ ಬಳಿಚಕ್ರ, ಲಘುಮಣ್ಣ ಮುಂಡರಗಿ, ನಾಗಲಿಂಗಪ್ಪ ಹೊನಿಗೇರಾ, ಬಾಲರಾಜ, ಕೊಟ್ರಪ್ಪ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...