ಶುಕ್ರವಾರ, ಜನವರಿ 3, 2020

ಜ.೬ರಂದು ಸ್ಥಾಯಿ ಸಮಿತಿ ಸಭೆ
ಯಾದಗಿರಿ, ಜನವರಿ ೦೩ (ಕರ್ನಾಟಕ ವಾರ್ತೆ): ಜಿಲ್ಲಾ ಪಂಚಾಯತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಸರಸ್ವತಿ ಸುಭಾಶ್ಚಂದ್ರ ಅವರ ಅಧ್ಯಕ್ಷತೆಯಲ್ಲಿ ಸಮಿತಿ ಸಭೆಯನ್ನು ಜನವರಿ ೬ರಂದು ಮಧ್ಯಾಹ್ನ ೩ ಗಂಟೆಗೆ ಜಿಲ್ಲಾ ಪಂಚಾಯತಿಯ ಸ್ಥಾಯಿ ಸಮಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಜ.೧೭ರಂದು ಜಿ.ಪಂ ಸಾಮಾನ್ಯ ಸಭೆ
ಯಾದಗಿರಿ, ಜನವರಿ ೦೩ (ಕರ್ನಾಟಕ ವಾರ್ತೆ): ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಜಶೇಖರಗೌಡ ಪಾಟೀಲ್ ವಜ್ಜಲ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯನ್ನು ಜನವರಿ ೧೭ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಕಲಚೇತನರಿಂದ ಅರ್ಜಿ ಆಹ್ವಾನ
ಯಾದಗಿರಿ, ಜನವರಿ ೦೩ (ಕರ್ನಾಟಕ ವಾರ್ತೆ): ೨೦೧೯-೨೦ನೇ ಸಾಲಿನ ಡಿ.ದೇವರಾಜ ಅರಸು ವಿಶೇಷ ವಸತಿ ಯೋಜನೆಯಡಿ ಸುರಪುರ ಸ್ಥಳೀಯ ವ್ಯಾಪ್ತಿಯ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.
ವಿಕಲಚೇತನರು ಸ್ಥಳೀಯವಾಗಿ ಸ್ವಂತ ನಿವೇಶನ ಹೊಂದಿದ ಪ್ರಮಾಣ ಪತ್ರ, ವಿಕಲಚೇತನರ ಗುರುತಿನ ಚೀಟಿ, ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಾಸಸ್ಥಳ, ವಿಕಲತೆ ತೋರುವ ಭಾವಚಿತ್ರ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ದೂ:೦೮೪೭೩-೨೫೩೫೩೧ ಹಾಗೂ ಎಮ್.ಆರ್.ಡಬ್ಲುö್ಯ ಮಾಳಪ್ಪ ಪೂಜಾರಿ ಅವರ ಮೊ:೯೯೪೫೩೭೩೭೪೭ ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...