ಭಾನುವಾರ, ಜನವರಿ 19, 2020

ಕ್ಯಾನ್‌ವಾಸ್ ಪೇಂಟಿAಗ್ ಸ್ಪರ್ಧೆಗೆ ಜಿಲ್ಲಾಧಿಕಾರಿ ಚಾಲನೆ
ಯಾದಗಿರಿ, ಜನವರಿ ೧೯ (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಸಂಯುಕ್ತಾಶ್ರಯದಲ್ಲಿ ಸ್ವೀಪ್ ಕಾರ್ಯಕ್ರಮದಡಿ ೧೦ನೇ ರಾಷ್ಟಿçÃಯ ಮತದಾರರ ದಿನಾಚರಣೆ (ಜ.೨೬)ಯ ಅಂಗವಾಗಿ ಜಿಲ್ಲಾಡಳಿತ ಭವನದಲ್ಲಿ ಭಾನುವಾರ ಆಯೋಜಿಸಿದ್ದ ಕ್ಯಾನ್‌ವಾಸ್ ಪೇಂಟಿAಗ್ ಮತ್ತು ವಾಲ್ ಪೇಂಟಿAಗ್ ಸ್ಪರ್ಧೆಗೆ ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಚಿತ್ರ ಬಿಡಿಸುವ ಮೂಲಕ ಚಾಲನೆ ನೀಡಿದರು.

ನಂತರ ವಿದ್ಯಾರ್ಥಿಗಳಿಗೆ ಕ್ಯಾನ್‌ವಾಸ್ ಮತ್ತು ಬ್ರಶ್‌ಗಳನ್ನು ವಿತರಿಸಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಬಹುದೊಡ್ಡ ಅಸ್ತçವಾಗಿದೆ. ತಮ್ಮ ಗ್ರಾಮ ಹಾಗೂ ಮನೆಗಳಲ್ಲಿ ಮತದಾನದ ಮಹತ್ವವನ್ನು ವಿವರಿಸಬೇಕು. ಚುನಾವಣೆಗಳಲ್ಲಿ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡುವಂತೆ ತಿಳಿವಳಿಕೆ ನೀಡಲು ಸಲಹೆ ನೀಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಬಿ.ರೇವಣ್ಣ, ಜಿಲ್ಲಾ ಪಂಚಾಯಿತಿ ನೈಸರ್ಗಿಕ ಸಂಪನ್ಮೂಲಗಳ ದತ್ತಾಂಶ ನಿರ್ವಹಣಾ ಕೇಂದ್ರದ ಅಧಿಕಾರಿ ಸಿದ್ಧಾರೆಡ್ಡಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಡಿವೈಪಿಸಿ ನಾಗಪ್ಪ ಪೋತಲ್, ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಮಲ್ಲಿಕಾರ್ಜುನ ಬಿಳ್ಹಾರ, ಸಂಘದ ಕಾರ್ಯದರ್ಶಿ ಗಂಗಾಧರ ಪತ್ತಾರ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...