ಸೋಮವಾರ, ಜನವರಿ 20, 2020

ಜನಸ್ನೇಹಿ ಪೊಲೀಸ್ ವ್ಯವಸ್ಥೆ ಸುಧಾರಿಸಲು ಫೋನ್-ಇನ್ ಕಾರ್ಯಕ್ರಮ
ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಸದಾ ಸಜ್ಜು
-ಋಷಿಕೇಶ್ ಭಗವಾನ್ ಸೋನವಣೆ

ಯಾದಗಿರಿ, ಜನವರಿ ೨೦ (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಮತ್ತು ಸಮಾಜದ ಸ್ವಾಸ್ಥö್ಯ ಕದಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಸದಾ ಸಜ್ಜಾಗಿದ್ದು, ಸಾರ್ವಜನಿಕರು ಕೂಡ ತಮ್ಮ ಕರ್ತವ್ಯಗಳನ್ನು ಪಾಲನೆ ಮಾಡಿ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಋಷಿಕೇಶ್ ಭಗವಾನ್ ಸೋನವಣೆ ಅವರು ಮನವಿ ಮಾಡಿದರು.
ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ಸಾರ್ವಜನಿಕರು ಹಾಗೂ ಪೊಲೀಸ್ ಇಲಾಖೆಯ ಮಧ್ಯೆ ಉತ್ತಮ ಸಂಪರ್ಕ ಬೆಳೆಯುವ ನಿಟ್ಟಿನಲ್ಲಿ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಸುಧಾರಿಸಲು ಹಮ್ಮಿಕೊಂಡಿದ್ದ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ, ಅವರು ಮಾತನಾಡಿದರು.
ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಒಟ್ಟು ೧೪ ಕರೆಗಳು ಬಂದಿದ್ದು, ೧ ಕರೆ ಸಿವಿಲ್ ವ್ಯಾಜ್ಯಕ್ಕೆ ಸಂಬAಧಿಸಿದ್ದಾಗಿತ್ತು. ೮ ಕರೆಗಳು ಸಂಚಾರ ಸುವ್ಯವಸ್ಥೆಗೆ ಸಂಬAಧಿಸಿದ್ದವು. ಯಾದಗಿರಿ ನಗರದ ಗಾಂಧಿಚೌಕ್ ಏರಿಯಾ ಮತ್ತು ಶಹಾಪೂರ ನಗರದ ಬಸವೇಶ್ವರ ವೃತ್ತದಿಂದ ಸಿ.ಬಿ ಕಮಾನವರೆಗೆ ರಸ್ತೆಯ ಮಾರ್ಗಗಳಲ್ಲಿ ಎಲ್ಲೆಂದರಲ್ಲಿ ಆಟೋಗಳನ್ನು ನಿಲ್ಲಿಸಿ ಸಂಚಾರ ಸುವ್ಯವಸ್ಥೆಗೆ ತೊಂದರೆಯಾಗುತ್ತಿರುವ ಬಗ್ಗೆ ಸಾರ್ವಜನಿಕರು ದೂರು ಸಲ್ಲಿಸಿದರು. ಸಾರ್ವಜನಿಕರ ಎಲ್ಲಾ ಕರೆಗಳನ್ನು ಶಾಂತಚಿತ್ತದಿAದ ಆಲಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಸಮಸ್ಯೆಗಳ ಪರಿಹಾರಕ್ಕೆ ಸಂಬAಧಪಟ್ಟ ವ್ಯಾಪ್ತಿಯ ಪೊಲೀಸ್ ಠಾಣೆಯ ಪಿಎಸ್‌ಐ ರವರಿಗೆ ಸೂಚನೆ ನೀಡಲಾಗುವುದು. ಅಲ್ಲದೇ, ಸಮಸ್ಯೆಗಳನ್ನು ಪರಿಹರಿಸಲು ಜಿಲ್ಲಾ ಮಟ್ಟದಲ್ಲಿ ಖುದ್ದಾಗಿ ಕ್ರಮ ಜರುಗಿಸುವುದಾಗಿ ಅವರು ಭರವಸೆ ನೀಡಿದರು.
ಶಹಾಪೂರ ಠಾಣೆ ವ್ಯಾಪ್ತಿಯಲ್ಲಿ ಮಟಕಾ, ಇಸ್ಪೀಟ್, ಜೂಜಾಟ ಆಡುತ್ತಿರುವ ಬಗ್ಗೆ ದೂರು ಬಂದಿದ್ದು, ನಿಖರ ಮಾಹಿತಿ ಪಡೆದು ದಾಳಿ ಮಾಡುವುದಾಗಿ ತಿಳಿಸಿದರು. ಯಾದಗಿರಿ ನಗರದ ಹಳೆಯ ಬಸ್‌ನಿಲ್ದಾಣ ಹತ್ತಿರ ವ್ಯಕ್ತಿಗೆ ೧ ತೊಲೆ ಬಂಗಾರ ವಂಚನೆ ಮಾಡಿ ಕಳ್ಳತನ ಮಾಡಿರುವ ಬಗ್ಗೆ ದೂರು ಬಂದಿದ್ದು, ಈ ಬಗ್ಗೆ ಯಾದಗಿರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳ್ಳರನ್ನು ಪತ್ತೆ ಮಾಡಲು ಸ್ಥಳದಲ್ಲಿ ಹಾಜರಿದ್ದ ಸಿಪಿಐ ಅವರಿಗೆ ಸೂಚಿಸಿದರು.
