ರಾಷ್ಟಿçÃಯ ಜಂತುಹುಳು ನಿವಾರಣಾ ದಿನಾಚರಣೆ
ಅಲ್ಬೆಂಡ್‌ಜೋಲ್ ಮಾತ್ರೆಯಿಂದ ರಕ್ತಹೀನತೆ ನಿಯಂತ್ರಣ
-ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್
ಯಾದಗಿರಿ, ಫೆಬ್ರುವರಿ ೧೦ (ಕರ್ನಾಟಕ ವಾರ್ತೆ): ಜಂತುಹುಳು ಮಕ್ಕಳಲ್ಲಿ ರಕ್ತಹೀನತೆ ಮತ್ತು ಬೆಳವಣಿಗೆಯನ್ನು ಕುಂಠಿತಗೊಳಿಸುತ್ತದೆ. ಅಲ್ಬೆಂಡ್‌ಜೋಲ್ ಮಾತ್ರೆ ಚೀಪುವುದರಿಂದ ಮಕ್ಕಳಲ್ಲಿ ರಕ್ತ ಹೀನತೆ ನಿಯಂತ್ರಣ ಮತ್ತು ಪೋಷಕಾಂಶ ಹೀರಿಕೆಯನ್ನು ಸುಧಾರಿಸುತ್ತದೆ. ಆದ್ದರಿಂದ ಪ್ರತಿಯೊಬ್ಬ ಪೋಷಕರು ತಮ್ಮ ೧ರಿಂದ ೧೯ ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಜಂತುಹುಳು ನಾಶಕ ಅಲ್ಬೆಂಡ್‌ಜೋಲ್ ಮಾತ್ರೆಯನ್ನು ನೀಡಬೇಕು ಎಂದು ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಮನವಿ ಮಾಡಿದರು. ನಗರದ ಸ್ಟೇಷನ್ ಬಜಾರ್ ಸರಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ರಾಷ್ಟಿçÃಯ ಜಂತುಹುಳು ನಿವಾರಣಾ ದಿನದ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಅಲ್ಬೆಂಡ್‌ಜೋಲ್ ಮಾತ್ರೆ ನೀಡುವ ಮೂಲಕ ಚಾಲನೆ ನೀಡಿ, ಅವರು ಮಾತನಾಡಿದರು.
ದಿನಾಚರಣೆಯಲ್ಲಿ ಜಿಲ್ಲೆಯ ೩,೭೯,೬೮೨ ಮಕ್ಕಳಿಗೆ ಅಲ್ಬೆಂಡ್‌ಜೋಲ್ ಮಾತ್ರೆಗಳನ್ನು ವಿತರಿಸುವ ಗುರಿ ಹೊಂದಲಾಗಿದೆ. ಸರ್ಕಾರಿ, ಖಾಸಗಿ ಶಾಲಾ-ಕಾಲೇಜುಗಳಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಉಚಿತವಾಗಿ ಅಲ್ಬೆಂಡ್‌ಜೋಲ್ ಮಾತ್ರೆಗಳನ್ನು ನೀಡಲಾಗುತ್ತದೆ. ಅಂಗನವಾಡಿ ಮತ್ತು ಶಾಲೆಯಿಂದ ಹೊರಗುಳಿದ ಮಕ್ಕಳಿಗೆ ಅಂಗನವಾಡಿ ಕೇಂದ್ರಗಳಲ್ಲಿ ಮಾತ್ರೆ ವಿತರಿಸಲಾಗುತ್ತಿದೆ. ಮಾತ್ರೆ ಪಡೆಯದೆ ಬಾಕಿ ಉಳಿದ ಮಕ್ಕಳಿಗೆ ಫೆ.೧೭ರ ಮಾಪ್-ಆಪ್ ದಿನದಂದು ಮಾತ್ರೆಗಳನ್ನು ವಿತರಿಸಲಾಗುವುದು ಎಂದು ಅವರು ತಿಳಿಸಿದರು.
