ಭಾನುವಾರ, ಜನವರಿ 26, 2020


ರಾಷ್ಟಿçÃಯ ಮತದಾರರ ದಿನಾಚರಣೆ ಕಾರ್ಯಕ್ರಮ
ಮತದಾನ ಪ್ರತಿಯೊಬ್ಬ ಪ್ರಜೆಯ ಕರ್ತವ್ಯ
-ನ್ಯಾಯಾಧೀಶರಾದ ಶ್ರೀ ಶಿವನಗೌಡ
ಯಾದಗಿರಿ, ಜನವರಿ ೨೫ (ಕರ್ನಾಟಕ ವಾರ್ತೆ): ನಮ್ಮ ದೇಶದ ಪ್ರಜಾಪ್ರಭುತ್ವದ ವ್ಯವಸ್ಥೆಯು ಇತರೆ ದೇಶಗಳಿಂದ ಮಹತ್ವದ ಸ್ಥಾನದಲ್ಲಿದೆ. ಪ್ರಜಾಪ್ರಭುತ್ವದ ಉಳಿವು ಮತ್ತು ರಾಷ್ಟçದ ಭದ್ರತೆಗೆ ೧೮ ವರ್ಷ ತುಂಬಿದ ಎಲ್ಲರೂ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊAಡು ಕಡ್ಡಾಯವಾಗಿ ಮತದಾನ ಮಾಡುವುದು ಪ್ರತಿಯೊಬ್ಬ ಪ್ರಜೆಯ ಕರ್ತವ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಶಿವನಗೌಡ ಅವರು ಹೇಳಿದರು.
ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ರಾಷ್ಟಿçÃಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರು ಮಾತನಾಡಿದರು. ಕೆಲವು ದೇಶಗಳಲ್ಲಿ ಸರ್ವಾಧಿಕಾರ ದೋರಣೆಯ ಆಡಳಿತ ಇದೆ. ಅಲ್ಲಿ ಜನಿಸಿದ ಯಾರಿಗೂ ಮತದಾನದ ಸ್ವಾತಂತ್ರö್ಯವಿಲ್ಲ. ಸ್ವತಂತ್ರ ಭಾರತದಲ್ಲಿ ಮತದಾನ ಮಾಡುವುದು ನಮ್ಮೆಲ್ಲರ ಕರ್ತವ್ಯ ಮತ್ತು ಹಕ್ಕು. ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗ ಈ ಮೂರು ಅಂಗಗಳು ಸ್ವತಂತ್ರವಾಗಿ ಕಾರ್ಯಾನಿರ್ವಹಿಸಲು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಬೇಕು. ಈ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಮತದಾನ ಮಾಡಬೇಕು. ಎಂದು ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ನಮ್ಮನ್ನಾಳುವ ನಾಯಕರ ಆಯ್ಕೆಗೆ ಮತದಾನವು ಪ್ರಮುಖ ಅಸ್ತçವಾಗಿದೆ. ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊAಡವರು ಯಾವುದೇ ಆಸೆ-ಆಮಿಷಕ್ಕೆ ಒಳಗಾಗದೆ ಮತ ಚಲಾಯಿಸಬೇಕು. ಚುನಾವಣೆಗಳಲ್ಲಿ ಯಾರೊಬ್ಬರು ಮತದಾನದ ಪ್ರಕ್ರಿಯೆಯಿಂದ ಹೊರಗುಳಿಯದೆ ತಪ್ಪದೇ ಮತದಾನ ಮಾಡುವಂತೆ ಸಲಹೆ ನೀಡಿದರು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಮುಖ್ಯ ನ್ಯಾಯಿಕ ದಂಡಾಧಿಕಾರಿಗಳಾದ ನಾಮದೇವ ಕೆ.