ಗುರುವಾರ, ಫೆಬ್ರವರಿ 13, 2020

ನಾಳೆ ಎಸಿಬಿ ಅಧಿಕಾರಿಗಳಿಂದ ಅಹವಾಲು ಸ್ವೀಕಾರ
ಯಾದಗಿರಿ, ಫೆಬ್ರುವರಿ ೧೨ (ಕರ್ನಾಟಕ ವಾರ್ತೆ): ಯಾದಗಿರಿ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ಜಿಲ್ಲೆಯ ವಿವಿಧೆಡೆ ಜನಸಂಪರ್ಕ ಸಭೆ ನಡೆಸಿ ಸಾರ್ವಜನಿಕರಿಂದ ಅರ್ಜಿ ಅಹವಾಲು ಸ್ವೀಕಾರ ಮಾಡಲಿದ್ದು, ನಿಗದಿಪಡಿಸಿದ ದಿನಾಂಕಗಳAದು ಸಾರ್ವಜನಿಕರು ಅಧಿಕಾರಿಗಳನ್ನು ಭೇಟಿಯಾಗಿ ಭ್ರಷ್ಟಾಚಾರಕ್ಕೆ ಸಂಬAಧಿಸಿದAತೆ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ.
ಭ್ರಷ್ಟಾಚಾರ ನಿಗ್ರಹ ದಳದ ಡಿಎಸ್‌ಪಿ ಡಾ.ಸಂತೋಷ ಕೆ.ಎಂ (೯೪೮೦೮ ೦೬೨೪೨), ಪೊಲೀಸ್ ಇನ್‌ಸ್ಪೆಕ್ಟರ್ ಬಾಬಾಸಾಹೇಬ ಪಾಟೀಲ್ (ಮೊ: ೯೪೮೦೮ ೦೬೩೧೩), ಪೊಲೀಸ್ ಇನ್‌ಸ್ಪೆಕ್ಟರ್ ಗುರುಪಾದ ಎಸ್.ಬಿರಾದಾರ (ಮೊ: ೯೪೮೦೮ ೦೬೩೧೪) ಅವರು ಅಹವಾಲು ಸ್ವೀಕರಿಸುವರು. ಫೆಬ್ರುವರಿ ೧೪ರಂದು ಬೆಳಿಗ್ಗೆ ೧೧ರಿಂದ ಮಧ್ಯಾಹ್ನ ೨ಗಂಟೆ ವರೆಗೆ ಯಾದಗಿರಿ ತಾಲ್ಲೂಕಿನ ಯರಗೋಳ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಅಹವಾಲು ಸ್ವೀಕರಿಸುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಲೋಕಾಯುಕ್ತ ಪೊಲೀಸರಿಂದ ಅಹವಾಲು ಸ್ವೀಕಾರ
ಯಾದಗಿರಿ, ಫೆಬ್ರುವರಿ ೧೨ (ಕರ್ನಾಟಕ ವಾರ್ತೆ): ಯಾದಗಿರಿ ಜಿಲ್ಲೆಯ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರಾದ ಉಮೇಶ ಬಿ. ಚಿಕ್ಕಮಠ ಅವರು ಜಿಲ್ಲೆಯ ವಿವಿಧೆಡೆ ನಿಗದಿಪಡಿಸಿದ ದಿನಾಂಕಗಳAದು ಯಾದಗಿರಿ ಜಿಲ್ಲೆಯ ಸಂಬAಧಪಟ್ಟ ತಾಲ್ಲೂಕುಗಳಲ್ಲಿ ಸಾರ್ವಜನಿಕರಿಂದ ಕುಂದುಕೊರತೆಗಳ ಕುರಿತು ಅಹವಾಲು ಸ್ವೀಕರಿಸುವರು.
