ಮಾ.21ರಂದು ಮೊಬೈಲ್, ವಾಹನ ಹರಾಜು
ಯಾದಗಿರಿ, ಫೆಬ್ರುವರಿ 17 (ಕರ್ನಾಟಕ ವಾರ್ತೆ): ಸುರಪುರದ ಸಿವಿಲ್ ನ್ಯಾಯಾಧೀಶರ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳವರ ನ್ಯಾಯಾಲಯದ ವಿವಿಧ ಪ್ರಕರಣಗಳಲ್ಲಿನ ಮೊಬೈಲ್‍ಗಳ ಸಾರ್ವಜನಿಕ ಹರಾಜು ಪ್ರಕ್ರಿಯೆಯನ್ನು ಮಾರ್ಚ್ 21ರಂದು ಬೆಳಿಗ್ಗೆ 10.30 ಗಂಟೆಗೆ ಮತ್ತು ವಾಹನಗಳ ಹರಾಜು ಪ್ರಕ್ರಿಯೆಯನ್ನು ಬೆಳಿಗ್ಗೆ 11 ಗಂಟೆಗೆ ಕೋರ್ಟ್ ಆವರಣದಲ್ಲಿ ನಡೆಸಲಾಗುತ್ತಿದ್ದು, ಆಸಕ್ತ ಸಾರ್ವಜನಿಕರು ಹರಾಜಿನಲ್ಲಿ ಭಾಗವಹಿಸಬಹುದು ಎಂದು ಸಿವಿಲ್ ನ್ಯಾಯಾಧೀಶರಾದ ಶ್ರೀ ಅಮರನಾಥ ಬಿ.ಎನ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಫೆ.20ರಂದು ಸಂತಕವಿ ಸರ್ವಜ್ಞ ಜಯಂತಿ
ಯಾದಗಿರಿ, ಫೆಬ್ರುವರಿ 17 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ನಗರಸಭೆ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಶ್ರೀ ಸಂತಕವಿ ಸರ್ವಜ್ಞ ಜಯಂತ್ಯೋತ್ಸವ ಸಮಿತಿ ಸಂಯುಕ್ತಾಶ್ರಯದಲ್ಲಿ ಶ್ರೀ ಸಂತಕವಿ ಸರ್ವಜ್ಞ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಕಾರ್ಯಕ್ರಮವನ್ನು ಫೆಬ್ರುವರಿ 20ರಂದು ಬೆಳಿಗ್ಗೆ 11 ಗಂಟೆಗೆ ಯಾದಗಿರಿ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದೆ.
ಪಶುಸಂಗೋಪನೆ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಬಿ.ಚವ್ಹಾಣ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ವಿಧಾನಸಭಾ ಸದಸ್ಯರಾದ ವೆಂಕಟರೆಡ್ಡಿಗೌಡ ಮುದ್ನಾಳ ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಜಶೇಖರಗೌಡ ಪಾಟೀಲ್ ವಜ್ಜಲ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಲೋಕಸಭಾ ಸದಸ್ಯರಾದ ರಾಜಾ ಅಮರೇಶ್ವರ ನಾಯಕ, ಡಾ.ಉಮೇಶ ಜಿ.ಜಾಧವ ಅವರು ಅತಿಥಿಗಳಾಗಿ ಆಗಮಿಸುವರು.
ವಿಧಾನಸಭಾ ಸದಸ್ಯರಾದ ಶರಣಬಸಪ್ಪಗೌಡ ದರ್ಶನಾಪೂರ, ನರಸಿಂಹ ನಾಯಕ (ರಾಜುಗೌಡ), ನಾಗನಗೌಡ ಕಂದಕೂರ, ವಿಧಾನ ಪರಿಷತ್ ಸದಸ್ಯರಾದ ಶರಣಪ್ಪ ಮಟ್ಟೂರ, ಡಾ.ಚಂದ್ರಶೇಖರ ಪಾಟೀಲ, ಬಿ.ಜಿ.ಪಾಟೀಲ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಗಿರಿಜಮ್ಮ ಸದಾಶಿವಪ್ಪಗೌಡ ರೊಟ್ನಡಗಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಭೀಮವ್ವ ಮಲ್ಲೇಶಪ್ಪ ಅಚ್ಚೋಲಾ ಅವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು. ಬಾಚವಾರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರಾದ ಬಂಗಾರಪ್ಪ ಕುಂಬಾರ ಯರಗೋಳ ಅವರು ವಿಶೇಷ ಉಪನ್ಯಾಸ ನೀಡುವರು.
ಫೆ.21ರಂದು ದಲಿತ ವಚನಕಾರರ ಜಯಂತಿ
ಯಾದಗಿರಿ, ಫೆಬ್ರುವರಿ 17 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ನಗರಸಭೆ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಶ್ರೀ ದಲಿತ ವಚನಕಾರರ ಜಯಂತ್ಯೋತ್ಸವ ಸಮಿತಿ ಸಂಯುಕ್ತಾಶ್ರಯದಲ್ಲಿ ಶ್ರೀ ದಲಿತ ವಚನಕಾರರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸುವ ಕಾರ್ಯಕ್ರಮವನ್ನು ಫೆಬ್ರುವರಿ 21ರಂದು ಬೆಳಿಗ್ಗೆ 11 ಗಂಟೆಗೆ ಯಾದಗಿರಿ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದೆ.
ಪಶುಸಂಗೋಪನೆ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಬಿ.ಚವ್ಹಾಣ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ವಿಧಾನಸಭಾ ಸದಸ್ಯರಾದ ವೆಂಕಟರೆಡ್ಡಿಗೌಡ ಮುದ್ನಾಳ ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಜಶೇಖರಗೌಡ ಪಾಟೀಲ್ ವಜ್ಜಲ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಲೋಕಸಭಾ ಸದಸ್ಯರಾದ ರಾಜಾ ಅಮರೇಶ್ವರ ನಾಯಕ, ಡಾ.ಉಮೇಶ ಜಿ.ಜಾಧವ ಅವರು ಅತಿಥಿಗಳಾಗಿ ಆಗಮಿಸುವರು.
ವಿಧಾನಸಭಾ ಸದಸ್ಯರಾದ ಶರಣಬಸಪ್ಪಗೌಡ ದರ್ಶನಾಪೂರ, ನರಸಿಂಹ ನಾಯಕ (ರಾಜುಗೌಡ), ನಾಗನಗೌಡ ಕಂದಕೂರ, ವಿಧಾನ ಪರಿಷತ್ ಸದಸ್ಯರಾದ ಶರಣಪ್ಪ ಮಟ್ಟೂರ, ಡಾ.ಚಂದ್ರಶೇಖರ ಪಾಟೀಲ, ಬಿ.ಜಿ.ಪಾಟೀಲ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಗಿರಿಜಮ್ಮ ಸದಾಶಿವಪ್ಪಗೌಡ ರೊಟ್ನಡಗಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಭೀಮವ್ವ ಮಲ್ಲೇಶಪ್ಪ ಅಚ್ಚೋಲಾ ಅವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು. ಸುಬಮ ಪದವಿ ಪೂರ್ವ ಕಾಲೇಜಿನ ಗುರುಪ್ರಸಾದ ವೈದ್ಯ ಅವರು ವಿಶೇಷ ಉಪನ್ಯಾಸ ನೀಡುವರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