ಗುರುವಾರ, ಮಾರ್ಚ್ 5, 2020

ವಿದ್ಯಾರ್ಥಿಗಳಿಂದ ಸ್ವಚ್ಛ ಭಾರತ ಅಭಿಯಾನದ ಜಾಗೃತಿ

ಯಾದಗಿರಿ, ಮಾರ್ಚ್ 05 (ಕರ್ನಾಟಕ ವಾರ್ತೆ): ಜಿಲ್ಲೆಯ ಗುರುಮಠಕಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿ ಎನ್‍ಎಸ್‍ಎಸ್ ವಿದ್ಯಾರ್ಥಿಗಳೊಂದಿಗೆ ಹರಿಜನವಾಡದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಸ್ವಚ್ಛ ಭಾರತ ಅಭಿಯಾನ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. 
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಯಾದಗಿರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ  ನಿಗಮ ಮಹಿಳಾ ಶಕ್ತಿ ಕೇಂದ್ರ ಯಾದಗಿರಿ ವತಿಯಿಂದ ಈ ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಈ ಜಾಥ ಜಾಗೃತಿ ಕಾರ್ಯಕ್ರಮವನ್ನ ಸಸಿಗೆ ನೀರು ಹಾಕುವುದರ ಮೂಲಕ ಗುರುಮಠಕಲ್ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಶ್ರೀ ಟಿ.ಪಿ ದೊಡ್ಡಮನಿ ಅವರು ಉದ್ಘಾಟಿಸಿದರು. 

ನಂತರ ಮಹಿಳಾ ಶಕ್ತಿ ಕೇಂದ್ರದ ಜಿಲ್ಲಾ ಸಂಯೋಜಕರಾದ ಆಶಾ ಬೇಗಂ ರವರು ಸ್ವಚ್ಛ ಭಾರತ ಅಭಿಯಾನ ಪ್ರತಿಜ್ಞಾ ವಿಧಿಯನ್ನು ವಿದ್ಯಾರ್ಥಿಗಳಿಗೆ ಹಾಗೂ ಉಪನ್ಯಾಸಕರಿಗೆ ಭೊಧಿಸಿದರು.
ಬಳಿಕ ವಿದ್ಯಾರ್ಥಿಗಳು ಹರಿಜನವಾವಾಡದ ವಾರ್ಡ್‍ಗಳಲ್ಲಿ ಸ್ವಚ್ಛ ಭಾರತ ಬಗ್ಗೆ ಘೊಷಣೆ ಕೂಗಿ ಜಾಗೃತಿ  ಮೂಡಿಸದರು. ಇದಲ್ಲದೇ ಶ್ರಮಧಾನ ಕಾರ್ಯಕ್ರಮ ಸಮುದಾಯ ಜನರಿಗೆ ಆರೋಗ್ಯ ಮತ್ತು ನೈರ್ಮಲ್ಯ, ಕುಡಿಯುವ ನೀರು, ಪರಿಸರದ ಬಗ್ಗೆ ಜಾಗೃತಿ ಮೂಡಿಸಲಾಯಿತು. 
ಇನ್ನು ಈ ಕಾರ್ಯಕ್ರಮದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಅಶೋಕ ಮಟ್ಟಿ, ಎನ್‍ಎಸ್‍ಎಸ್ ಅಧಿಕಾರಿಂಯಾದ ಶರಣಪ್ಪ ಪಾಟಿಲ್ ಗುಂಡಗುರ್ತಿ, ಉಪನ್ಯಾಸಕರಾದ ಹಣಮಂತ ದಾಸನ, ಡಾ. ಮಿನಾ ಪರವಿನ , ಮಾಣಿಕಪ್ಪ, ಕೃಷ್ಣ, ವೆಂಕಟೇಶ, ಅಚಿಜಪ್ಪ ಹುಸೇನಪ್ಪ, ಬಾಲಪ್ಪ, ಭೀಮರಾಯ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯೋಪಾದ್ಯಾಯರಾದ ಭೀಮಣ್ಣ ಗೌಡ ಪಾಟಿಲ್, ಕಾಲೇಜಿನ ಎನ್‍ಎಸ್‍ಎಸ್ ವಿದ್ಯಾರ್ಥಿಗಳು, ಶಾಲೆಯ ಮಕ್ಕಳು ಎಂಎಸ್‍ಕೆ ಸಿಬ್ಬಂದಿ ಭಾಗಿಯಾಗಿದ್ದರು. 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...