ಗುರುವಾರ, ಮಾರ್ಚ್ 5, 2020

ಅಕ್ರಮ ಪಡಿತರ ಚೀಟಿ ಹಿಂದಿರುಗಿಸಲು ಅವಕಾಶ
ಯಾದಗಿರಿ, ಮಾರ್ಚ್ 05 (ಕರ್ನಾಟಕ ವಾರ್ತೆ): ಗುರುಮಠಕಲ್ ತಾಲ್ಲೂಕಿನಲ್ಲಿ ತಪ್ಪು ಮಾಹಿತಿ ನೀಡಿ ಅಂತ್ಯೋದಯ, ಬಿಪಿಎಲ್ ಪಡಿತರ ಚೀಟಿಗಳನ್ನು ಪಡೆದಿರುವುದು ಕಂಡು ಬಂದಿದ್ದು, ಇಂಥÀ ಪಡಿತರ ಚೀಟಿಗಳನ್ನು ಹೊಂದಿರುವ ಕುಟುಂಬಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ತಹಶೀಲ್ದಾದರಾದ ಸಂಗಮೇಶ ಜಿಡಗೆÀ ಅವರು ತಿಳಿಸಿದ್ದಾರೆ. 
ಸರ್ಕಾರದ ಮಾನದಂಡಗಳನ್ನು ಉಲ್ಲಂಘಿಸಿ ಪಡಿತರ ಚೀಟಿಗಳನ್ನು ಪಡೆದಿದ್ದಲ್ಲಿ ಅಂತಹ ಪಡಿತರ ಚೀಟಿದಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ಆರ್ಥಿಕವಾಗಿ ಸದೃಢರು ಪಡೆದಿರುವ ಬಿ.ಪಿ.ಎಲ್. ಕಾರ್ಡನ್ನು ಸರ್ಕಾರ ಕ್ರಮ ತೆಗೆದುಕೊಳ್ಳುವ ಮೊದಲು ಹಿಂದಿರುಗಿಸಬೇಕು. ಅಲ್ಲದೇ ಅಕ್ರಮವಾಗಿ ಬಿಪಿಎಲ್ ಪಡಿತರ ಚೀಟಿ ಪಡೆದವರಿಗೆ ಇದು ಎಚ್ಚರಿಕೆಯ ಸಂದೇಶ ಎಂದರು. ಮಾನದಂಡಗಳು : ವೇತನವನ್ನು ಗಣನೆಗೆ ತೆಗೆದುಕೊಳ್ಳದೇ ಎಲ್ಲಾ ಖಾಯಂ ನೌಕರರು ಸರ್ಕಾರದ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತÀ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಮಂಡಳಿಗಳು, ನಿಗಮಗಳು, ಸ್ವಾಯತ್ತ ಸಂಸ್ಥೆಗಳು ಇತ್ಯಾದಿ ಒಳಗೊಂಡಂತೆ ಆದಾಯ ತೆರಿಗೆ, ಸೇವಾ ತೆರಿಗೆ, ವ್ಯಾಟ್, ವೃತ್ತಿ ತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು. ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು. ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ ನಗರ ಪ್ರದೇಶಗಳಲ್ಲಿ 1000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು,  ಜೀವನೋಪಾಯಕ್ಕಾಗಿ ಸ್ವಂತ ಓಡಿಸುವ ಒಂದು ವಾಣಿಜ್ಯ ವಾಹನವನ್ನು ಅಂದರೆ ಟ್ರ್ಯಾಕ್ಟರ್, ಮ್ಯಾಕ್ಸಿ ಕ್ಯಾಬ್, ಟ್ಯಾಕ್ಸಿ, ಇತ್ಯಾದಿಗಳನ್ನು ಹೊಂದಿರುವ ಕುಟುಂಬಗಳನ್ನು ಹೊರತುಪಡಿಸಿ ನಾಲ್ಕು ಚಕ್ರದ ವಾಹನವನ್ನು ಹೊಂದಿರುವ ಎಲ್ಲಾ ಕುಟುಂಬಗಳು. ಕುಟುಂಬದ ವಾರ್ಷಿಕ ಆದಾಯವು ರೂ. 1.20 ಲಕ್ಷಗಳಿಗಿಂತಲು ಹೆಚ್ಚು ಇರುವ ಕುಟುಂಬಗಳು, ಒಂದೇ ಮನೆಯಲ್ಲಿ ವಾಸವಿದ್ದು ಒಂದಕ್ಕಿಂತ ಹೆಚ್ಚು ಪಡಿತರ ಚೀಟಿಗಳನ್ನು ಹೊಂದಿರುವಂತಹ ಕುಟುಂಬಗಳು ಅನರ್ಹರರು ಇರುತ್ತಾರೆ. ಇವರೆಲ್ಲಾ ಬಿಪಿಎಲ್ ಪಡಿತರ ಚೀಟಿಗಳನ್ನು ಹೊಂದಿರುವುದು ಕಾನೂನು ಬಾಹಿರ ಕ್ರಮವಾಗಿರುತ್ತದೆ ಎಂದು ಹೇಳಿದರು. 
