ಗುರುವಾರ, ಫೆಬ್ರವರಿ 13, 2020

ಆರೋಗ್ಯ ಕಾಪಾಡಿಕೊಳ್ಳಲು ಪೌಷ್ಟಿಕ ಆಹಾರ ಸೇವಿಸಿ
-ಡಾ.ಎಂ.ಎಸ್. ಪಾಟೀಲ್
ಯಾದಗಿರಿ, ಫೆಬ್ರುವರಿ ೧೩ (ಕರ್ನಾಟಕ ವಾರ್ತೆ): ಮನುಷ್ಯನಿಗೆ ಆರೋಗ್ಯ ಮುಖ್ಯ. ಆದ್ದರಿಂದ ಪ್ರತಿಯೊಬ್ಬರು ಪೌಷ್ಟಿಕ ಆಹಾರ ಸೇವಿಸಬೇಕು. ಮನೆ ಸುತ್ತಮುತ್ತಲಿನಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಎಸ್. ಪಾಟೀಲ್ ಅವರು ಸಲಹೆ ನೀಡಿದರು. ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಗುರುವಾರ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮ ಕುರಿತು ಪ್ರಮುಖ ಪ್ರೇರಣಾದಾರರಿಗೆ ಹಮ್ಮಿಕೊಂಡಿದ್ದ ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರು ಮಾತನಾಡಿದರು. ಈಗ ಪರೀಕ್ಷೆ ಸಮಯ ಇರುವುದರಿಂದ ವಿದ್ಯಾರ್ಥಿಗಳು ತಪ್ಪದೇ ಓದಬೇಕು. ಹದಿಹರಿಯದವರಲ್ಲಿ ಆಗುವಂತಹ ಸಮಸ್ಯೆಗಳು, ಮದುವೆಯಾಗಲು ಹೆಣ್ಣು ಮಕ್ಕಳಿಗೆ ೧೮ ವರ್ಷ, ಗಂಡು ಮಕ್ಕಳಿಗೆ ೨೧ ವರ್ಷ ವಯಸ್ಸು ಏಕೆ ಇರುಬೇಕು ಎಂದು ತಿಳಿಸಿಕೊಟ್ಟರು. ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ.ಭಗವಂತ ಅನವಾರ ಅವರು ಮಾತನಾಡಿ, ಮಾನಸಿಕ ಒತ್ತಡಗಳಿಗೆ ಒಳಗಾಗಬಾರದು. ಖಿನ್ನತೆಯ ಕುರಿತು ಆಪ್ತ ಸಮಾಲೋಚನೆ ಮೂಲಕ ತಿಳಿದುಕೊಳ್ಳಬೇಕು. ಆಯುಷ್ಮಾನ್ ಭಾರತ- ಆರೋಗ್ಯ ಕರ್ನಾಟಕ ಕಾರ್ಯಕ್ರಮದಡಿ ನೋಂದಾಯಿಸಿ ೫ ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ಪಡೆಯಲು ತಿಳಿಸಿದರು. ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಲಕ್ಷಿö್ಮÃಕಾಂತ ಅವರು ಮಾತನಾಡಿ, ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ, ೧೦ ಮಾರಕ ರೋಗಗಳ ತಡೆಗೆ ಲಸಿಕೆ ಮಹತ್ವದ್ದಾಗಿದೆ. ೦ ರಿಂದ ೫ ವರ್ಷದ ಎಲ್ಲಾ ಮಕ್ಕಳಿಗೆ ಚುಚ್ಚುಮದ್ದು ಹಾಕಿಸಬೇಕು. ಎಲ್ಲರಿಗೂ ಆರೋಗ್ಯ, ಎಲ್ಲೆಡೆಗೂ ಆರೋಗ್ಯ ಕುರಿತು ತಮ್ಮ ಕುಟುಂಬದ ಬಗ್ಗೆ ಕಾಳಜಿ ವಹಿಸುವಂತೆ ಅವರು ಹೇಳಿದರು. ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿ ಡಾ.ಗುರುರಾಜ ಹಿರೇಗೌಡ ಅವರು ಮಾತನಾಡಿದರು. ಹಿರಿಯ ಆರೋಗ್ಯ ಸಹಾಯಕ ಪರಮರೆಡ್ಡಿ ಅವರು ಮಲೇರಿಯಾ ಮತ್ತು ಪೈಲೇರಿಯಾ ಕಾರ್ಯಕ್ರಮ ಕುರಿತು ತಿಳಿಸಿದರು. ತುಳಸಿರಾಮ, ಸುದರ್ಶನ, ಸತ್ಯನಾರಾಯಣ, ಗಂಗಾಧರ, ನೀಲಮ್ಮ, ವಿದ್ಯಾ, ಭಾಗಪ್ಪ, ನಾಗಣ್ಣ, ಸ್ವಾಮಿ, ರೇಖಾ ಹಾಗೂ ಇತರೆ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಧಾರ್ಮಿಕ ಮುಖಂಡರು, ಎನ್.ಸಿ.ಸಿ., ಎನ್.ಎಸ್.ಎಸ್., ಸ್ಕೌಟ್ಸ್ ಹಾಗೂ ಗೈಡ್ಸ್ ವಿದ್ಯಾರ್ಥಿಗಳು, ಸ್ತಿçÃಶಕ್ತಿ ಸಂಘದ ಅಧ್ಯಕ್ಷರು ಮತ್ತು ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿರಾದಾರ ಶಂಕರ ಅವರು ನಿರೂಪಿಸಿದರು. ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ನಂದಣ್ಣ ಪಾಟೀಲ್ ಅವರು ವಂದಿಸಿದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...