ಇಂದು ಸಂತ ಸೇವಾಲಾಲ ಜಯಂತಿ
ಯಾದಗಿರಿ, ಫೆಬ್ರುವರಿ ೧೪ (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಶ್ರೀ ಸಂತ ಸೇವಾಲಾಲ ಜಯಂತ್ಯೋತ್ಸವ ಸಮಿತಿಯ ಸಂಯುಕ್ತಾಶ್ರಯದಲ್ಲಿ ಶ್ರೀ ಸಂತ ಸೇವಾಲಾಲ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಕಾರ್ಯಕ್ರಮವನ್ನು ಫೆಬ್ರುವರಿ ೧೫ರಂದು ಬೆಳಿಗ್ಗೆ ೧೧ ಗಂಟೆಗೆ ಯಾದಗಿರಿ ನಗರದ ಜಿಲ್ಲಾಡಳಿತ ಭವನ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದೆ.ಪಶುಸಂಗೋಪನೆ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಪ್ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಬಿ.ಚವ್ಹಾಣ್ ಅವರು ಉದ್ಘಾಟಿಸುವರು. ಶಾಸಕರಾದ ವೆಂಕಟರೆಡ್ಡಿಗೌಡ ಮುದ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಜಶೇಖರಗೌಡ ಪಾಟೀಲ ವಜ್ಜಲ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸುವರು.ಲೋಕಸಭಾ ಸದಸ್ಯರಾದ ರಾಜಾ ಅಮರೇಶ್ವರ ನಾಯಕ, ಡಾ.ಉಮೇಶ ಜಿ.ಜಾಧವ ಅವರು ಅತಿಥಿಗಳಾಗಿ ಆಗಮಿಸುವರು. ಶಾಸಕರಾದ ಶರಣಬಸಪ್ಪಗೌಡ ದರ್ಶನಾಪೂರ, ನರಸಿಂಹ ನಾಯಕ (ರಾಜುಗೌಡ), ನಾಗನಗೌಡ ಕಂದಕೂರ, ವಿಧಾನ ಪರಿಷತ್ ಸದಸ್ಯರಾದ ಶರಣಪ್ಪ ಮಟ್ಟೂರ, ಡಾ.ಚಂದ್ರಶೇಖರ ಪಾಟೀಲ್, ಬಿ.ಜಿ.ಪಾಟೀಲ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಗಿರಿಜಮ್ಮ ಸದಾಶಿವಪ್ಪಗೌಡ ರೋಟ್ನಡಗಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಭೀಮವ್ವ ಮಲ್ಲೇಶಪ್ಪ ಅಚೋಲ ಅವರು ವಿಶೇಷ ಆಹ್ವಾನಿತರಾಗಿ ಆಗಮಿಸುವರು. ಮುಂಡರಗಿ ಸರ್ಕಾರಿ ಪ್ರೌಢ ಶಾಲಾ ಸಹಶಿಕ್ಷಕ ಕೀಸನ್ ಪವಾರ್ ಕುರಕುಂಬಳ ಅವರು ವಿಶೇಷ ಉಪನ್ಯಾಸ ನೀಡುವರು.
ಗ್ರಾಹಕರ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಮನವಿ
ಯಾದಗಿರಿ, ಫೆಬ್ರುವರಿ ೧೪ (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ರಾಷ್ಟಿçÃಯ ಗ್ರಾಹಕರ ದಿನಾಚರಣೆಯನ್ನು ಫೆಬ್ರುವರಿ ೧೭ರಂದು ಮಧ್ಯಾಹ್ನ ೩ ಗಂಟೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದ್ದು, ಗ್ರಾಹಕರ ಜಾಗೃತಿ ಕುರಿತಂತೆ ಪರಿಣಿತರಿಂದ ಉಪನ್ಯಾಸ ಏರ್ಪಡಿಸಲಾಗಿದೆ. ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಗ್ರಾಹಕರ ಹಕ್ಕು ಮತ್ತು ಜವಾಬ್ದಾರಿಗಳನ್ನು ತಿಳಿದುಕೊಳ್ಳಬೇಕೆಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕರಾದ ದತ್ತಪ್ಪ ಕಲ್ಲೂರ್ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಫೆ.೧೯ರಂದು ಛತ್ರಪತಿ ಶಿವಾಜಿ ಮಹಾರಾಜ ಜಯಂತಿ
