ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವಿಗೆ ಸೂಚನೆ
ಯಾದಗಿರಿ, ಫೆಬ್ರುವರಿ 13 (ಕರ್ನಾಟಕ ವಾರ್ತೆ): ಶಹಾಪುರ ನಗರಸಭೆ ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕ ರಸ್ತೆ, ಸಾರ್ವಜನಿಕ ಉದ್ಯಾನವನ ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ಯಾವುದೇ ಧಾರ್ಮಿಕ ಕಟ್ಟಡಗಳನ್ನು ನಿರ್ಮಾಣ ಮಾಡಿದ್ದರೆ ಮತ್ತು ಆಸ್ತಿದಾರರು ತಮ್ಮ ನಿವೇಶನ (ಜಾಗ) ಹೊರತುಪಡಿಸಿ ರಸ್ತೆ ಮತ್ತು ಚರಂಡಿ ಮೇಲೆ ಅತಿಕ್ರಮಿಸಿ ಕಟ್ಟಡ ನಿರ್ಮಾಣ ಮಾಡಿದ್ದರೆ ಸ್ವಯಂ ಪ್ರೇರಿತವಾಗಿ 7 ದಿನಗಳ ಒಳಗಾಗಿ ತೆರವುಗೊಳಿಸಬೇಕು ಎಂದು ಪೌರಾಯುಕ್ತರು ಸೂಚಿಸಿದ್ದಾರೆ.
ಸರ್ವೋಚ್ಛ ನ್ಯಾಯಾಲಯದ ವಿಶೇಷ ರಜಾ ಅರ್ಜಿ (ಎಸ್‍ಎಲ್ಪಿ(ಸಿ)) ಸಿವಿಲ್ ಸಂಖ್ಯೆ:27551/2009ರ ನಿರ್ದೇಶನದಂತೆ ಸಾರ್ವಜನಿಕ ರಸ್ತೆ, ಸಾರ್ವಜನಿಕ ಉದ್ಯಾನವನ ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿರುವ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸುವ ಬಗ್ಗೆ ಸರ್ಕಾರದ ಸುತ್ತೋಲೆ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ನಿಗದಿಪಡಿಸಿದ ಅವಧಿಯಲ್ಲಿ ಒಂದು ವೇಳೆ ತೆರವುಗೊಳಿಸದಿದ್ದಲ್ಲಿ ಸರ್ವೋಚ್ಛ ನ್ಯಾಯಾಲಯದ ಮತ್ತು ಸರ್ಕಾರದ ಆದೇಶದಂತೆ ಅಂಥಹ ಆಸ್ತಿಗಳನ್ನು ನಗರಸಭೆಯಿಂದ ತೆರುವುಗೊಳಿಸಲು ಕ್ರಮ ಜರುಗಿಸಲಾಗುವುದು. ತೆರವುಗೊಳಿಸುವ ಸಮಯದಲ್ಲಿ ತಮ್ಮ ಇತರ ಆಸ್ತಿಗಳಿಗೆ ಯಾವುದೇ ಹಾನಿಯಾದರೆ ಅದಕ್ಕೆ ನಗರಸಭೆ ಜವಬ್ದಾರರಾಗುವುದಿಲ್ಲ. ಕಾರಣ ಸ್ವಯಂ ಪ್ರೇರಿತವಾಗಿ ತೆರವುಗೊಳಿಸಲು ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ಅಲ್ಪಾವಧಿ ಟೆಂಡರ್ ಆಹ್ವಾನ
ಯಾದಗಿರಿ, ಫೆಬ್ರುವರಿ 13 (ಕರ್ನಾಟಕ ವಾರ್ತೆ): ಜಿಲ್ಲಾ ಪಂಚಾಯಿತಿ ಕಚೇರಿಯ ದೈನಂದಿನ ಕೆಲಸಕ್ಕಾಗಿ ಸ್ಟೇಶನರಿ ಸಾಮಗ್ರಿಗಳನ್ನು ಸರಬರಾಜು ಮಾಡಲು ದ್ವಿಲಕೋಟೆ ಪದ್ಧತಿಯಲ್ಲಿ ಅಲ್ಪಾವಧಿ ಟೆಂಡರ್ ಆಹ್ವಾನಿಸಲಾಗಿದೆ.
