ಮಂಗಳವಾರ, ಫೆಬ್ರವರಿ 4, 2020

ಜಂತುಹುಳ ನಾಶಕ ಮಾತ್ರೆಯ ಬಗ್ಗೆ ಜನರಲ್ಲಿ ಹೆಚ್ಚಿನ ಅರಿವು ಮೂಡಿಸಿ
ಫೆ.೧೦ರಂದು ರಾಷ್ಟಿಯ ಜಂತುಹುಳ ನಿವಾರಣಾ ದಿನಾಚರಣೆ
-ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್
ಯಾದಗಿರಿ, ಫೆಬ್ರುವರಿ ೦೪ (ಕರ್ನಾಟಕ ವಾರ್ತೆ): ರಾಷ್ಟಿಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಜಿಲ್ಲೆಯಾದ್ಯಂತ ಫೆಬ್ರುವರಿ ೧೦ರಂದು ಹಮ್ಮಿಕೊಂಡಿರುವ ರಾಷ್ಟಿಯ ಜಂತುಹುಳ ನಿವಾರಣಾ ದಿನಾಚರಣೆ ಕಾರ್ಯಕ್ರಮದ ಯಶಸ್ವಿಗಾಗಿ ಆರೋಗ್ಯ ಇಲಾಖೆಯ ಜೊತೆಗೆ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳು ಶ್ರಮಿಸಬೇಕು. ಜಂತುಹುಳ ನಾಶಕ ಅಲ್ಬೆಂಡ್‌ಜೋಲ್ ಮಾತ್ರೆ ಪ್ರಯೋಜನದ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ರಾಷ್ಟಿçಯ ಜಂತುಹುಳ ನಿವಾರಣಾ ದಿನದ ಅಂಗವಾಗಿ ನಡೆದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.ದಿನಾಚರಣೆಯಲ್ಲಿ ಜಿಲ್ಲೆಯ ೧ರಿಂದ ೧೯ ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಅಲ್ಬೆಂಡ್‌ಜೋಲ್ ಮಾತ್ರೆಗಳನ್ನು ವಿತರಿಸುವ ಗುರಿ ಹೊಂದಲಾಗಿದೆ. ಫೆ.೧೦ರಂದು ಸರ್ಕಾರಿ, ಖಾಸಗಿ ಶಾಲಾ-ಕಾಲೇಜುಗಳಲ್ಲಿ ಉಚಿತವಾಗಿ ಅಲ್ಬೆಂಡ್‌ಜೋಲ್ ಮಾತ್ರೆಗಳನ್ನು ನೀಡಬೇಕು. ಅಂಗನವಾಡಿ ಮತ್ತು ಶಾಲೆಯಿಂದ ಹೊರಗುಳಿದ ಮಕ್ಕಳಿಗೆ ಅಂಗನವಾಡಿ ಕೇಂದ್ರಗಳಲ್ಲಿ ವಿತರಿಸಬೇಕು. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಅಂಗನವಾಡಿ ಕಾರ್ಯಕರ್ತೆಯರು ಅಂಗನವಾಡಿಗೆ ಕರೆತರಬೇಕು. ಪ್ರಾಥಮಿಕ ಹಾಗೂ ಉಪ ಆರೋಗ್ಯ ಕೇಂದ್ರಗಳಲ್ಲಿ ಕೂಡ ಮಾತ್ರೆಗಳನ್ನು ವಿತರಿಸಿ. ಅಂದು ಮಾತ್ರೆ ಪಡೆಯದೆ ಬಾಕಿ ಉಳಿದ ಮಕ್ಕಳಿಗೆ ಫೆ.೧೭ರ ಮಾಪ್-ಆಪ್ ದಿನದಂದು ಕಡ್ಡಾಯವಾಗಿ ವಿತರಿಸುವ ಮೂಲಕ ಪ್ರತಿಶತ ಸಾಧನೆ ಮಾಡುವಂತೆ ಅವರು ನಿರ್ದೇಶಿಸಿದರು.ಅಲ್ಬೆಂಡ್‌ಜೋಲ್ ಮಾತ್ರೆ ಚೀಪುವುದರಿಂದ ಮಕ್ಕಳಲ್ಲಿ ರಕ್ತ ಹೀನತೆ ನಿಯಂತ್ರಣ ಮತ್ತು ಪೋಷಕಾಂಶ ಹೀರಿಕೆಯನ್ನು ಸುಧಾರಿಸುತ್ತದೆ. ಹಾಗಾಗಿ, ಯಾವುದೇ ಮಗು ಮಾತ್ರೆಯಿಂದ ವಂಚಿತವಾಗಬಾರದು. ಈ ನಿಟ್ಟಿನಲ್ಲಿ ಖಾಸಗಿ ಶಾಲೆ-ಕಾಲೇಜುಗಳ ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲರಿಗೆ ಡಿಡಿಪಿಐ ಹಾಗೂ ಡಿಡಿಪಿಯು ಅವರಿಂದ ಸುತ್ತೋಲೆ ಹೊರಡಿಸಬೇಕು. ತಾಲ್ಲೂಕು ಆರೋಗ್ಯ ಅಧಿಕಾರಿಗಳು, ತಾಲ್ಲೂಕು ಪಂಚಾಯಿತಿ ಇಒ ಮತ್ತು ಬಿಇಒ ಅವರು ಸಭೆ ನಡೆಸಿ, ಕಾರ್ಯಕ್ರಮ ಯಶಸ್ವಿಗೊಳಿಸಲು ಸಾಧ್ಯವಿರುವ ಎಲ್ಲಾ ರೀತಿಯ ಕ್ರಮ ಕೈಗೊಳ್ಳಬೇಕು. ಸ್ವಯಂಸೇವಕರಿAದ ನಿರ್ದಿಷ್ಟ ಶಾಲೆ ಅಥವಾ ಅಂಗನವಾಡಿಗಳಲ್ಲಿ ಜಾಗೃತಿ ಮೂಡಿಸಲು ತಿಳಿಸಬೇಕು ಎಂದು ಅವರು ಸೂಚಿಸಿದರು.
