ಬುಧವಾರ, ಫೆಬ್ರವರಿ 5, 2020

ಮತದಾರರ ಪಟ್ಟಿಯಿಂದ ಕೈಬಿಟ್ಟವರ ದಾಖಲೆ ಸಂಗ್ರಹಿಸಿಟ್ಟುಕೊಳ್ಳಲು ಸೂಚನೆ
ಅಂತಿಮ ಮತದಾರರ ಪಟ್ಟಿ ಸಿದ್ಧತೆ ಪರಿಶೀಲನೆ
-ಡಾ.ಜೆ.ರವಿಶಂಕರ್
ಯಾದಗಿರಿ, ಫೆಬ್ರುವರಿ 05 (ಕರ್ನಾಟಕ ವಾರ್ತೆ): ಜಿಲ್ಲೆಯ ನಾಲ್ಕೂ ವಿಧಾನಸಭಾ ಕ್ಷೇತ್ರಗಳ ಕರಡು ಮತದಾರರ ಪಟ್ಟಿ ಪ್ರಕಟ ಮಾಡಿದ ನಂತರ ಅಂದರೆ ಕಳೆದ ಡಿಸೆಂಬರ್ 16ರಿಂದ ಜನವರಿ 28ರವರೆಗೆ ಬಂದಿರುವ ಹಕ್ಕು ಮತ್ತು ಆಕ್ಷೇಪಣೆಗಳನ್ನು ಕೂಲಂಕಷವಾಗಿ ಪರಿಶೀಲಿಸಬೇಕು. ಮುಖ್ಯವಾಗಿ ಅನರ್ಹ ಮತದಾರರನ್ನು ತೆಗೆದು ಹಾಕಿರುವ ಬಗ್ಗೆ ದಾಖಲೆಗಳನ್ನು ಸಂಗ್ರಹಿಸಿಟ್ಟುಕೊಳ್ಳಬೇಕು ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಜಿಲ್ಲಾ ಮತದಾರರ ಪಟ್ಟಿ ವೀಕ್ಷಕರಾದ ಡಾ. ಜೆ.ರವಿಶಂಕರ್ ಅವರು ಸೂಚಿಸಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಅಂತಿಮ ಮತದಾರರ ಪಟ್ಟಿ ಸಿದ್ಧತೆ ಕುರಿತಂತೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಕರಡು ಮತದಾರರ ಪಟ್ಟಿ ಪ್ರಕಟ ನಂತರ ಒಟ್ಟಾರೆ ಜಿಲ್ಲೆಯಲ್ಲಿ ಎಲ್ಲಾ ನಮೂನೆಯ ಅರ್ಜಿಗಳ ಮೂಲಕ 15,558 ಹಕ್ಕು ಮತ್ತು ಆಕ್ಷೇಪಣೆಗಳು ಬಂದಿವೆ. ಈ ಪೈಕಿ 12,931 ಅರ್ಜಿಗಳನ್ನು ಅಂಗೀಕರಿಸಿದ್ದು, 882 ಅರ್ಜಿಗಳು ತಿರಸ್ಕøತಗೊಂಡಿವೆ. ಇವುಗಳಲ್ಲಿ ವಿವಿಧ ಕಾರಣಗಳಿಂದ ಮತದಾರರ ಪಟ್ಟಿಯಿಂದ ಕೈಬಿಟ್ಟವರ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ಅಂತಹವರ ಅಗತ್ಯ ದಾಖಲೆಗಳನ್ನು ಸಂಗ್ರಹಿಸಿಟ್ಟುಕೊಂಡರೆ ಚುನಾವಣಾ ಸಂದರ್ಭದಲ್ಲಿ ಯಾವುದೇ ಗೊಂದಲಗಳು ಕಂಡುಬರುವುದಿಲ್ಲ ಮತ್ತು ಚುನಾವಣಾ ಆಯೋಗದಿಂದ ಬರುವ ಅಧಿಕಾರಿಗಳಿಗೂ ಮಾಹಿತಿ ನೀಡಲು ಸುಲಭವಾಗುತ್ತದೆ ಎಂದು ಅವರು ಸಲಹೆ ನೀಡಿದರು.ಚುನಾವಣಾಆಯೋಗದ ನಿರ್ದೇಶನದಂತೆ ಅರ್ಹತಾ ದಿನಾಂಕ: 01.01.2020ರಂತೆ ವಿಧಾನಸಭಾ ಕ್ಷೇತ್ರಗಳ ಭಾವಚಿತ್ರವಿರುವ ಕರಡು ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ನಡೆಸಲಾಗಿದೆ. ಅಂತಿಮ ಮತದಾರರ ಪಟ್ಟಿಯನ್ನು ಫೆಬ್ರುವರಿ 7ರಂದು ಪ್ರಕಟಿಸಲಾಗುವುದು. ಮತದಾರರ ಪಟ್ಟಿ ಪರಿಷ್ಕರಣೆ ನಿರಂತರವಾಗಿರಲಿದ್ದು, ಚುನಾವಣೆ ನಾಮಪತ್ರಗಳ ಸ್ವೀಕೃತಿಯ ಕೊನೆಯ ದಿನಾಂಕದವರೆಗೆ ಹೆಸರು ಸೇರ್ಪಡೆಗೆ ಅವಕಾಶ ಇರುತ್ತದೆ ಎಂದು ಅವರು ಸ್ಪಷ್ಟಪಡಿಸಿದರು.
ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಮಾತನಾಡಿ, ಕರಡು ಮತದಾರರ ಪಟ್ಟಿ ಪ್ರಕಟ ನಂತರ ಅರ್ಜಿ ನಮೂನೆ 6 (ಸೇರ್ಪಡೆ)ರಲ್ಲಿ 9,506 ಅರ್ಜಿಗಳು ಬಂದಿವೆ. ಈ ಪೈಕಿ 7,867 ಅರ್ಜಿಗಳನ್ನು ಅಂಗೀಕರಿಸಲಾಗಿದ್ದು, 545 ಅರ್ಜಿಗಳು ತಿರಸ್ಕøತಗೊಂಡಿವೆ. ಅರ್ಜಿ ನಮೂನೆ 7 (ಆಕ್ಷೇಪಣೆ)ರಲ್ಲಿ 3,177 ಅರ್ಜಿಗಳು ಬಂದಿವೆ. ಈ ಪೈಕಿ 2,911 ಅರ್ಜಿಗಳನ್ನು ಅಂಗೀಕರಿಸಿದ್ದು, 120 ಅರ್ಜಿಗಳು ತಿರಸ್ಕøತಗೊಂಡಿವೆ. ನಮೂನೆ 8 (ತಿದ್ದುಪಡಿ)ರಲ್ಲಿ 2,028 ಅರ್ಜಿಗಳು ಬಂದಿವೆ. ಈ ಪೈಕಿ 1,527 ಅರ್ಜಿಗಳನ್ನು ಅಂಗೀಕರಿಸಿದ್ದು, 196 ಅರ್ಜಿಗಳು ತಿರಸ್ಕøತಗೊಂಡಿವೆ. ನಮೂನೆ 8ಎ (ವರ್ಗಾವಣೆ) ರಲ್ಲಿ 847 ಅರ್ಜಿಗಳು ಬಂದಿವೆ. ಈ ಪೈಕಿ 626 ಅಂಗೀಕರಿಸಿದ್ದು, 21 ಅರ್ಜಿಗಳು ತಿರಸ್ಕøತಗೊಂಡಿವೆ ಎಂದು ಮಾಹಿತಿ ನೀಡಿದರು.
8,474 ಮತದಾರರು ಹೆಚ್ಚಳ: ಕರಡು ಮತದಾರರ ಪಟ್ಟಿಯಲ್ಲಿ 9,85,271 ಮತದಾರರಿದ್ದರು. ಅಂತಿಮ ಮತದಾರರ ಪಟ್ಟಿ ಪ್ರಕಟಣೆ ದಿನಾಂಕ ಫೆಬ್ರುವರಿ 7ರಂತೆ 9,93,745 ಮತದಾರರು ಪಟ್ಟಿಯಲ್ಲಿ ಇರಲಿದ್ದಾರೆ. ಮಿಂಚಿನ ನೋಂದಣಿ ಮತ್ತು ಹೆಚ್ಚಿನ ಜಾಗೃತಿಯಿಂದಾಗಿ ಡಿಸೆಂಬರ್ 16ರಿಂದ ಇಲ್ಲಿಯವರೆಗೆ 8,474 ಮತದಾರರು ಸೇರ್ಪಡೆಯಾಗಿದ್ದಾರೆ ಎಂದು ಅವರು ತಿಳಿಸಿದರು.ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ, ಸಹಾಯಕ ಆಯುಕ್ತರಾದ ಶಂಕರಗೌಡ ಎಸ್.ಸೋಮನಾಳ, ತಹಶೀಲ್ದಾರರಾದ ಚನ್ನಮಲ್ಲಪ್ಪ ಘಂಟಿ, ಸಂಗಮೇಶ ಜಿಡಗೆ, ಸುರೇಶ ಅಂಕಲಗಿ, ನಿಂಗಣ್ಣ ಎಸ್.ಬಿರಾದಾರ, ವಿನಯಕುಮಾರ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಮರಿಗೌಡ ಪಾಟೀಲ್ ಹುಲ್‍ಕಲ್, ಚುನಾವಣೆ ಶಾಖೆಯ ಶಿರಸ್ತೇದಾರ್ ಜಾಯ್ ವಿಲ್ಸನ್, ಖಲೀಲ್‍ಸಾಬ್, ಶಿಲ್ಪಾ ಪಾಟೀಲ್, ಭೀಮೇಶಿ, ಹರೀಶ್‍ಕುಮಾರ್ ಅವರು ಸಭೆಯಲ್ಲಿ ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...