ಗುರುವಾರ, ಫೆಬ್ರವರಿ 13, 2020

ಇಂದು ಪೂರ್ವಸಿದ್ಧತಾ ಸಭೆ
ಯಾದಗಿರಿ, ಫೆಬ್ರುವರಿ ೧೩ (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕಾಯಕ ಶರಣರ ಜಯಂತಿಯನ್ನು ಫೆಬ್ರುವರಿ ೨೧ರಂದು ವಿಜೃಂಭಣೆಯಿAದ ಆಚರಿಸಲು ಪೂರ್ವಸಿದ್ಧತಾ ಸಭೆಯನ್ನು ಫೆಬ್ರುವರಿ ೧೪ರಂದು ಮಧ್ಯಾಹ್ನ ೩ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದೆ.
ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಸಂಘ-ಸAಸ್ಥೆಗಳ ಪ್ರತಿನಿಧಿಗಳು ಹಾಜರಾಗುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಫೆ.೧೪ರಂದು ಪೂರ್ವಸಿದ್ಧತಾ ಸಭೆ
ಯಾದಗಿರಿ, ಫೆಬ್ರುವರಿ ೧೩ (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸಂತ ಕವಿ ಸರ್ವಜ್ಞ ಜಯಂತಿಯನ್ನು ಫೆಬ್ರುವರಿ ೨೦ರಂದು ವಿಜೃಂಭಣೆಯಿAದ ಆಚರಿಸಲು ಪೂರ್ವಸಿದ್ಧತಾ ಸಭೆಯನ್ನು ಫೆಬ್ರುವರಿ ೧೪ರಂದು ಸಂಜೆ ೪ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದೆ.
ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಸಂಘ-ಸAಸ್ಥೆಗಳ ಪ್ರತಿನಿಧಿಗಳು ಹಾಜರಾಗುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಫೆ.೧೭ರಂದು ಜಿ.ಪಂ ಸಾಮಾನ್ಯ ಸಭೆ
ಯಾದಗಿರಿ, ಫೆಬ್ರುವರಿ ೧೩ (ಕರ್ನಾಟಕ ವಾರ್ತೆ): ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಜಶೇಖರಗೌಡ ಪಾಟೀಲ್ ವಜ್ಜಲ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯನ್ನು ಫೆಬ್ರುವರಿ ೧೭ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫೆ.೧೮ರಂದು ದೇಹದಾರ್ಢ್ಯತೆ ಪರೀಕ್ಷೆ
ಯಾದಗಿರಿ, ಫೆಬ್ರುವರಿ ೧೩ (ಕರ್ನಾಟಕ ವಾರ್ತೆ): ಕರ್ನಾಟಕ ಲೋಕಸೇವಾ ಆಯೋಗದ ನಿರ್ದೇಶನದಂತೆ ಅಬಕಾರಿ ಉಪ ನಿರೀಕ್ಷಕರ ಹುದ್ದೆ ನೇರ ನೇಮಕಾತಿಗಾಗಿ ಅರ್ಹ ೩ ಪುರುಷ ಮತ್ತು ೧ ಮಹಿಳಾ ಅಭ್ಯರ್ಥಿಗಳ ದೇಹದಾರ್ಢ್ಯತೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಯನ್ನು ಫೆಬ್ರುವರಿ ೧೮ರಂದು ಬೆಳಿಗ್ಗೆ ೮ ಗಂಟೆಗೆ ಯಾದಗಿರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಸಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳು ದೈಹಿಕ ಪರೀಕ್ಷೆಗೆ ತಪ್ಪದೆ ಹಾಜರಾಗಬೇಕು ಎಂದು ಅಬಕಾರಿ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫೆಬ್ರುವರಿ ತಿಂಗಳ ಪಡಿತರ ಧಾನ್ಯ ಬಿಡುಗಡೆ
ಯಾದಗಿರಿ, ಫೆಬ್ರುವರಿ ೧೩ (ಕರ್ನಾಟಕ ವಾರ್ತೆ): ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಡಿ ಜಿಲ್ಲೆಯ ನ್ಯಾಯಬೆಲೆ ಅಂಗಡಿಗಳಿಗೆ ಫೆಬ್ರುವರಿ ತಿಂಗಳ ಪಡಿತರ ಧಾನ್ಯ ಬಿಡುಗಡೆ ಮಾಡಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂತ್ಯೋದಯ ಅನ್ನ ಯೋಜನೆಯ ೨೯,೨೨೦ ಪಡಿತರ ಚೀಟಿಗಳಿಗೆ ತಲಾ ೩೫ ಕೆ.ಜಿ ಅಕ್ಕಿ, ೨,೨೮,೧೪೦ ಬಿಪಿಎಲ್ ಪಡಿತರ ಚೀಟಿಗಳ ೮,೧೪,೯೭೫ ಸದಸ್ಯರಿಗೆ ತಲಾ ೭ ಕೆ.ಜಿ ಅಕ್ಕಿಯನ್ನು ಅನ್ನಭಾಗ್ಯ ಯೋಜನೆಯಡಿ ಉಚಿತವಾಗಿ ವಿತರಿಸಲು ಹಂಚಿಕೆ ನೀಡಲಾಗಿದೆ. ಪಡಿತರ ಚೀಟಿದಾರರು ತಮ್ಮ ಹಕ್ಕಿನಲ್ಲಿರುವ ಅಕ್ಕಿಯನ್ನು ಆಯಾ ನ್ಯಾಯಬೆಲೆ ಅಂಗಡಿಗಳಲ್ಲಿ ತಪ್ಪದೇ ಪಡೆದುಕೊಳ್ಳಬೇಕು ಎಂದು ಅವರು ಸೂಚಿಸಿದ್ದಾರೆ.
ಜಿಲ್ಲೆಯ ೩೯೯ ನ್ಯಾಯಬೆಲೆ ಅಂಗಡಿಗಳಲ್ಲಿ ಬಿಪಿಎಲ್ ಪಡಿತರ ಚೀಟಿದಾರರ ಕುಟುಂಬದ ಒಬ್ಬ ಸದಸ್ಯರ ಬೆರಳಚ್ಚನ್ನು/ಬಯೋಮೆಟ್ರಿಕ್ ಪಡೆದು ಪಡಿತರ ವಿತರಿಸಲು (Point of Sale – POS Shop Moduleವ್ಯವಸ್ಥೆ ಮಾಡಲಾಗಿದೆ. ಅನ್ನಭಾಗ್ಯ ಯೋಜನೆಯನ್ವಯ ಪಡಿತರ ಪಡೆದುಕೊಳ್ಳಲು ಯಾವುದೇ ದೂರು ಇದ್ದಲ್ಲಿ ಆಯಾ ತಾಲ್ಲೂಕಿನ ತಹಶೀಲ್ದಾರ್, ಜಿಲ್ಲೆಯ ಉಪ ನಿರ್ದೇಶಕರ ಕಚೇರಿ ಅಥವಾ ಸಹಾಯವಾಣಿ ೧೯೬೭ ಸಂಖ್ಯೆಗೆ ದೂರನ್ನು ದಾಖಲಿಸಬಹುದು. ಬಿಪಿಎಲ್ ಮತ್ತು ಅಂತ್ಯೋದಯ ಪಡಿತರ ಚೀಟಿದಾರರು ಪಡಿತರ ಪಡೆಯುವ ವೇಳೆಯಲ್ಲಿ ನ್ಯಾಯಬೆಲೆ ಅಂಗಡಿಯಲ್ಲಿ ತಮ್ಮ ಮೊಬೈಲ್ ಸಂಖ್ಯೆಯನ್ನು ಆಧಾರ್ ಸಂಖ್ಯೆಯೊAದಿಗೆ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

