ಶುಕ್ರವಾರ, ಮಾರ್ಚ್ 6, 2020

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ
ಯಾದಗಿರಿ, ಮಾರ್ಚ್ 06 (ಕರ್ನಾಟಕ ವಾರ್ತೆ): ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಬಿ.ಚವ್ಹಾಣ್ ಅವರು ಮಾರ್ಚ್ 7ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಉದ್ಯಾನ ಎಕ್ಸ್‍ಪ್ರೆಸ್ ರೈಲು ಮೂಲಕ ಶನಿವಾರ ಬೆಳಿಗ್ಗೆ ಯಾದಗಿರಿ ನಗರಕ್ಕೆ ಆಗಮಿಸುವರು. ಬೆಳಿಗ್ಗೆ 9.30 ಗಂಟೆಗೆ ಬಿಜೆಪಿ ಜಿಲ್ಲಾ ಕಾರ್ಯಾಲಯಕ್ಕೆ ಭೇಟಿ ನೀಡುವರು. ಬೆಳಿಗ್ಗೆ 10.30 ಗಂಟೆಗೆ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರ ಹಾಗೂ ಜಿಲ್ಲಾಸ್ಪತ್ರೆಯಲ್ಲಿ ತೆರೆದಿರುವ ಕರೋನಾ ವೈರಸ್ ತೀವ್ರ ನಿಗಾ ಘಟಕಕ್ಕೆ ಭೇಟಿ ನೀಡುವರು. ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ (ಕೆಡಿಪಿ)ಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಮಧ್ಯಾಹ್ನ 3 ಗಂಟೆಗೆ ರಸ್ತೆ ಮೂಲಕ ಭೋಂತಿಗೆ ಪ್ರಯಾಣ ಬೆಳೆಸುವರು.
ಇಂದು ಡಿಜಿಟಲ್ ಗ್ರಂಥಾಲಯ ಉದ್ಘಾಟನೆ
ಯಾದಗಿರಿ, ಮಾರ್ಚ್ 06 (ಕರ್ನಾಟಕ ವಾರ್ತೆ): ಸಾರ್ವಜನಿಕ ಗ್ರಂಥಾಲಯ ಇಲಾಖೆ, ಜಿಲ್ಲಾ ಕೇಂದ್ರ ಗ್ರಂಥಾಲಯ ವತಿಯಿಂದ ಯಾದಗಿರಿ ನಗರದ ಅಮರ ಲೇ ಔಟ್‍ನಲ್ಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯದ ಮೊದಲನೇ ಮಹಡಿ ಮತ್ತು ಡಿಜಿಟಲ್ ಗ್ರಂಥಾಲಯ ಹಾಗೂ ಪುಸ್ತಕ ಪ್ರದರ್ಶನ ಉದ್ಘಾಟನಾ ಸಮಾರಂಭವನ್ನು ಮಾರ್ಚ್ 7ರಂದು ಬೆಳಿಗ್ಗೆ 10.30 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಬಿ.ಚವ್ಹಾಣ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರಾದ ಎಸ್.ಸುರೇಶಕುಮಾರ ಅವರು ಘನ ಉಪಸ್ಥಿತಿ ವಹಿಸುವರು.
ವಿಧಾನಸಭಾ ಸದಸ್ಯರಾದ ವೆಂಕಟರೆಡ್ಡಿಗೌಡ ಮುದ್ನಾಳ ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಜಶೇಖರಗೌಡ ಪಾಟೀಲ್ ವಜ್ಜಲ್, ಲೋಕಸಭಾ ಸದಸ್ಯರಾದ ರಾಜಾ ಅಮರೇಶ್ವರ ನಾಯಕ, ಡಾ.ಉಮೇಶ ಜಿ.ಜಾಧವ, ವಿಧಾನಸಭಾ ಸದಸ್ಯರಾದ ಶರಣಬಸಪ್ಪಗೌಡ ದರ್ಶನಾಪೂರ, ನರಸಿಂಹ ನಾಯಕ (ರಾಜುಗೌಡ), ನಾಗನಗೌಡ ಕಂದಕೂರ, ವಿಧಾನ ಪರಿಷತ್ ಸದಸ್ಯರಾದ ಶರಣಪ್ಪ ಮಟ್ಟೂರ, ಡಾ.ಚಂದ್ರಶೇಖರ ಬಿ.ಪಾಟೀಲ, ಬಿ.ಜಿ.ಪಾಟೀಲ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಗಿರಿಜಮ್ಮ ಸದಾಶಿವಪ್ಪಗೌಡ ರೊಟ್ನಡಗಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಭೀಮವ್ವ ಮಲ್ಲೇಶಪ್ಪ ಅಚ್ಚೋಲಾ, ನಗರಸಭೆ 25ನೇ ವಾರ್ಡ್ ಸದಸ್ಯರಾದ ಹನಮಂತ ಇಟಗಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿಗಳಾದ ಎಸ್.ಆರ್.ಉಮಾಶಂಕರ, ಕಲಬುರಗಿ ಪ್ರಾದೇಶಿಕ ಆಯುಕ್ತರು ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿಗಳಾದ ಎನ್.ವಿ.ಪ್ರಸಾದ ಅವರು ವಿಶೇಷ ಅಹ್ವಾನಿತರಾಗಿ ಪಾಲ್ಗೊಳ್ಳುವರು.
