ಗುರುವಾರ, ಜನವರಿ 9, 2020

ಜನವರಿ ೧೯ರಿಂದ ೨೨ರವರೆಗೆ ರಾಷ್ಟಿçÃಯ ಪಲ್ಸ್ ಪೋಲಿಯೊ ಕಾರ್ಯಕ್ರಮ
೧.೬೨ ಲಕ್ಷ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕುವ ಗುರಿ
-ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್
         
ಯಾದಗಿರಿ, ಜನವರಿ ೦೯ (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಜನವರಿ ೧೯ರಿಂದ ೨೨ರವರೆಗೆ ನಡೆಯುವ ರಾಷ್ಟಿçÃಯ ಪಲ್ಸ್ ಪೋಲಿಯೊ ಕಾರ್ಯಕ್ರಮದಲ್ಲಿ ೦-೫ ವರ್ಷದೊಳಗಿನ ೧,೬೨,೨೫೫ ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದ್ದು, ಕಾರ್ಯಕ್ರಮ ಯಶಸ್ವಿಗೆ ಸಂಬAಧಪಟ್ಟ ಇಲಾಖೆ ಅಧಿಕಾರಿಗಳು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ರಾಷ್ಟಿçÃಯ ಪಲ್ಸ್ ಪೋಲಿಯೊ ಕಾರ್ಯಕ್ರಮದ ಅಂಗವಾಗಿ ನಡೆದ ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.
ಜನವರಿ ೧೯ರಂದು ಭಾನುವಾರ ಜಿಲ್ಲೆಯಲ್ಲಿ ಸ್ಥಾಪಿಸುವ ೬೪೮ ಬೂತ್‌ಗಳಲ್ಲಿ ಪೋಲಿಯೊ ಲಸಿಕೆ ಹಾಕಬೇಕು. ಒಂದು ಬೂತ್‌ಗೆ ಇಬ್ಬರಂತೆ ಲಸಿಕೆ ನೀಡುವ ಕಾರ್ಯಕರ್ತರನ್ನು ನಿಯೋಜಿಸಬೇಕು. ಭಾನುವಾರದಂದು ಲಸಿಕೆಯಿಂದ ತಪ್ಪಿಸಿಕೊಂಡ ಮಕ್ಕಳಿಗೆ ಜನವರಿ ೨೦ರಿಂದ ೨೨ರವರೆಗೆ ಅಂಗನವಾಡಿ ಕಾರ್ಯಕರ್ತರು, ಶುಶ್ರೂಷಕರು ಮನೆಮನೆಗೆ ಭೇಟಿ ನೀಡಿ, ಪೋಲಿಯೋ ಹನಿ ಹಾಕುವಂತೆ ಅವರು ನಿರ್ದೇಶಿಸಿದರು.
ಜಿಲ್ಲೆಯ ಗ್ರಾಮೀಣ ಪ್ರದೇಶದ ಮಹಿಳೆಯರು ಹೆಚ್ಚಾಗಿ ಕೃಷಿ ಮತ್ತು ಇನ್ನಿತರ ಕೂಲಿ ಕೆಲಸಗಳಿಗಾಗಿ ತೆರಳುತ್ತಾರೆ. ಹತ್ತಿ ಬಿಡಿಸುವುದು, ಕಳೆ ಕೀಳುವುದು, ರಾಶಿ, ಇಟ್ಟಂಗಿ ಭಟ್ಟಿ, ಕಟ್ಟಡ ನಿರ್ಮಾಣ ಕೆಲಸಗಳಿಗೆ ಹೋಗುವಾಗ ಪೋಷಕರು ತಮ್ಮ ಜೊತೆಗೆ ಮಕ್ಕಳನ್ನು ಕೂಡ ಕರೆದುಕೊಂಡು ಹೋಗಿರುತ್ತಾರೆ. ಇಂತಹ ಕಾರ್ಮಿಕ ವರ್ಗದ ಮಕ್ಕಳ ಬಗ್ಗೆ ಹೆಚ್ಚಿನ ಗಮನಹರಿಸಬೇಕು. ಜಿಲ್ಲೆಯ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಪ್ರತಿಯೊಂದು ಮಗುವಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ಹಾಕಬೇಕು. ೦-೫ ವರ್ಷದೊಳಗಿನ ಯಾವುದೇ ಮಗು ಲಸಿಕೆಯಿಂದ ವಂಚಿತವಾಗದAತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು
ರಾಷ್ಟಿçÃಯ ಪಲ್ಸ್ ಪೋಲಿಯೊ ಕಾರ್ಯಕ್ರಮ ಯಶಸ್ವಿಗೆ ಸಾರ್ವಜನಿಕರ ಸಹಭಾಗಿತ್ವ ಮುಖ್ಯವಾಗಿದೆ. ಪೋಲಿಯೊ ಲಸಿಕೆ ಹಾಕುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು. ಈ ನಿಟ್ಟಿನಲ್ಲಿ ಜನವರಿ ೧೮ ಮತ್ತು ೧೯ರಂದು ಶಾಲಾ ಮಕ್ಕಳು, ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳಿಂದ ಗ್ರಾಮಗಳಲ್ಲಿ ಪ್ರಭಾತ ಪೇರಿ ನಡೆಸಬೇಕು. ಅಲ್ಲದೇ, ಗ್ರಾಮಗಳಲ್ಲಿ ಡಂಗೂರ ಸಾರುವಂತೆ ಅವರು ಸೂಚಿಸಿದರು.
 ಲಸಿಕೆ ನೀಡುವ ಸಂದರ್ಭದಲ್ಲಿ ಬಳಸುವ ಐಸ್ ಪ್ಯಾಕ್ ತಯಾರಿಕೆಗೆ ವಿದ್ಯುತ್ ಅಗತ್ಯವಾಗಿರುತ್ತದೆ. ಕಾರಣ ಜಿಲ್ಲೆಯ ೪೧ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ೧೦ ದಿನಗಳ ಕಾಲ ನಿರಂತರ ೩ ಫೇಸ್ ವಿದ್ಯುತ್ ಸರಬರಾಜು ಮಾಡಬೇಕು ಎಂದು ಜೆಸ್ಕಾಂ ಇಂಜಿನಿಯರ್‌ಗಳಿಗೆ ತಿಳಿಸಿದರು.
ವಿಶ್ವ ಆರೋಗ್ಯ ಸಂಸ್ಥೆಯ ಕಲಬುರಗಿ ವಿಭಾಗಮಟ್ಟದ ವೈದ್ಯಕೀಯ ಸರ್ವೇಕ್ಷಣಾಧಿಕಾರಿ ಡಾ.ಅನಿಲ್‌ಕುಮಾರ್ ಎಸ್.ತಾಳಿಕೋಟಿ ಅವರು ಕಾರ್ಯಕ್ರಮದ ಪೂರ್ವಸಿದ್ಧತೆಗಳ ಬಗ್ಗೆ ವಿವರಣೆ ನೀಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಎಸ್.ಪಾಟೀಲ್, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಲಕ್ಷಿö್ಮÃಕಾಂತ, ಆಯುಷ್ಮಾನ್ ಭಾರತ- ಆರೋಗ್ಯ ಕರ್ನಾಟಕ ಜಿಲ್ಲಾ ನೋಡಲ್ ಅಧಿಕಾರಿ ಡಾ.ಭಗವಂತ ಅನವಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಪ್ರಭಾಕರ ಸೇರಿದಂತೆ ತಾಲ್ಲೂಕು ಆರೋಗ್ಯ ಅಧಿಕಾರಿಗಳು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...