ಕೆ-ಸೆಟ್ ಪರೀಕ್ಷೆಗೆ ತರಬೇತಿ ಶಿಬಿರ
ಯಾದಗಿರಿ, ಫೆಬ್ರುವರಿ ೧೩ (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ ದಿಂದ ಮೈಸೂರು ವಿಶ್ವವಿದ್ಯಾನಿಲಯದ ಮೂಲಕ ಏಪ್ರಿಲ್ ೧೨ರಂದು ನಡೆಸಲಿರುವ ರಾಜ್ಯ ಮಟ್ಟದ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಗೆ ೪೫ ದಿನಗಳ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ ಅವರು ತಿಳಿಸಿದ್ದಾರೆ. 
ಆಸಕ್ತರು ಮೈಸೂರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ತರಬೇತಿ ಕೇಂದ್ರದ ಕಚೇರಿಯಲ್ಲಿ ಫೆಬ್ರುವರಿ ೧೯ರೊಗಾಗಿ ಪ್ರತಿದಿನ ಬೆಳಿಗ್ಗೆ ೧೦ರಿಂದ ಸಂಜೆ ೫ ಗಂಟೆಯೊಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ:೦೮೨೧-೨೫೧೫೯೪೪ ಸಂಪರ್ಕಿಸಲು ಕೋರಲಾಗಿದೆ.

ಕೆಎಎಸ್, ಎಫ್‌ಡಿಎ ಪರೀಕ್ಷೆಗಳಿಗೆ ತರಬೇತಿ
ಯಾದಗಿರಿ, ಫೆಬ್ರುವರಿ ೧೩ (ಕರ್ನಾಟಕ ವಾರ್ತೆ): ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ರಾಜ್ಯ ಸರ್ಕಾರವು ಬರುವ ಮೇ ಮಾಹೆಯಲ್ಲಿ ನಡೆಸಲಿರುವ ಕೆಎಎಸ್ ಮತ್ತು ಎಫ್.ಡಿ.ಎ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ೪೫ ದಿನಗಳ ಪೂರ್ವಭಾವಿ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ.ಲಿಂಗರಾಜ ಗಾಂಧಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  
ಆಸಕ್ತರು ಮೈಸೂರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ತರಬೇತಿ ಕೇಂದ್ರದ ಕಚೇರಿಯಲ್ಲಿ ಫೆಬ್ರುವರಿ ೨೦ರೆೆÆಳಗಾಗಿ ಪ್ರತಿದಿನ ಬೆಳಿಗ್ಗೆ ೧೦ರಿಂದ ಸಂಜೆ ೫ ಗಂಟೆಯೊಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕು.  ಹೆಚ್ಚಿನ ವಿವರಗಳಿಗಾಗಿ ದೂ:೦೮೨೧-೨೫೧೫೯೪೪ ಸಂಪರ್ಕಿಸಲು ಕೋರಲಾಗಿದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...