ಗುರಮಠಕಲ್ ಬಸ್‌ನಿಲ್ದಾಣದಲ್ಲಿ ಶಾಲಾ- ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳಿಗೆ ಪುಡಾರಿ ಹುಡುಗರು ಚುಡಾಯಿಸುವ ಬಗ್ಗೆ ದೂರಿನ ಅನುಸಾರ ತಕ್ಷಣ ಕ್ರಮ ಕೈಗೊಂಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಇಂದಿನಿAದಲೆ ಬಸ್ ನಿಲ್ದಾಣ ಹತ್ತಿರ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲು ಸೂಚಿಸಿದರು. ಅಲ್ಲದೇ, ತಪ್ಪಿತಸ್ಥ ಹುಡುಗರ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಲು ನಿರ್ದೇಶಿಸಿದರು.
ಯಾದಗಿರಿ ನಗರದಲ್ಲಿ ಪ್ಲಾಸ್ಟಿಕ್ ಮತ್ತು ಖಾಲಿ ಮದ್ಯದ ಬಾಟಲಿಗಳು ರಸ್ತೆಯ ಎಲ್ಲೆಂದರಲ್ಲಿ ಬೀಸಾಡುತ್ತಿದ್ದು, ಇದರಿಂದ ಜನರ ಸಂಚಾರಕ್ಕೆ ಹಾಗೂ ಜಾನುವಾರುಗಳಿಗೆ ತೊಂದರೆಯುAಟಾಗುತ್ತಿದೆ ಎಂದು ಸಾರ್ವಜನಿಕರೊಬ್ಬರು ದೂರಿದರು. ಈ ಕುರಿತು ಸಂಬAಧಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದಾಗಿ ಎಸ್.ಪಿ ಅವರು ತಿಳಿಸಿದರು. ವಡಗೇರಾ ಠಾಣೆ ವ್ಯಾಪ್ತಿಯಲ್ಲಿ ಸುಮಾರು ೬೩ ಗ್ರಾಮಗಳಿದ್ದು, ವಡಗೇರಾ ಠಾಣೆಗೆ ಪೊಲೀಸ್ ಸಿಬ್ಬಂದಿ ಬಲವನ್ನು ಹೆಚ್ಚಿಸುವಂತೆ ಕೋರಿದ ದೂರವಾಣಿ ಕರೆಗೆ ಪರಿಶೀಲಿಸುವ ಬಗ್ಗೆ ಭರವಸೆ ನೀಡಿದರು.
೯ ಅಹವಾಲು ಇತ್ಯರ್ಥ: ಕಳೆದ ಡಿಸೆಂಬರ್ ೩ರಂದು ನಡೆಸಿದ ಫೋನ್ ಇನ್ ಕಾರ್ಯಕ್ರಮದಲ್ಲಿ ೧೨ ಕರೆಗಳು ಬಂದಿದ್ದು, ಇವುಗಳಲ್ಲಿ ಸುಮಾರು ೯ ಅಹವಾಲುಗಳಿಗೆ ಸಂಬAಧಿಸಿದAತೆ ಕ್ರಮ ಕೈಗೊಂಡು ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸಲಾಗಿದೆ. ಉಳಿದಂತೆ ೩ ಅಹವಾಲುಗಳು ಜಮೀನು ಹಾಗೂ ಸಿವೀಲ್ ವ್ಯಾಜ್ಯಗಳ ವಿಷಯಕ್ಕೆ ಸಂಬAಧಿಸಿದ್ದು, ಸಮಸ್ಯೆ ಪರಿಹರಿಸುವ ಕಾರ್ಯ ಪ್ರಗತಿಯಲ್ಲಿದೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ ೩೨ ಮಟಕಾ ಜೂಜಾಟ, ೧೪ ಇಸ್ಪೀಟ್ ಜೂಜಾಟ, ೩೨ ಅಕ್ರಮ ಮರಳು ಸಾಗಾಣಿಕೆ, ಗಣಿಗಾರಿಕೆ ಹಾಗೂ ೧೭ ಅಬಕಾರಿ ದಾಳಿಗಳನ್ನು ಕೈಗೊಂಡು ಅಹವಾಲಿನ ಪ್ರಕಾರ ಕ್ರಮ ಕೈಗೊಳ್ಳಲಾಗಿದೆ ಎಂದು ಈ ಸಂದರ್ಭದಲ್ಲಿ ಮಾಹಿತಿ ನೀಡಿದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...