ಸಾಲಮಂಟಪಿ ಅವರು ಮಾತನಾಡಿ, ನಮ್ಮ ದೇಶವು ಹಲವು ಸಂಸ್ಕೃತಿ, ವರ್ಗ ಹಾಗೂ ವರ್ಣಗಳಿಂದ ಕೂಡಿದ್ದರೂ ಭಾರತದ ಸಂವಿಧಾನವು ೧೮ ವರ್ಷ ತುಂಬಿದ ನಂತರ ಎಲ್ಲರಿಗೂ ಮತದಾನದ ಹಕ್ಕು ನೀಡಿದೆ. ಇದನ್ನು ಯಾವುದೇ ಪ್ರಭಾವ, ಆಸೆ-ಆಮಿಷಗಳಿಗೆ ಒಳಗಾಗದೆ ಮತ ಚಲಾಯಿಸಬೇಕು. ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೆ ಪ್ರಭುಗಳು ಎಂದು ಅವರು ಹೇಳಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಶ ಅರ್ಜುನ ಬನಸೊಡೆ ಅವರು ಮಾತನಾಡಿ, ರಾಷ್ಟಿçÃಯ ಮತದಾರರ ದಿನವು ೧೮ ವರ್ಷ ತುಂಬಿದವರಿಗೆ ಮತದಾನದ ಹಕ್ಕಿನ ಬಗ್ಗೆ ಜಾಗೃತಿ ಮಾಡಲು, ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ತಿಳಿವಳಿಕೆ ನೀಡಲು ಆಚರಿಸಲಾಗುತ್ತದೆ. ಭವ್ಯ ಭಾರತದ ನಿರ್ಮಾಣಕ್ಕೆ ಮತದಾನದ ಹಕ್ಕು ಪ್ರಮುಖವಾಗಿದೆ. ಪ್ರತಿಯೊಬ್ಬರು ನಿಷ್ಪಕ್ಷಪಾತವಾಗಿ ಮತದಾನ ಮಾಡುವ ಮೂಲಕ ಸುಭದ್ರ ರಾಷ್ಟç ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಸಲಹೆ ನೀಡಿದರು. ರಾಷ್ಟಿçÃಯ ಮತದಾರರ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಉತ್ತಮ ಕಾರ್ಯನಿರ್ವಹಿಸಿದ ಬಿಎಲ್‌ಒಗಳನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಹೊಸ ಮತದಾರರಿಗೆ ಗುರುತಿನ ಚೀಟಿಗಳನ್ನು ವಿತರಿಸಲಾಯಿತು. ಸಿವಿಲ್ ನ್ಯಾಯಾಧೀಶರಾದ ಲೋಕೇಶ್ ಧನಪಾಲ ಹವಲೆ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಸ್ಮೀತಾ ಮಾಲಗಾಂವೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಡಿವೈಎಸ್‌ಪಿ ಯು.ಶರಣಪ್ಪ ಹಾಗೂ ತಹಸೀಲ್ದಾರ್ ಚನ್ನಮಲ್ಲಪ್ಪ ಘಂಟಿ ಅವರು ಉಪಸ್ಥಿತರಿದ್ದರು. ಸರಕಾರಿ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿನಿ ಅಶ್ವಿನಿ ಅವರು ಪ್ರಾರ್ಥನಾ ಗೀತೆ ಹಾಡಿದರು. ಡಾನ್ ಬೊಸ್ಕೋ ಶಾಲೆಯ ವಿದ್ಯಾರ್ಥಿನಿ ಡಯಾನಾ ಹಾಗೂ ಸಂಗಡಿಗರು ರಾಷ್ಟçಗೀತೆ ಮತ್ತು ನಾಡಗೀತೆ ಹಾಡಿದರು. ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ ಜಿ.ರಜಪೂತ ಅವರು ಸ್ವಾಗತಿಸಿದರು. ಶಿಕ್ಷಕರಾದ ಹಫೀಜ್ ಪಟೇಲ್ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಸಹಾಯಕ ಆಯುಕ್ತರಾದ ಶಂಕರಗೌಡ ಎಸ್.ಸೋಮನಾಳ ಅವರು ವಂದಿಸಿದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...