ಗುರುವಾರ, ಮಾರ್ಚ್ 5, 2020

ಕಲ್ಯಾಣ ಕರ್ನಾಟಕಕ್ಕೆ ಭರ್ಜರಿ ಬಂಪರ್: ಸಚಿವ ಪ್ರಭು ಚವ್ಹಾಣ್ ಸಂತಸ
ಯಾದಗಿರಿ, ಮಾರ್ಚ್ 05 (ಕರ್ನಾಟಕ ವಾರ್ತೆ): ಯಾದಗಿರಿ, ಕಲಬುರಗಿ, ಭಾಗದ ಜನರಿಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವ ಮಹತ್ವಾಕಾಂಕ್ಷಿ ಯೋಜನೆಯಾದ ತಿಂಥಣಿ ಬ್ರಿಡ್ಜ್ ಹತ್ತಿರ ಕೃಷ್ಣಾ ನದಿಗೆ ಜಲಾಶಯ ನಿರ್ಮಿಸಲು ಉದ್ದೇಶಿಸಿ, ವಿಸ್ತøತ ಯೋಜನಾ ವರದಿಯನ್ನು ತಯಾರಿಸಲು ಕ್ರಮವಹಿಸುವ ಬಗ್ಗೆ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪನವರು ಬಜೆಟ್‍ನಲ್ಲಿ ಘೋಷಿಸಿದ್ದು, ಈ ಭಾಗದ ಜನರ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ದೊರಕಿದಂತಾಗುತ್ತದೆ ಎಂದು ಪಶುಸಂಗೋಪನೆ ಹಜ್ ಮತ್ತು ವಕ್ಫ್ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ್ ಹರ್ಷ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರವು ಕಲ್ಯಾಣ ಕರ್ನಾಟಕಕ್ಕೆ ಬಜೆಟ್‍ನಲ್ಲಿ ಹೆಚ್ಚಿನ ಒತ್ತು ನೀಡಿದ್ದು, ಈ ಭಾಗದ ಅಭಿವೃದ್ಧಿಗೆ ಹೊಸ ನಾಂದಿ ಹಾಡಿದಂತಾಗಿದೆ. ಅಲ್ಲದೇ ಕಲ್ಯಾಣ ಕರ್ನಾಟಕ ಭಾಗದ ಸರ್ವತೋಮುಖ ಅಭಿವೃದ್ಧಿಗೆ ಹಲವು ಬಾರಿ ವೈಯಕ್ತಿಕವಾಗಿ ಹಾಗೂ ನಿಯೋಗದೊಂದಿಗೆ ಭೇಟಿ ನೀಡಿದ್ದೆ. ಪ್ರಸಕ್ತ ಬಜೆಟ್‍ನಲ್ಲಿ 1,500 ಕೋಟಿ ಅನುದಾನ ಘೋಷಣೆ ಮಾಡಿದ್ದು ಸಂತಸ ತಂದಿದೆ ಎಂದರು.
ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕøತಿಕ ಸಂಘವನ್ನು ಹೊಸದಾಗಿ ರಚಿಸಲಾಗಿದೆ, ಕಲ್ಯಾಣ ಕರ್ನಾಟಕ ವ್ಯಾಪ್ತಿಯ 6 ಜಿಲ್ಲೆಗಳಲ್ಲಿ ಕೃಷಿ, ಶಿಕ್ಷಣ, ಆರೋಗ್ಯ, ಮಹಿಳಾ ಸಬಲೀಕರಣ, ಸ್ವಯಂ ಉದ್ಯೋಗ, ಯುವ ಸಬಲೀಕರಣ ಹೀಗೆ ಮುಂತಾದ ವಲಯಗಳಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸಿ ಈ ಪ್ರದೇಶದ ಮಾನವ ಸಂಪನ್ಮೂಲ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಇನ್ನು ಈ ಚಟುವಟಿಕೆಗಳನ್ನು ಮುಂಬರುವ ವರ್ಷಗಳಲ್ಲಿ 500 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳುವ ಬಗ್ಗೆ ಬಜೆಟ್‍ನಲ್ಲಿ ತಿಳಿಸಲಾಗಿದೆ ಎಂದು ಹೇಳಿದರು.  ಕಲ್ಯಾಣ ಕರ್ನಾಟಕದ ಸರ್ವತೋಮುಖ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಿದ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ ಅವರಿಗೆ ಈ ಭಾಗದ ಸಾರ್ವಜನಿಕರ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ.  




ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...