ಭಾನುವಾರ, ಜನವರಿ 19, 2020

ಫೇಸ್‌ಬುಕ್, ವಾಟ್ಸ್ಆ್ಯಪ್ ಸುಳ್ಳುಸುದ್ದಿಗೆ ಕಿವಿಗೊಡದಿರಿ: ಎಸ್‌ಪಿ
ಯಾದಗಿರಿ, ಜನವರಿ ೧೮ (ಕರ್ನಾಟಕ ವಾರ್ತೆ): ಫೇಸ್‌ಬುಕ್ ಮತ್ತು ವಾಟ್ಸ್ಆ್ಯಪ್ ಗ್ರೂಪ್‌ಗಳಲ್ಲಿ ಯಾದಗಿರಿ ಜಿಲ್ಲಾ ಪೊಲೀಸ್ ಪ್ರಕಟಣೆ ಹೆಸರಿನಲ್ಲಿ ಜನವರಿ ೧೫ರಿಂದ ಸುಳ್ಳುಸುದ್ದಿ ಹರಿದಾಡುತ್ತಿದ್ದು, ಸಾರ್ವಜನಿಕರು ಇದಕ್ಕೆ ಕಿವಿಗೊಡಬಾರದು ಮತ್ತು ಬೇರೆಯವರಿಗೆ ಕಳುಹಿಸಬಾರದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಋಷಿಕೇಶ್ ಭಗವಾನ್ ಸೋನವಣೆ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಯಾದಗಿರಿ ಜಿಲ್ಲಾ ಪೊಲೀಸ್ ಪ್ರಕಟಣೆ ಎಂದು ನಮೂದಿಸಿ, “ಯಾರಾದರೂ ಮನೆ ಹತ್ತಿರ ಬಂದು ನಾವು ಸರಕಾರಿ ಆಸ್ಪತ್ರೆಯಿಂದ ಬಂದಿದ್ದೇವೆ. ಇನ್ಸುಲಿನ್, ವಿಟಾಮಿನ್ ಇಂಜೆಕ್ಷನ್ ಮಾಡ್ತಿವಿ ಅಂತಾ ಹೇಳಿದರೆ ನಂಬಬೇಡಿ. ನಂಬಿ ಆತುರಪಟ್ಟು ಮಾಡಿಸಿಕೊಳ್ಳದಿರಿ. ಜಿಹಾದಿ ಟೆರರಿಸ್ಟಗಳು ಈ ರೀತಿ ಯಾಮಾರಿಸಿ ಹಿಂದೂಗಳಿಗೆ ಏಡ್ಸ್ ಇಂಜೆಕ್ಷನ್ ಮಾಡುತ್ತಿದ್ದಾರೆ ಅಂತೆ, ಜಾಗೃತಿಯಿಂದಿರಿ. ನಿಮಗೆ ಸಂಬAಧಿಸಿದ ಎಲ್ಲಾ ಗ್ರೂಪ್‌ಗಳಿಗೆ ಕಳುಹಿಸಿ ಅಮಾಯಕರ ಪ್ರಾಣ ಉಳಿಸಿರಿ. ಇಂತಿ ನಿಮ್ಮ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಯಾದಗಿರಿ ಜಿಲ್ಲೆ” ಎಂಬುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದನ್ನು ಪರಿಶೀಲಿಸಿ ಸಂದೇಶ ಕಳಿಸಿದವರ ವಿರುದ್ಧ ತಕ್ಷಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಇಂತಹ ಸುಳ್ಳು ಸುದ್ದಿಗಳನ್ನು ಹಬ್ಬಿಸುವವರ ವಿರುದ್ಧ ಅಥವಾ ಶೇರ್ ಮಾಡುವವರ ವಿರುದ್ಧ ಕೂಡ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಜ.೨೨ರಿಂದ ವಿಜ್ಞಾನ ವಸ್ತು ಪ್ರದರ್ಶನ
ಯಾದಗಿರಿ, ಜನವರಿ ೧೮ (ಕರ್ನಾಟಕ ವಾರ್ತೆ): ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ವತಿಯಿಂದ ೨೦೧೯-೨೦ ನೇ ಸಾಲಿನ ಜಿಲ್ಲಾ ಮಟ್ಟದ ಇನ್‌ಸ್ಪೆöÊರ್ ಆವಾರ್ಡ್ (ಮಾನಕ್) ವಿಜ್ಞಾನ ವಸ್ತು ಪ್ರದರ್ಶನ ಹಾಗೂ ಪ್ರಾಜೆಕ್ಟ್ ಸ್ಪರ್ಧೆಯನ್ನು ಜನವರಿ ೨೨ ಮತ್ತು ೨೩ರಂದು ಯಾದಗಿರಿ ನಗರದ ಚಿತ್ತಾಪುರ ರಸ್ತೆ ಮಾರ್ಗದಲ್ಲಿರುವ ಆದರ್ಶ ವಿದ್ಯಾಲಯದಲ್ಲಿ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...