ಗುರುವಾರ, ಜನವರಿ 30, 2020

ಚಾಲನಾ ತರಬೇತಿಗೆ ಅರ್ಜಿ ಆಹ್ವಾನ
ಯಾದಗಿರಿ, ಜನವರಿ ೩೦ (ಕರ್ನಾಟಕ ವಾರ್ತೆ): ೨೦೧೭-೧೮ನೇ ಸಾಲಿನ ರಾಷ್ಟಿçÃಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿ ಲಘು ವಾಹನ ಚಾಲನಾ ತರಬೇತಿ ಸೌಲಭ್ಯ ಪಡೆಯಲು ಶಹಾಪುರ ನಗರಸಭೆ ವ್ಯಾಪ್ತಿಯ ೧೮-೪೦ ವರ್ಷದೊಳಗಿನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಸಿ-೧೨, ಎಸ್.ಟಿ-೫, ಅಲ್ಪಸಂಖ್ಯಾತರು-೧೦, ಮಹಿಳೆ -೨೩, ಸಾಮಾನ್ಯ-೨೦ ಸೇರಿ ಒಟ್ಟು ೭೦ ಭೌತಿಕ ಗುರಿ ಇದ್ದು, ಎಸ್‌ಎಸ್‌ಎಲ್‌ಸಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಗತ್ಯ ದಾಖಲೆಗಳನ್ನು ಗೆಜೆಟೆಡ್ ಅಧಿಕಾರಿಗಳಿಂದ ದೃಢೀಕರಿಸಿ, ಫೆಬ್ರುವರಿ ೧೧ರೊಳಗೆ ನಗರಸಭೆ ಕಾರ್ಯಾಲಯಕ್ಕೆ ದ್ವೀಪ್ರತಿಯಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಗರಸಭೆಯನ್ನು ಸಂಪರ್ಕಿಸಬಹುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟೆಂಡರ್ ಅರ್ಜಿ ಆಹ್ವಾನ
ಯಾದಗಿರಿ, ಜನವರಿ ೩೦ (ಕರ್ನಾಟಕ ವಾರ್ತೆ): ೨೦೧೭-೧೮ನೇ ಸಾಲಿನ ರಾಷ್ಟಿçÃಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿ ಶಹಾಪುರ ನಗರಸಭೆ ವ್ಯಾಪ್ತಿಯ ಅಭ್ಯರ್ಥಿಗಳಿಗೆ ಲಘು ವಾಹನ ಚಾಲನಾ ತರಬೇತಿ ನೀಡಲು ಅರ್ಹ ಸಂಸ್ಥೆಗಳಿAದ ಟೆಂಡರ್ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿಗೆ ನಿಗದಿಪಡಿಸಿದ ಮೊತ್ತ ೩.೩೨ ಲಕ್ಷ ರೂ. ಇದ್ದು, ಇಎಂಡಿ ಮೊತ್ತ ೧೬,೬೨೫ ರೂ. ಇರುತ್ತದೆ. ಅಗತ್ಯ ದಾಖಲೆಗಳನ್ನು ಫೆಬ್ರುವರಿ ೧೧ರೊಳಗೆ ನಗರಸಭೆ ಕಾರ್ಯಾಲಯಕ್ಕೆ ಸಲ್ಲಿಸಬೇಕು. ಫೆಬ್ರುವರಿ ೧೨ರಂದು ಸಂಜೆ ೪ ಗಂಟೆಯೊಳಗೆ ಟೆಂಡರ್ ತೆರೆಯಲಾಗುವುದು. ಹೆಚ್ಚಿನ ಮಾಹಿತಿಗಾಗಿ ನಗರಸಭೆಯನ್ನು ಸಂಪರ್ಕಿಸಬಹುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಬರಹಗಾರರಿಂದ ಅರ್ಜಿ ಆಹ್ವಾನ
ಯಾದಗಿರಿ, ಜನವರಿ ೩೦ (ಕರ್ನಾಟಕ ವಾರ್ತೆ): ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ಕರ್ನಾಟಕ ಹಾಗೂ ಹೊರ ರಾಜ್ಯಗಳ ಕನ್ನಡ ಬರಹಗಾರರಿಗಾಗಿ ೨೦೨೦ರ ಮಾರ್ಚ್ ತಿಂಗಳಲ್ಲಿ ಮೂರು ದಿನಗಳ “ದಕ್ಷಿಣ ಭಾರತ ಮಟ್ಟದ ಕನ್ನಡ ಕಾವ್ಯ ಕಮ್ಮಟ”ವನ್ನು ಕಾಸರಗೋಡಿನಲ್ಲಿ ಆಯೋಜಿಸಲಾಗಿದೆ. ಆಸಕ್ತ ೨೦ರಿಂದ ೪೦ ವಯೋಮಿತಿಯ ಹಾಗೂ ಕನ್ನಡ ಕಾವ್ಯ ರಚನೆಯಲ್ಲಿ ತೊಡಗಿರುವ ದಕ್ಷಿಣ ಭಾರತದ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಹಾಗೂ ಕೇರಳ ಭಾಗದ ಅಭ್ಯರ್ಥಿಗಳು ಫೆಬ್ರುವರಿ ೧೫ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ವಿವರಗಳನ್ನು ಅಕಾಡೆಮಿಯ ವೆಬ್‌ಸೈಟ್: http://karnatakasahithyaacademy.org ನಲ್ಲಿ ಪಡೆದುಕೊಳ್ಳಬಹುದು ಎಂದು ರಿಜಿಸ್ಟಾçರ್ ಎನ್.ಕರಿಯಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...