ಭಾನುವಾರ, ಜನವರಿ 26, 2020

ಜಿಲ್ಲಾಧಿಕಾರಿಗಳಿಂದ ರಾಷ್ಟ್ರ ಧ್ವಜಾರೋಹಣ

ಯಾದಗಿರಿ, ಜನವರಿ ೨೬ (ಕರ್ನಾಟಕ ವಾರ್ತೆ): ೭೧ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ ಭವನದ ಆವರಣದಲ್ಲಿ ಭಾನುವಾರ ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ರಾಷ್ಟç ಧ್ವಜಾರೋಹಣ ಮಾಡಿದರು. ರಾಷ್ಟçಪಿತ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಲಾಯಿತು.

ಗಣರಾಜ್ಯೋತ್ಸವದ ಶುಭಾಶಯ ಕೋರಿ ಮಾತನಾಡಿದ ಜಿಲ್ಲಾಧಿಕಾರಿಗಳು, ನವೆಂಬರ್ ತಿಂಗಳಲ್ಲಿ ಸಕಾಲ ಅರ್ಜಿಗಳ ವಿಲೇವಾರಿಯಲ್ಲಿ ಯಾದಗಿರಿ ಜಿಲ್ಲೆಯು ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಇದರಲ್ಲಿ ಎಲ್ಲಾ ಇಲಾಖೆ ಅಧಿಕಾರಿಗಳ ಪಾತ್ರ ಪ್ರಮುಖವಾಗಿದೆ. ಜನವರಿ ತಿಂಗಳಲ್ಲಿ ಐದನೇ ಸ್ಥಾನಕ್ಕೆ ಇಳಿದಿದ್ದು, ರಾಜ್ಯಮಟ್ಟದಲ್ಲಿ ಯಾವಾಗಲೂ ಪ್ರಥಮ ಸ್ಥಾನದಲ್ಲಿರುವಂತೆ ನೋಡಿಕೊಳ್ಳುವುದು ನಮ್ಮ ಕರ್ತವ್ಯವಾಗಿದೆ ಎಂದು ಹೇಳಿದರು. ಮಹತ್ವಾಕಾಂಕ್ಷೆ ಜಿಲ್ಲೆಯಾದ ಯಾದಗಿರಿಯು ನವೆಂಬರ್-೨೦೧೯ರ ಆರೋಗ್ಯ ಮತ್ತು ಪೌಷ್ಟಿಕಾಂಶದಲ್ಲಿ ಡೆಲ್ಟಾ ಸ್ಕೋರ್‌ನಲ್ಲಿ ದೇಶಕ್ಕೆ ೩ನೇ ರ‍್ಯಾಂಕ್ ಪಡೆದಿದೆ. ಈ ಕಾರ್ಯ ಸಾಧನೆಗಾಗಿ ಅಧಿಕಾರಿಗಳನ್ನು ಅಭಿನಂದಿಸಿದರು. ಜಿಲ್ಲೆಯ ಎಲ್ಲಾ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಕಚೇರಿಗಳಿಗೆ ಬರುವ ಸಾರ್ವಜನಿಕರ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ಪಾರದರ್ಶಕ ಆಡಳಿತಕ್ಕೆ ಪ್ರತಿಯೊಬ್ಬರೂ ಒತ್ತು ನೀಡಬೇಕು. ಅಲ್ಲದೆ, ಇ-ಕಚೇರಿಯನ್ನು ಬೇರೆ ಬೇರೆ ಇಲಾಖೆಗಳಿಗೂ ಅನುಷ್ಠಾನಗೊಳಿಸಲಾವುದು. ಸಾರ್ವಜನಿಕರ ಸಮಸ್ಯೆಗಳ ನಿವಾರಣೆಗೆ ಎಲ್ಲ ಇಲಾಖೆಗಳು ವಾರದಲ್ಲಿ ಒಂದು ದಿನ ಸಮಯ ನಿಗಧಿ ಮಾಡಿ ಪರಿಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಜಶೇಖರಗೌಡ ಪಾಟೀಲ್ ವಜ್ಜಲ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಗಿರಿಜಮ್ಮ ಸದಾಶಿವಪ್ಪಗೌಡ ರೊಟ್ನಡಗಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ, ಸಹಾಯಕ ಆಯುಕ್ತರಾದ ಶಂಕರಗೌಡ ಎಸ್.ಸೋಮನಾಳ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...