ಜಿಲ್ಲೆಯ ನಗರಸಭೆ ಹಾಗೂ ಪುರಸಭೆಗಳ ಕಸ ವಿಲೇವಾರಿ ವಾಹನಗಳಲ್ಲಿನ ಮೈಕ್ ಮೂಲಕ ದಿನಾಚರಣೆ ಬಗ್ಗೆ ವ್ಯಾಪಕ ಪ್ರಚಾರ ನಡೆಸಬೇಕು. ಅದರಂತೆ ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿ ಫೆ.೯ರಂದು ಬೆಳಿಗ್ಗೆ ಮತ್ತು ಸಂಜೆ ಡಂಗೂರ ಸಾರಬೇಕು. ದಿನಾಚರಣೆಯಂದು ಜನಪ್ರತಿನಿಧಿಗಳು, ಸಾರ್ವಜನಿಕರನ್ನು ಆಹ್ವಾನಿಸಿ, ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಅವರು ಸಲಹೆ ನೀಡಿದರು.ಕಳಪೆ ನೈರ್ಮಲ್ಯ ಮತ್ತು ಕೊಳಕು ಸ್ಥಳಗಳಲ್ಲಿ ಜಂತುಹುಳ ಸೋಂಕು ಉಂಟಾಗುತ್ತವೆ. ಜಂತುಹುಳು ಸೋಂಕಿತ ಮಣ್ಣಿನ ಸಂಪರ್ಕದಿAದ ಮಕ್ಕಳಿಗೆ ಹರಡುತ್ತವೆ. ಮಕ್ಕಳ ಕರುಳಿನಲ್ಲಿ ಹೆಚ್ಚು ಸಂಖ್ಯೆಯ ಜಂತುಹುಳ ಇದ್ದಲ್ಲಿ ಹೆಚ್ಚು ಪ್ರಮಾಣದ ರೋಗಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಜಂತುಹುಳ ನಾಶಕ್ಕಾಗಿ ೧-೨ ವರ್ಷ ಮಕ್ಕಳಿಗೆ ಅರ್ಧ ಮಾತ್ರೆ (೪೦೦ ಎಂ.ಜಿ), ೨-೧೯ ವರ್ಷದ ಮಕ್ಕಳಿಗೆ ೧ ಮಾತ್ರೆ (೪೦೦ ಎಂ.ಜಿ) ನೀಡಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ಎಸ್.ಪಾಟೀಲ್ ಅವರು ತಿಳಿಸಿದರು.ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ರೋಗ ವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿಗಳಾದ ಡಾ.ಸೂರ್ಯಪ್ರಕಾಶ ಎಂ.ಕ0ದಕೂರ, ಜಿಲ್ಲಾ ಕುಷ್ಠ ರೋಗ ನಿರ್ಮೂಲನಾ ಅಧಿಕಾರಿ ಡಾ.ಭಗವಂತ ಅನವಾರ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಲಕ್ಷಿö, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಪ್ರಭಾಕರ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿರಾದಾರ ಶಂಕರ, ರಾಷ್ಟಿಯ ಜಂತುಹುಳ ನಿವಾರಣಾ ಕಾರ್ಯಕ್ರಮದ ಪ್ರಾದೇಶಿಕ ಸಂಯೋಜಕ ಪ್ರಭು ಬೀಳಗಿ, ಜಿಲ್ಲಾ ಸಂಯೋಜಕ ಮೌನೇಶ ಪಾಟೀಲ್, ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ತಾಲ್ಲೂಕು ಆರೋಗ್ಯಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...