ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಸಿದ್ಧತಾ ಸಭೆ
ಫೆ.೧೯ರಂದು ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ
ಯಾದಗಿರಿ, ಫೆಬ್ರುವರಿ ೧೦ (ಕರ್ನಾಟಕ ವಾರ್ತೆ): ಜಿಲ್ಲಾಡಳಿತದ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಫೆಬ್ರುವರಿ ೧೯ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ಸವ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು. ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿ ಹಾಗೂ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲಾ-ಕಾಲೇಜುಗಳಲ್ಲಿಯೂ ಸಹ ಶ್ರದ್ಧಾ, ಭಕ್ತಿಯೊಂದಿಗೆ ಛತ್ರಪತಿ ಶಿವಾಜಿ ಮಹಾರಾಜ ರವರ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಬೇಕು. ತಾಲ್ಲೂಕು ಮಟ್ಟದಲ್ಲಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಬೇಕು ಎಂದು ಅವರು ಸೂಚಿಸಿದರು. ಜಯಂತ್ಯೋತ್ಸವ ಅಂಗವಾಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಅಂದು ಬೆಳಿಗ್ಗೆ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಗುವುದು. ಜಿಲ್ಲಾಡಳಿತ ಕಾರ್ಯಕ್ರಮದ ಪೂರ್ವದಲ್ಲಿ ನಗರದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರದ ಮೆರವಣಿಗೆ ನಡೆಸಿದರೆ, ಸಮಾಜದ ಸಂಘಟನೆಗೆ ಒಂದು ದಿನ ಮುಂಚಿತವಾಗಿ ಟ್ರಾö್ಯಕ್ಟರ್ ನೀಡಬೇಕು. ಮೆರವಣಿಗೆಯಲ್ಲಿ ಡೊಳ್ಳು ಕುಣಿತ ಅಥವಾ ಇನ್ನಿತರೆ ಒಂದು ನುರಿತ ಕಲಾವಿದರ ತಂಡವನ್ನು ಏರ್ಪಾಡು ಮಾಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ ಅವರಿಗೆ ತಿಳಿಸಿದರು. ಜಿಲ್ಲಾಡಳಿತ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಮಾಜದ ಮುಖಂಡರು, ವಿದ್ಯಾರ್ಥಿಗಳು, ಸಭಿಕರಿಗೆ ಅಲ್ಪ ಉಪಹಾರ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಲು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಮತ್ತು ಜಿಲ್ಲಾ ಅಂಕಿತ ಅಧಿಕಾರಿಗಳಿಗೆ ವಹಿಸಲಾಯಿತು. ಜಯಂತಿ ಮತ್ತು ಮೆರವಣಿಗೆಯಲ್ಲಿ ಶಾಂತಿ, ಸುವ್ಯವಸ್ಥೆಯನ್ನು ಕಾಪಾಡಲು ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡುವಂತೆ ಜಿಲ್ಲಾ ಪೊಲೀಸ್ ಇಲಾಖೆಗೆ ತಿಳಿಸಲಾಯಿತು. ಜಿಲ್ಲಾ ಬಾಲಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕರಾದ ರಘುವೀರ ಸಿಂಗ್ ಠಾಕೂರ್ ಅವರು ಸಭೆಯ ನಡಾವಳಿ ಓದಿದರು. ಸಿಪಿಐ ಎಸ್.ಎಂ.ನ್ಯಾಮಣ್ಣವರ್, ಅಬಕಾರಿ ನಿರೀಕ್ಷಕರಾದ ಶ್ರೀರಾಮ ರಾಠೋಡ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಕೆ.ವಿಶ್ವನಾಥ, ಆಹಾರ ಇಲಾಖೆಯ ಶಾಂತಾಬಾಯಿ ಪಾಲಕಿ, ಕಾರ್ಮಿಕ ಇಲಾಖೆಯ ಲಕ್ಷö್ಮಣ ಪೂಜಾರ್ ಅವರು ಉಪಸ್ಥಿತರಿದ್ದರು. ನಗರಸಭೆ ಮಾಜಿ ಸದಸ್ಯರಾದ ನಾರಾಯಣರಾವ್ ಚವ್ಹಾಣ, ಸಮಾಜದ ಮುಖಂಡರಾದ ಪರಶುರಾಮ ಶೇಗುರಕರ್, ಜಿತೇಂದ್ರ ಬಿ.ನವಗ್ರೆ, ವೆಂಕಟೇಶ ಭೀಮನಹಳ್ಳಿ ಅವರು ಸಭೆಯಲ್ಲಿ ಪಾಲ್ಗೊಂಡಿದ್ದರು
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