ಯಾದಗಿರಿ, ಫೆಬ್ರುವರಿ ೧೪ (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಶ್ರೀ ಛತ್ರಪತಿ ಶಿವಾಜಿ ಮಹಾರಾಜ ಜಯಂತ್ಯೋತ್ಸವ ಸಮಿತಿಯ ಸಂಯುಕ್ತಾಶ್ರಯದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಕಾರ್ಯಕ್ರಮವನ್ನು ಫೆಬ್ರುವರಿ ೧೯ರಂದು ಬೆಳಿಗ್ಗೆ ೧೧ ಗಂಟೆಗೆ ಯಾದಗಿರಿ ನಗರದ ಜಿಲ್ಲಾಡಳಿತ ಭವನ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದೆ. ಪಶುಸಂಗೋಪನೆ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಪ್ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಬಿ.ಚವ್ಹಾಣ್ ಅವರು ಉದ್ಘಾಟಿಸುವರು. ಶಾಸಕರಾದ ವೆಂಕಟರೆಡ್ಡಿಗೌಡ ಮುದ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಜಶೇಖರಗೌಡ ಪಾಟೀಲ ವಜ್ಜಲ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸುವರು.ಲೋಕಸಭಾ ಸದಸ್ಯರಾದ ರಾಜಾ ಅಮರೇಶ್ವರ ನಾಯಕ, ಡಾ.ಉಮೇಶ ಜಿ.ಜಾಧವ ಅವರು ಅತಿಥಿಗಳಾಗಿ ಆಗಮಿಸುವರು. ಶಾಸಕರಾದ ಶರಣಬಸಪ್ಪಗೌಡ ದರ್ಶನಾಪೂರ, ನರಸಿಂಹ ನಾಯಕ (ರಾಜುಗೌಡ), ನಾಗನಗೌಡ ಕಂದಕೂರ, ವಿಧಾನ ಪರಿಷತ್ ಸದಸ್ಯರಾದ ಶರಣಪ್ಪ ಮಟ್ಟೂರ, ಡಾ.ಚಂದ್ರಶೇಖರ ಪಾಟೀಲ್, ಬಿ.ಜಿ.ಪಾಟೀಲ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಗಿರಿಜಮ್ಮ ಸದಾಶಿವಪ್ಪಗೌಡ ರೋಟ್ನಡಗಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಭೀಮವ್ವ ಮಲ್ಲೇಶಪ್ಪ ಅಚೋಲ ಅವರು ವಿಶೇಷ ಆಹ್ವಾನಿತರಾಗಿ ಆಗಮಿಸುವರು. ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರಾದ ಸರ್ವೋದಯ ಅವರು ವಿಶೇಷ ಉಪನ್ಯಾಸ ನೀಡುವರು.
ರಾಷ್ಟಿçಯ ವಿಚಾರ ಸಂಕಿರಣಕ್ಕೆ ಆಹ್ವಾನ
ಯಾದಗಿರಿ, ಫೆಬ್ರುವರಿ ೧೪ (ಕರ್ನಾಟಕ ವಾರ್ತೆ): ಕರ್ನಾಟಕ ಸಾಹಿತ್ಯ ಅಕಾಡೆಮಿಯು ಮಾರ್ಚ್ ೧೯ ಮತ್ತು ೨೦ರಂದು ಬೆಂಗಳೂರಿನ ನಯನ ಸಭಾಂಗಣದಲ್ಲಿ ಎಂ.ಗೋಪಾಲಕೃಷ್ಣ ಅಡಿಗರ ಜನ ಶತಮಾನೋತ್ಸವ ನೆನಪಿಗಾಗಿ ‘ಗೋಪಾಲಕೃಷ್ಣ ಅಡಿಗ ಮತ್ತು ಕನ್ನಡ ಸಾಹಿತ್ಯ’ ಎಂಬ ವಿಷಯದಡಿ ರಾಷ್ಟಿçÃಯ ವಿಚಾರ ಸಂಕಿರಣವನ್ನು ಹಮ್ಮಿಕೊಂಡಿದೆ. ಈ ವಿಚಾರ ಸಂಕಿರಣದಲ್ಲಿ ಪರ್ಯಾಯ ಗೋಷ್ಠಿಗಳು ನಡೆಯಲಿದ್ದು, ಪರ್ಯಾಯ ಗೋಷ್ಠಿಯಲ್ಲಿ ಅಡಿಗರ ಸಾಹಿತ್ಯ ಕುರಿತಾಗಿ ಪ್ರಬಂಧ ಮಂಡಿಸುವವರು ಫೆಬ್ರುವರಿ ೨೫ರೊಳಗೆ ಅಕಾಡೆಮಿಯ ಇ-ಮೇಲ್ sahithya.academy@gmail.com ಗೆ ಪ್ರಬಂಧಗಳನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ವೆಬ್‌ಸೈಟ್: www.karnatakasahithyaacademy.org ದೂ: 080-22211730, 22106460 ಸಂಪರ್ಕಿಸಬಹುದು ಎಂದು ರಿಜಿಸ್ಟಾçರ್ ಎನ್.ಕರಿಯಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