ಮಂಗಳವಾರ, ಫೆಬ್ರವರಿ 4, 2020

ಜಿಲ್ಲಾ ಮತದಾರರ ಪಟ್ಟಿ ವೀಕ್ಷಕರ ಪ್ರವಾಸ
ಯಾದಗಿರಿ, ಫೆಬ್ರುವರಿ ೦೪ (ಕರ್ನಾಟಕ ವಾರ್ತೆ): ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಜಿಲ್ಲಾ ಮತದಾರರ ಪಟ್ಟಿ ವೀಕ್ಷಕರಾದ ಡಾ. ಜೆ.ರವಿಶಂಕರ್ ಅವರು ಫೆಬ್ರುವರಿ ೫ರಂದುಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಫೆ.೫ರ0ದು ಮಧ್ಯಾಹ್ನ ೨.೩೦ ಗಂಟೆಗೆ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಅಂಗವಾಗಿ ಅಂತಿಮ ಮತದಾರರ ಪಟ್ಟಿಯ ಪ್ರಕಟಣೆ ಕುರಿತು ಸಂಬ0ಧಪಟ್ಟ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸುವರು. ರಾತ್ರಿ ಯಾದಗಿರಿಯಲ್ಲಿ ವಾಸ್ತವ್ಯ ಮಾಡುವರು. ಫೆ.೬ರಂದು ಬೆಳಿಗ್ಗೆ ೯ ಗಂಟೆಗೆ ಕಲಬುರಗಿಗೆ ತೆರಳಿ ಅಲ್ಲಿಂದ ವಿಮಾನದಲ್ಲಿ ಬೆಂಗಳೂರಿಗೆ ಪ್ರಯಾಣ ಬೆಳೆಸುವರು.

ಪ್ರಾಣಿ ಬಲಿ, ಮಾಂಸ, ಮದ್ಯ ಮಾರಾಟ ನಿಷೇಧ
ಯಾದಗಿರಿ, ಫೆಬ್ರುವರಿ ೦೪ (ಕರ್ನಾಟಕ ವಾರ್ತೆ): ಶಹಾಪುರ ತಾಲ್ಲೂಕಿನ ಮಹಲ್‌ರೋಜಾ (ಸಗರ) ಗ್ರಾಮದಲ್ಲಿ ಫೆಬ್ರುವರಿ ೩ರಿಂದ ಫೆ.೫ರವರೆಗೆ ನಡೆಯಲಿರುವ ಯಲ್ಲಮ್ಮ ದೇವಿಯ ಜಾತ್ರೆಯಲ್ಲಿ ದೇವತೆಯ ಹೆಸರಲ್ಲಿ ಪ್ರಾಣಿ ಬಲಿ ಪದ್ಧತಿ, ಮಾಂಸ ಮಾರಾಟ, ಮದ್ಯ ಮಾರಾಟ ಮತ್ತು ಮದ್ಯಪಾನವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಆದೇಶಿಸಿದ್ದಾರೆ.
ಕರ್ನಾಟಕ ಪ್ರಾಣಿ ಬಲಿ ನಿಷೇಧ ಕಾಯ್ದೆ-೧೯೫೯ ಮತ್ತು ಕರ್ನಾಟಕ ಪ್ರಾಣಿ ಬಲಿ ನಿಷೇಧ ನಿಯಮಗಳು-೧೯೬೩ರ ನಿಯಮದ ಪ್ರಕಾರ ಹಾಗೂ ಕರ್ನಾಟಕ ಅಬಕಾರಿ ಕಾಯ್ದೆ ೧೯೬೫ರ ಕಲಂ ೨೧ರಲ್ಲಿ ಅವಕಾಶ ಕಲ್ಪಿಸಿರುವಂತೆ ಜಾತ್ರೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದ0ತೆ ನೋಡಿಕೊಳ್ಳಲು ಪ್ರಾಣಿ ಬಲಿ ಜೊತೆಗೆ ಮದ್ಯಮಾರಾಟ ಹಾಗೂ ಮದ್ಯ ಸೇವನೆಯನ್ನು ನಿಷೇಧಿಸಲಾಗಿದೆ. ಮಹಲ್‌ರೋಜಾ (ಸಗರ) ಗ್ರಾಮದ ದೇವಸ್ಥಾನದಿಂದ ೧ ಕಿ.ಮೀ. ವ್ಯಾಪ್ತಿಯಲ್ಲಿ ಎಲ್ಲಾ ವೈನ್‌ಶಾಪ್‌ಗಳು, ಬಾರ್‌ಗಳು, ಸಗಟು ಮತ್ತು ಚಿಲ್ಲರೆ ಮದ್ಯ ಮಾರಾಟ ಮಾಡುವುದನ್ನು ಹಾಗೂ ಗ್ರಾಮದ ೧ ಕಿ.ಮೀ. ವ್ಯಾಪ್ತಿಯಲ್ಲಿ ದೇವತೆಯ ಹೆಸರಲ್ಲಿ ಪ್ರಾಣಿ ಬಲಿ ಕೊಡುವ ಪದ್ಧತಿಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಪ್ರಾಣಿ ಬಲಿ ನಿಷೇಧಿಸುವ ಸಂಬ0ಧವಾಗಿ ಗ್ರಾಮದ ಸುತ್ತಲೂ ಚೆಕ್‌ಪೋಸ್ಟ್ಗಳನ್ನು ನಿರ್ಮಿಸಿ ಯಾರೂ ಪ್ರಾಣಿಗಳನ್ನು ಗ್ರಾಮದ ಒಳಗಡೆ ತೆಗೆದುಕೊಂಡು ಬರದಂತೆ ತಡೆಹಿಡಿಯಬೇಕು. ಕಾಯ್ದೆಗಳು ಉಲ್ಲಂಘನೆ ಆಗದಂತೆ ಕ್ರಮ ವಹಿಸಲು ಹಾಗೂ ಗ್ರಾಮದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಸಹಾಯಕ ಆಯುಕ್ತರು, ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆಗಳ ಇಲಾಖೆಯ ಉಪ ನಿರ್ದೇಶಕರು, ಶಹಾಪುರ ತಹಶೀಲ್ದಾರರು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶಿಸಿದ್ದಾರೆ.