ಫೆಬ್ರುವರಿ ೧೮ರಂದು ಬೆಳಿಗ್ಗೆ ೧೧ ಗಂಟೆಗೆ ಶಹಾಪೂರ ತಾಲ್ಲೂಕು ಪಂಚಾಯಿತಿ ಸಭಾ ಭವನ, ಫೆಬ್ರುವರಿ ೨೦ರಂದು ಬೆಳಿಗ್ಗೆ ೧೧ ಗಂಟೆಗೆ ವಡಗೇರಾ ತಾಲ್ಲೂಕಿನ ತಹಸೀಲ್ದಾರ ಕಾರ್ಯಲಯದ ಆವರಣದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು. ಈ ದಿನಾಂಕಗಳAದು ಸಂಬAಧಪಟ್ಟ ತಾಲ್ಲೂಕಿನ ಎಲ್ಲಾ ಅಧಿಕಾರಿಗಳು ಉಪಸ್ಥಿತರಿರುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕೊರೊನಾ ವೈರಸ್‌ಗೆ ಭಯ ಪಡುವ ಅಗತ್ಯವಿಲ್ಲ
-ಜಿ.ಪಂ ಕಾರ್ಯನಿರ್ವಾಹಕ ಅಧಿಕಾರಿ: ಶಿಲ್ಪ್ಪಾ ಶರ್ಮಾ
ಯಾದಗಿರಿ, ಫೆಬ್ರುವರಿ ೧೨ (ಕರ್ನಾಟಕ  ಸರ್ಕಾರ ) ಕೊರೊನಾ ವೈರಸ್ ಜನರು ಭಯಪಡುವ ಅಗತ್ಯವಿಲ್ಲ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀಮತಿ ಶಿಲ್ಪ್ಪಾ ಶರ್ಮಾ ಅವರು ಹೇಳಿದರು. ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಬುಧವಾರ ಜಿಲ್ಲೆಯ ಎಲ್ಲಾ ವೈದ್ಯಾಧಿಕಾರಿಗಳಿಗೆ ಕೊರೊನಾ ವೈರಸ್ ಕುರಿತು ಈ ಕಾರ್ಯಗಾರದಲ್ಲಿ ಕೊರೊನಾ ವೈರಸ್ ಕುರಿತು ಮಾಹಿತಿ ಹೊಂದಿರುವ ಭಿತ್ತಿ ಪತ್ರ ಮತ್ತು ಸ್ಟಿಕ್ಕರ್ಸ್ ಬಿಡುಗಡೆ ಮಾಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಡಾ|| ಎಂ.ಎಸ್ ಪಾಟೀಲ್ ಮಾತನಾಡಿ, ನೋವೆಲ್ ಕೊರೊನಾ ವೈರಸ್ ಮುಖ್ಯವಾಗಿ ಪ್ರಾಣಿಗಳಲ್ಲಿ ಮತ್ತು ಮನುಷ್ಯರಲ್ಲಿ ಉಸಿರಾಟಕ್ಕೆ ತೊಂದರೆ ಮಾಡುತ್ತದೆ, ಈ ವೈರಸ್ ಮೊದಲ ಬಾರಿಗೆ ಚೀನಾದ ವುಹಾನ್‌ನಲ್ಲಿ ಪತ್ತೆಯಾಗಿರುತ್ತದೆ. ಕೊರೊನಾ ವೈರಸ್ ಸೋಂಕಿತ ವ್ಯಕ್ತಿಯು ಸೀನಿದಾಗ ಮತ್ತು ಕೆಮ್ಮಿದಾಗ, ನಿಕಟ ಸಂಪರ್ಕದಲ್ಲಿರುವಾಗ, ಹಸ್ತಲಾಘವ ಮತ್ತು ಮುಟ್ಟುವಾಗ, ವ್ಯಕ್ತಿಯು ಬಳಸಿದ ವಸ್ತುವನ್ನು ಯಾವುದೇ ರಕ್ಷಣೆ ಇಲ್ಲದೆ ಬಳಸಿದಾಗ ಮತ್ತು ಸ್ವಚ್ಛಗೊಳಿಸದ/ಸುರಕ್ಷಿತವಲ್ಲದ ಕೈಗಳಿಂದ ಕಣ್ಣು, ಮೂಗು, ಬಾಯಿಯನ್ನು ಮುಟ್ಟುವುದರಿಂದ ಈ ರೋಗವು ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ ಎಂದು ತಿಳಿಸಿದರು. ಜಿಲ್ಲಾ ಸರ್ವೇಕ್ಷಣಾ ಅಧಿಕಾರಿಯಾದ ಡಾ|| ವಿವೇಕಾನಂದ ಮಾತನಾಡಿ, ಜ್ವರ, ತಲೆನೋವು, ನೆಗಡಿ, ಕೆಮ್ಮು, ಉಸಿರಾಟದ ತೊಂದರೆ, ನ್ಯೂಮೊನಿಯಾ ಈ ರೋಗದ ಮುಖ್ಯ ಲಕ್ಷಣಗಳಾಗಿರುತ್ತವೆ ಎಂದು ಹೇಳಿದರು.  