ಕೃಷಿ ಪರಿಸರ ಉಳಿಸಿ, ನೆಲ-ಜಲ ಸಂರಕ್ಷಿಸಿ: ಡಾ.ಕೃಷ್ಣ
ಯಾದಗಿರಿ, ಜನವರಿ ೧೦ (ಕರ್ನಾಟಕ ವಾರ್ತೆ): ಕೃಷಿ ಪರಿಸರವನ್ನು ಅರ್ಥ ಮಾಡಿಕೊಂಡು ಅದರ ಉಳಿವಿಗಾಗಿ ಎಲ್ಲರೂ ಕೈಜೋಡಿಸಿದಲ್ಲಿ ಮಾತ್ರ ಮುಂದಿನ ದಿನಗಳಲ್ಲಿ ನೆಲ- ಜಲವನ್ನು ಸಂರಕ್ಷಣೆ ಮಾಡಲು ಸಾಧ್ಯ ಮತ್ತು ಅದು ನಮ್ಮೆಲರ ಹೊಣೆ ಕೂಡ ಆಗಿದೆ ಎಂದು ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯ ಪ್ರಾಧ್ಯಾಪಕರಾದ ಡಾ.ಕೃಷ್ಣ ಅವರು ಹೇಳಿದರು.
ಜಿಲ್ಲೆಯ ಕವಡಿಮಟ್ಟಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯ ಬೆಂಗಳೂರು ಹಾಗೂ ಐ.ಸಿ.ಎ.ಆರ್-ಕೃಷಿ ವಿಜ್ಷಾನ ಕೇಂದ್ರ ಕವಡಿಮಟ್ಟಿ ಇವರ ಸಂಯುಕ್ತಾಶ್ರಯದಲ್ಲಿ ಸುರುಪುರ ತಾಲ್ಲೂಕಿನ ಆಯ್ದ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮ
ತ್ತು ಕಾರ್ಯದರ್ಶಿಗಳಿಗೆ ಆಯೋಜಿಸಿದ್ದ “ಕೃಷಿ ಪರಿಸರ ಮತ್ತು ಜೀವನೋಪಾಯಗಳು” ಬಗ್ಗೆ ಒಂದು ದಿನದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯ ಸಹಾಯಕ ಪ್ರಾಧ್ಯಾಪಕರಾದ ಡಾ.ಧನ್ಯ ಅವರು ಮಾತನಾಡಿ, ಕೃಷಿಯಲ್ಲಿ ಕೇವಲ ಹಣ ಗಳಿಸುವುದು ಮುಖ್ಯವಲ್ಲ. ನಮ್ಮ ಆರೋಗ್ಯವನ್ನು ಸಹ ಕಪಾಡಿಕೊಳ್ಳಬಹುದು ಎಂದು ತಿಳಿಸಿದರು.ಕವಡಿಮಟ್ಟಿ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿಗಳು ಹಾಗೂ ಮುಖ್ಯಸ್ಥರಾದ ಡಾ.ಅಮರೇಶ್ ವೈ.ಎಸ್. ಅವರು ಮಾತನಾಡಿ, ಕೃಷಿಯಲ್ಲಿ ಜೈವಿಕ ಗೊಬ್ಬರಗಳನ್ನು ಬಳಕೆ ಮಾಡುವುದರಿಂದ ರಾಸಾಯನಿಕ ಗೊಬ್ಬರಗಳ ಕರ್ಚನ್ನು ಕಡಿಮೆ ಮಾಡುವ ಮತ್ತು ಅದರಿಂದಾಗುವ ಲಾಭಗಳ ಬಗ್ಗೆ ಮಾಹಿತಿ ನೀಡಿದರು.ಡಾ.ಉಮೇಶ ಬಾರಿಕರ ಮಾತನಾಡಿ, ಬೆಳೆಗಳಿಗೆ ಪೋಷಕಾಂಶಗಳನ್ನು ಬಳಸುವ ಮುನ್ನ ಮಣ್ಣಿನ ಪರೀಕ್ಷೆ ಮಾಡಿಸಿ. ಅದರ ಫಲಿತಾಂಶ ಆಧರಿಸಿ ಬೆಳೆಗಳಿಗೆ ಪೋಷಕಾಂಶಗಳನ್ನು ಬಳಸುವುದರಿಂದ ರೈತರು ಮಣ್ಣಿನ ಫಲವತ್ತತೆಯನ್ನು ಕಾಪಾಡಿಕೊಳ್ಳಬಹುದು ಎಂದು ತಿಳಿಸಿದರು. ಡಾ.ಮಹೇಶ ಅವರು ಕೃಷಿ ಪರಿಸರದ ಸುತ್ಥಿರದಲ್ಲಿ ಜಾನುವಾರುಗಳ ಮಹತ್ವ ಕುರಿತು ವಿವರಿಸಿದರು.ವಿಜ್ಞಾನಿಗಳಾದ ಡಾ.ಸತೀಶಕುಮಾರ ಕಾಳೆ, ಡಾ.ಮಲ್ಲಿಕಾರ್ಜುನ ಕೆಂಗನಾಳ, ಡಾ.ಶಾಂತವೀರಯ್ಯ, ರಾಘವೇಂದ್ರ ಮತ್ತು ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳು ಭಾಗವಹಿಸಿದ್ದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