ಜಂತುಹುಳು ನಾಶಕ ಮಾತ್ರೆಯು ಸುರಕ್ಷಿತ ಮತ್ತು ಪರಿಣಾಮಕಾರಿಯಾಗಿದೆ. ವಿಶ್ವ ಆರೋಗ್ಯ ಸಂಸ್ಥೆ ಮತ್ತು ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯಗಳು ರಾಷ್ಟಿçÃಯ ಜಂತುಹುಳು ನಿವಾರಣಾ ದಿನದಂದು ಈ ಮಾತ್ರೆ ತೆಗೆದುಕೊಳ್ಳಲು ಶಿಫಾರಸು ಮಾಡಿವೆ. ೧-೨ ವರ್ಷ ಮಕ್ಕಳಿಗೆ ೪೦೦ ಎಂ.ಜಿ.ಯ ಅರ್ಧ ಮಾತ್ರೆ, ೨-೧೯ ವರ್ಷದ ಮಕ್ಕಳಿಗೆ ೪೦೦ ಎಂ.ಜಿ.ಯ ೧ ಮಾತ್ರೆ ನೀಡಿ ಚೀಪಲು ತಿಳಿಸಬೇಕು. ನುಂಗಬಾರದು ಎಂದು ಅವರು ಸಲಹೆ ನೀಡಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ಅವರು ಮಾತನಾಡಿ, ಕಳಪೆ ನೈರ್ಮಲ್ಯ ಮತ್ತು ಕೊಳಕು ಸ್ಥಳಗಳಲ್ಲಿ ಜಂತುಹುಳ ಸೋಂಕು ಉಂಟಾಗುತ್ತವೆ. ಸೋಂಕಿತ ಮಣ್ಣಿನ ಸಂಪರ್ಕದಿAದ ಮಕ್ಕಳಿಗೆ ಜಂತುಹುಳು ಹರಡುತ್ತವೆ. ಮಕ್ಕಳ ಕರುಳಿನಲ್ಲಿ ಹೆಚ್ಚು ಸಂಖ್ಯೆಯ ಜಂತುಹುಳ ಇದ್ದಲ್ಲಿ ಹೆಚ್ಚು ಪ್ರಮಾಣದ ರೋಗಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಇದರಿಂದ ಮಕ್ಕಳು ರಕ್ತ ಹೀನತೆಯಿಂದ ಮಾನಸಿಕವಾಗಿ ಸೊರಗುತ್ತಾರೆ. ೧ರಿಂದ ೧೯ ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಜಂತುಹುಳು ನಾಶಕ ಅಲ್ಬೆಂಡ್‌ಜೋಲ್ ಮಾತ್ರೆಗಳನ್ನು ನೀಡುವ ಮೂಲಕ ಮಕ್ಕಳಲ್ಲಿನ ಅಪೌಷ್ಟಿಕತೆಯನ್ನು ತಡೆಗಟ್ಟಬೇಕು ಎಂದು ತಿಳಿಸಿದರು. ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶಿವಲಿಂಗಪ್ಪ ಪುಟಗಿ ಅವರು ಮಾತನಾಡಿ, ನಮ್ಮ ಸುತ್ತ ಮುತ್ತಲಿನ ಸ್ವಚ್ಛತೆಯ ಕೊರತೆಯಿಂದ ಕೊಕ್ಕೆ ಹುಳುಗಳು ಮಕ್ಕಳ ದೇಹವನ್ನು ಸೇರಿ ಅವರ ಬೆಳವಣಿಗೆತನ್ನು ಕುಂಠಿತಗೊಳಿಸುತ್ತವೆ. ಮಕ್ಕಳಿಗೆ ಅಲ್ಬೆಂಡ್‌ಜೋಲ್ ಮಾತ್ರೆ ನೀಡುವುದರಿಂದ ಏಕಾಗ್ರತೆ, ಕಲಿಕಾ ಸಾಮರ್ಥ್ಯ ಹೆಚ್ಚುತ್ತದೆ ಎಂದು ಹೇಳಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಲ್ಲಣ್ಣಗೌಡ ಎಸ್.ಪಾಟೀಲ್, ಜಿಲ್ಲಾ ಕುಷ್ಠ ರೋಗ ನಿರ್ಮೂಲನಾ ಅಧಿಕಾರಿ ಡಾ.ಭಗವಂತ ಅನವಾರ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಲಕ್ಷಿö್ಮÃಕಾಂತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಪ್ರಭಾಕರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶ್ರೀನಿವಾಸ ರೆಡ್ಡಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಹಣಮಂತರಡ್ಡಿ ಅವರು ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಮಹೇಶ್ವರಿ ಮತ್ತು ಸುಪ್ರಿಯಾ ಅವರು ಪ್ರಾರ್ಥಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿರಾದಾರ ಶಂಕರ ಅವರು ಕಾರ್ಯಕ್ರಮ ನಿರೂಪಿಸಿದರು. ಸ್ಟೇಷನ್ ಬಜಾರ್ ಸರಕಾರಿ ಪ್ರೌಢಶಾಲೆಯ ಮುಖ್ಯಗುರು ಬಸಪ್ಪ ಅವರು ವಂದಿಸಿದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