ಅರ್ಜಿದಾರರು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯಿತಿ, ಯಾದಗಿರಿ ಇವರ ಹೆಸರಿಗೆ ಸಂದಾಯವಾಗುವಂತೆ 1000 ರೂ. ಬೇಡಿಕೆ ಹುಂಡಿ ಪಡೆದು ಟೆಂಡರ್ ಬುಕ್‍ಲೆಟ್ ಅನ್ನು ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯದರ್ಶಿಗಳ ಕಚೇರಿಯಿಂದ ಫೆಬ್ರುವರಿ 20ರೊಳಗೆ ಪಡೆದುಕೊಳ್ಳಬೇಕು. ಫೆಬ್ರುವರಿ 24ರೊಳಗೆ ಟೆಂಡರ್ ಅರ್ಜಿಗಳನ್ನು ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯದರ್ಶಿಗಳ ಕಾರ್ಯಾಲಯಕ್ಕೆ ಸಲ್ಲಿಸಬೇಕು. ಫೆ.25ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಗಳ ಕಾರ್ಯಾಲಯದಲ್ಲಿ ತಾಂತ್ರಿಕ ಬಿಡ್ ತೆರೆಯಲಾಗುವುದು. ಫೆ.25ರಂದು ಮಧ್ಯಾಹ್ನ 3.30 ಗಂಟೆಗೆ ಆರ್ಥಿಕ ಬಿಡ್ ತೆರೆಯಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಲೆಕ್ಕಪರಿಶೋಧಕರನ್ನು ನೇಮಿಸಿಕೊಳ್ಳಲು ಸೂಚನೆ
ಯಾದಗಿರಿ, ಫೆಬ್ರುವರಿ 13 (ಕರ್ನಾಟಕ ವಾರ್ತೆ): ಜಿಲ್ಲೆಯ ಸಹಕಾರ ಸಂಘಗಳ/ ಸೌಹಾರ್ದ ಸಹಕಾರ ಸಂಘಗಳ ಕಾಯ್ದೆ ಹಾಗೂ ನಿಯಮಗಳನ್ವಯ 2018-19ರ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಲೆಕ್ಕಪರಿಶೋಧಕರನ್ನು (2019-20ನೇ ಸಾಲಿನ ಲೆಕ್ಕ ಪರಿಶೋಧನೆಗಾಗಿ) ನೇಮಕ ಮಾಡಿಕೊಂಡು ವಾರ್ಷಿಕ ಮಹಾಸಭೆಯ ನಡವಳಿಯ ಪ್ರತಿಯನ್ನು ಕಾರ್ಯದರ್ಶಿ ಹಾಗೂ ಅಧ್ಯಕ್ಷರ ಸಹಿಯೊಂದಿಗೆ ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ಉಪ ನಿರ್ದೇಶಕರ ಕಚೇರಿಗೆ 7 ದಿನಗಳೊಳಗಾಗಿ ಸಲ್ಲಿಸಬೇಕು. ತಪ್ಪಿದಲ್ಲಿ ತಾವು ವಾರ್ಷಿಕ ಮಹಾಸಭೆಯಲ್ಲಿ ಲೆಕ್ಕಪರಿಶೋಧಕರನ್ನು ನೇಮಕ ಮಾಡಿಕೊಂಡಿರುವುದಿಲ್ಲವೆಂದು ಪರಿಭಾವಿಸಿ, ಇಲಾಖಾ ವತಿಯಿಂದ ತಮ್ಮ ಸಂಸ್ಥೆಯ ಲೆಕ್ಕಪರಿಶೋಧನೆಗಾಗಿ ಲೆಕ್ಕಪರಿಶೋಧಕರನ್ನು ನೇಮಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