ಶುಕ್ರವಾರ, ಜನವರಿ 10, 2020

ಜಿಲ್ಲಾ ಮತದಾರರ ಪಟ್ಟಿ ವೀಕ್ಷಕರಿಂದ ಮನೆಮನೆ ಭೇಟಿ

ಯಾದಗಿರಿ, ಜನವರಿ ೧೦ (ಕರ್ನಾಟಕ ವಾರ್ತೆ): ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಜಿಲ್ಲಾ ಮತದಾರರ ಪಟ್ಟಿ ವೀಕ್ಷಕರಾದ ಡಾ. ಜೆ.ರವಿಶಂಕರ್ ಅವರು ಯಾದಗಿರಿ ತಾಲ್ಲೂಕಿನ ಅಲ್ಲಿಪುರ ಗ್ರಾಮದ ಮತದಾರರ ಮನೆಗಳಿಗೆ ಶುಕ್ರವಾರ ಭೇಟಿ ನೀಡಿ, ಮತದಾರರೊಂದಿಗೆ ಚರ್ಚೆ ನಡೆಸಿದರು.
ಕರಡು ಮತದಾರರ ಪಟ್ಟಿಯಲ್ಲಿ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಿದ ಮತದಾರರು ಹಾಗೂ ಮತದಾರರ ಪಟ್ಟಿಯಲ್ಲಿನ ಆಯ್ದ ಮತದಾರರ ಮನೆಗಳಿಗೆ ಭೇಟಿ ನೀಡಿದ ಅವರು, ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಅಂಗವಾಗಿ ಜಿಲ್ಲೆಯ ಕರಡು ಮತದಾರರ ಪಟ್ಟಿಯನ್ನು ಅರ್ಹತಾ ದಿನಾಂಕ: ೦೧-೦೧-೨೦೨೦ರಂತೆ ಈಗಾಗಲೇ ಪ್ರಕಟಿಸಲಾಗಿದೆ. ಕರಡು ಮತದಾರರ ಪಟ್ಟಿಯ ಬಗ್ಗೆ ಯಾವುದೇ ದೂರು, ಆಕ್ಷೇಪಣೆಗಳಿದ್ದಲ್ಲಿ ಜನವರಿ ೧೫ರ ವರೆಗೆ ಸಲ್ಲಿಸಬಹುದು. ಈ ಅವಧಿಯಲ್ಲಿ ಅರ್ಹ ಮತದಾರರ ಹೆಸರು ಸೇರ್ಪಡೆ, ಸ್ಥಳಾಂತರ, ತಿದ್ದುಪಡಿ, ಹೆಸರು ತೆಗೆದು ಹಾಕಲು ಅವಕಾಶ ಇದೆ. ಇದಕ್ಕಾಗಿ ಸಾರ್ವಜನಿಕರು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಮತದಾರರ ನೋಂದಣಾಧಿಕಾರಿಗಳಿಗೆ ಸಲ್ಲಿಸಬೇಕು ಎಂದು ಸಲಹೆ ನೀಡಿದರು.
ಜನವರಿ ೧೫ರವರೆಗೆ ಸ್ವೀಕರಿಸಿದ ಹಕ್ಕು ಮತ್ತು ಆಕ್ಷೇಪಣೆಯ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ ಜನವರಿ ೨೭ರಂದು ಕಾಲೋಚಿತಗೊಳಿಸಲಾಗುವುದು. ನಂತರ ಹೆಚ್ಚುವರಿ ಪಟ್ಟಿಯನ್ನು ಫೆಬ್ರುವರಿ ೪ರಂದು ತಯಾರಿಸಿ, ಅಂತಿಮ ಮತದಾರರ ಪಟ್ಟಿಯನ್ನು ಫೆಬ್ರುವರಿ ೭ರಂದು ಪ್ರಕಟಿಸಲಾಗುವುದು ಎಂದು ತಿಳಿಸಿದರು.
ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್, ಸಹಾಯಕ ಆಯುಕ್ತರಾದ ಶಂಕರಗೌಡ ಎಸ್.ಸೋಮನಾಳ, ತಹಶೀಲ್ದಾರರಾದ ಚನ್ನಮಲ್ಲಪ್ಪ ಘಂಟಿ ಅವರು ಉಪಸ್ಥಿತರಿದ್ದರು.


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...