ನಂತರ ಸಂಪನ್ಮೂಲ ವ್ಯಕ್ತಿಗಳು ಮಾತನಾಡಿ, ಸಾರ್ವಜನಿಕರು ಅನುಸರಿಸಬೇಕಾಗಿರುವ ಮುಂಜಾಗ್ರತೆ ಕ್ರಮಗಳಾದ ಸೋಂಕು ಪಿಡಿತರ ಸಂಪರ್ಕದಿAದ ದೂರವಿರುವುದು, ಶಂಕಿತ ರೋಗಿಯು ಮನೆಯಲ್ಲಿಯೇ ಪ್ರತ್ಯೇಕವಾಗಿರುವುದು ಮತ್ತು ಟ್ರಿಪಲ್ ಲೇಯರ್ ಮಾಸ್ಕ್ ಬಳಸುವುದು, ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳುವುದು. ವಿಶೇಷವಾಗಿ ಆಗಾಗ್ಗೆ ಸಾಬೂನಿನಿಂದ ಕೈ ತೊಳೆದುಕೊಳ್ಳುವುದು, ಕೆಮ್ಮುವಾಗ ಮತ್ತು ಸೀನುವಾಗ ಕೈ ವಸ್ತç ಉಪಯೋಗಿಸುವುದು, ಉಸಿರಾಟದ ತೊಂದರೆಯಾದಲ್ಲಿ ತಕ್ಷಣ ವೈದ್ಯರ ಸಲಹೆ ಪಡೆಯುವುದು, ಮಾಂಸ, ಮೊಟ್ಟೆ ಇತ್ಯಾದಿಗಳನ್ನು ಚೆನ್ನಾಗಿ ಬೇಯಿಸಿ ಉಪಯೋಗಿಸಬೇಕು ಎಂದು ಹೇಳಿದರು.  ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿಗಳು, ಯಾದಗಿರಿ, ಜಿಲ್ಲಾ ಮಲೇರಿಯಾ ನಿಯಂತ್ರಣ ಅಧಿಕಾರಿಗಳು, ಯಾದಗಿರಿ, ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿಗಳು, ಯಾದಗಿರಿ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳು, ಯಾದಗಿರಿ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಗಳು, ಯಾದಗಿರಿ, ಹಾಗೂ ತಾಲೂಕಾ ಆರೋಗ್ಯ ಅಧಿಕಾರಿಗಳು, ಯಾದಗಿರಿ, ಶಹಾಪೂರ ಮತ್ತು ಸುರಪೂರ ರವರು ಹಾಜರಿದ್ದರು ಹಾಗೂ ಈ ಕಾರ್ಯಗಾರಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕಲಬುರಗಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಪ್ರೊಫೆಸರ್ ರವರಾದ  ಡಾ. ಗುರುರಾಜ ಎನ್.ಎ ಮತ್ತು ಡಾ. ಪಠಾಣ ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರುಪಣೆ, ವಂದನಾರ್ಪಣೆ   ಡಾ.ಅಬ್ದುಲ ರಷೀದ ಮಾಡಿದರು.



ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...