ಫೆ.೭ಕ್ಕೆ ಪೂರ್ವಸಿದ್ಧತಾ ಸಭೆ
ಯಾದಗಿರಿ, ಫೆಬ್ರುವರಿ ೦೪ (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸಂತ ಶ್ರೀ ಸೇವಾಲಾಲ ಜಯಂತಿಯನ್ನು ಫೆಬ್ರುವರಿ ೧೫ರಂದು ವಿಜೃಂಭಣೆಯಿ0ದ ಆಚರಿಸಲು ಪೂರ್ವಸಿದ್ಧತಾ ಸಭೆಯನ್ನು ಫೆಬ್ರುವರಿ ೭ರಂದು  ಮಧ್ಯಾಹ್ನ ೩ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದೆ.
ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಸಂಘ-ಸAಸ್ಥೆಗಳ ಪ್ರತಿನಿಧಿಗಳು ಹಾಜರಾಗುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಫೆ.೭ರಂದು ಪೂರ್ವಸಿದ್ಧತಾ ಸಭೆ
ಯಾದಗಿರಿ, ಫೆಬ್ರುವರಿ ೦೪ (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಛತ್ರಪತಿ ಶಿವಾಜಿ ಜಯಂತಿಯನ್ನು ಫೆಬ್ರುವರಿ ೧೯ರಂದು ವಿಜೃಂಭಣೆಯಿ0ದ ಆಚರಿಸಲು ಪೂರ್ವಸಿದ್ಧತಾ ಸಭೆಯನ್ನು ಫೆಬ್ರುವರಿ ೭ರಂದು ಸಂಜೆ ೪ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದೆ.
ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಸಂಘ-ಸ0ಸ್ಥೆಗಳ ಪ್ರತಿನಿಧಿಗಳು ಹಾಜರಾಗುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಫೆ.೧೧ರಂದು ಜಿ.ಪಂ ಕೆಡಿಪಿ ಸಭೆ
ಯಾದಗಿರಿ, ಫೆಬ್ರುವರಿ ೦೪ (ಕರ್ನಾಟಕ ವಾರ್ತೆ): ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಜಶೇಖರಗೌಡ ಪಾಟೀಲ್ ವಜ್ಜಲ್ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ (ಕೆಡಿಪಿ)ಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ಫೆಬ್ರುವರಿ ೧೧ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...