ಸರ್ಕಾರ ಬಡ ಕುಟುಂಬಗಳಿಗೆ ನೀಡುತ್ತಿರುವ ಬಿಪಿಎಲ್ ಕಾರ್ಡ್‍ನ್ನು ಕೆಲವರು ಸುಳ್ಳು ಮಾಹಿತಿ ನೀಡಿ ಪಡೆದಿರುವುದು ವಿಷಾದನಿಯ, ಈ ರೀತಿಯ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಪತ್ತೆ ಮಾಡುತ್ತಿದೆ ಅಕ್ರಮವಾಗಿ ಹೊಂದಿರುವ ಬಿಪಿಎಲ್ ವರ್ಗದ ಪಡಿತರ ಚೀಟಿಗಳನ್ನು ಏಪ್ರಿಲ್ 2020ರ ಅಂತ್ಯದವರೆಗೆ ಮತ್ತೊಂದು ಅವಕಾಶವನ್ನು  ನೀಡಿರುತ್ತದೆಅನರ್ಹರು ನಿಗಧಿತ ದಿನಾಂಕದೊಳಗೆ ತಾವು ಹೊಂದಿರುವ ಬಿಪಿಎಲ್ ಪಡಿತರ ಚೀಟಿಗಳನ್ನು ತಹಶೀಲ್ದಾರರ ಕಾರ್ಯಲಯ ಹಾಗೂ ಆಹಾರ ಇಲಾಖೆಗೆ ಹಿಂದಿರುಗಿಸಿ ಎಂದು ತಿಳಿಸಿದ್ದಾರೆ.
ಇನ್ನು ತಾವೇ ಸ್ವತಃ ಪಡಿತರ ಚೀಟಿಗಳನ್ನು ಹಿಂತಿರುಗಿಸಿದವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಾಗುವುದಿಲ್ಲ ಎಂದು ಅವರು ಹೇಳಿದ್ದಾರೆ. ಈ ಅವಧಿ ಮುಗಿದ ನಂತರ ಸರ್ಕಾರವೇ ಕಾರ್ಯಚರಣೆ ನಡೆಸಿ ಅನರ್ಹರು ಹೊಂದಿರುವ ಬಿಪಿಎಲ್ ವರ್ಗದ ಪಡಿತರ ಚೀಟಿಗಳನ್ನು ಪತ್ತೆ ಹಚ್ಚಿದಾಗ ಅಂತಹ ಕುಟುಂಬಗಳು ತಾವು ಪಡಿತರ ಚೀಟಿಗಳನ್ನು ಹೊಂದಿದ ದಿನಾಂಕದಿಂದ ಪತ್ತೆ ಹಚ್ಚಿದ ದಿನಾಂಕದವರೆಗೆ ತಾವು ಪಡೆದ ಪಡಿತರ ಪದಾರ್ಥಗಳವಾರು ಪ್ರತಿ ಕೆಜಿಗೆ ಮುಕ್ತ ಮಾರುಕಟ್ಟೆಯ ಬೆಲೆಯ ಅನುಸಾರ ಹಣವನ್ನು ವಸೂಲಿ ಮಾಡಲಾಗುವುದು ಜೊತೆಗೆ (The Karnataka (Previntion Of  Unauthorized Possession Of Ration Cards) Order-1977)ರ ರಿತ್ಯ ಕ್ರಮ ವಹಿಸಲಾಗುವುದು ಮತ್ತು ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು. ಆದ್ದರಿಂದ ಅನರ್ಹರು ತಾವು ಹೊಂದಿರುವ ಬಿಪಿಎಲ್ ವರ್ಗದ ಪಡಿತರ ಚೀಟಿಗಳನ್ನು ಸರ್ಕಾರಕ್ಕೆ ವಾಪಸ್ಸು ನೀಡಿ ಕಾನೂನು ಕ್ರಮದಿಂದ ವಿಮುಕ್ತಿ ಹೊಂದಬೇಕು ಎಂದು ತಿಳಿಸಿದ್ದಾರೆ. 

ಆಕ್ಷೇಪಣೆ ಸಲ್ಲಿಕೆಗೆ ಕಾಲಾವಕಾಶ
ಯಾದಗಿರಿ, ಮಾರ್ಚ್ 05 (ಕರ್ನಾಟಕ ವಾರ್ತೆ): ಗುರುಮಠಕಲ್ ತಾಲ್ಲೂಕಿನ ಪುರಸಭೆ ವ್ಯಾಪ್ತಿಯಲ್ಲಿ ಬರುವ ಮೂಲ ಆಸ್ತಿ ಮಾಲೀಕರು ನವೆಂಬರ್ 27, 2019ರ ಪ್ರಕಾರ ಮೂಲ ಆಸ್ತಿ ತೆರಿಗೆ ಮೇಲೆ ಶೇ.15ರಿಂದ 30 ರಷ್ಟು ದರ ಹೆಚ್ಚಳ ಮಾಡಬೇಕಾಗಿರುವುದರಿಂದ, ದರಪರಿಷ್ಕರಣೆ ಸಂಬಂಧಿಸಿದಂತೆ ಯಾವುದಾದರೂ ತಕರಾರು ಇದ್ದಲ್ಲಿ ಮಾರ್ಚ್ 20ರೊಳಗಾಗಿ ಆಕ್ಷೇಪಣೆಗಳನ್ನು ಪುರಸಭೆ ಕಾರ್ಯಾಲಯದ ಕಂದಾಯ ಶಾಖೆಯಲ್ಲಿ ಸಲ್ಲಿಸಬೇಕು ಎಂದು ಪುರಸಭೆ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ. ಅಲದೇ ಕೊನೆಯ ದಿನಾಂಕದ ನಂತರ ಬರುವ ಯಾವುದೇ ಆಕ್ಷೇಪಣೆಗಳು ಸ್ವೀಕರಿಸುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...