ನಾಳೆ ಸ್ತ್ರೀಶಕ್ತಿ ಸಮಾವೇಶ, ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
ಯಾದಗಿರಿ, ಮಾರ್ಚ್ 06 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಮಟ್ಟದ ಸ್ತ್ರೀಶಕ್ತಿ ಸಮಾವೇಶ, ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಸ್ತ್ರೀಶಕ್ತಿ ಸಂಘಗಳಿಂದ ಉತ್ಪಾದಿತ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ಉದ್ಘಾಟನಾ ಸಮಾರಂಭವನ್ನು ಮಾರ್ಚ್ 8ರಂದು ಬೆಳಿಗ್ಗೆ 10 ಗಂಟೆಗೆ ಯಾದಗಿರಿ ನಗರದ ರೈಲ್ವೆ ಸ್ಟೇಷನ್ ರಸ್ತೆಯಲ್ಲಿರುವ ವಿದ್ಯಾಮಂಗಲ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ.
ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಬಿ.ಚವ್ಹಾಣ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ವಿಧಾನಸಭಾ ಸದಸ್ಯರಾದ ವೆಂಕಟರೆಡ್ಡಿಗೌಡ ಮುದ್ನಾಳ ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಜಶೇಖರಗೌಡ ಪಾಟೀಲ್ ವಜ್ಜಲ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಲೋಕಸಭಾ ಸದಸ್ಯರಾದ ರಾಜಾ ಅಮರೇಶ್ವರ ನಾಯಕ, ಡಾ.ಉಮೇಶ ಜಿ.ಜಾಧವ ಅವರು ಅತಿಥಿಗಳಾಗಿ ಆಗಮಿಸುವರು.
ವಿಧಾನಸಭಾ ಸದಸ್ಯರಾದ ಶರಣಬಸಪ್ಪಗೌಡ ದರ್ಶನಾಪೂರ, ನರಸಿಂಹ ನಾಯಕ (ರಾಜುಗೌಡ), ನಾಗನಗೌಡ ಕಂದಕೂರ, ವಿಧಾನ ಪರಿಷತ್ ಸದಸ್ಯರಾದ ಶರಣಪ್ಪ ಮಟ್ಟೂರ, ಡಾ.ಚಂದ್ರಶೇಖರ ಪಾಟೀಲ, ಬಿ.ಜಿ.ಪಾಟೀಲ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಗಿರಿಜಮ್ಮ ಸದಾಶಿವಪ್ಪಗೌಡ ರೊಟ್ನಡಗಿ, ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸರಸ್ವತಿ ಸುಭಾಶ್ಚಂದ್ರ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಭೀಮವ್ವ ಮಲ್ಲೇಶಪ್ಪ ಅಚ್ಚೋಲಾ ಅವರು ವಿಶೇಷ ಆಹ್ವಾನಿತರಾಗಿ  ಪಾಲ್ಗೊಳ್ಳುವರು.
ಕಾರ್ಯಕ್ರಮಗಳ ವಿವರ: ಜಿಲ್ಲೆಯ ವಿಶೇಷ ಸಾಧನೆಗೈದ ಮಹಿಳೆಯರಿಗೆ ಸನ್ಮಾನ, ಅತ್ಯುತ್ತಮ ಸ್ತ್ರೀಶಕ್ತಿ ಗುಂಪು, ಒಕ್ಕೂಟಕ್ಕೆ ಸನ್ಮಾನ ಮಾಡಲಾಗುವುದು. ಲಿಂಗೇರಿ ಕೋನಪ್ಪ ಮಹಿಳಾ ಪದವಿ ಮಹಾವಿದ್ಯಾಲಯದ ಉಪನ್ಯಾಸಕರಾದ ಡಾ.ಜ್ಯೋತಿಲತಾ ತಡಬಿಡಿಮಠ ಅವರು “ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಕುರಿತು ವಿಶೇಷ ಉಪನ್ಯಾಸ ನೀಡುವರು.
ವಕೀಲರಾದ ನಿರ್ಮಲಾದೇವಿ ಎಸ್.ಹೂಗಾರ ಅವರು “ಮಹಿಳೆಯರಿಗೆ ಇರುವ ಕಾನೂನುಗಳು” ಹಾಗೂ ವಕೀಲರಾದ ಸಾವಿತ್ರಿದೇವಿ ಪಾಟೀಲ್ ಅವರು “ಮಹಿಳೆಯರ ಮೇಲೆ ಕೌಟುಂಬಿಕ ದೌರ್ಜನ್ಯ” ಕುರಿತು ಉಪನ್ಯಾಸ ನೀಡುವರು. ಮಹಿಳಾ ಸಮಖ್ಯಾ ಪ್ರಭಾರ ಜಿಲ್ಲಾ ಸಂಯೋಜಕರಾದ ವಿಮಲಾಕ್ಷಿ ಆರ್.ಹಿರೇಮಠ ಅವರು “ತಾಲ್ಲೂಕು ಒಕ್ಕೂಟಗಳ ಬಲವರ್ಧನೆ ಮತ್ತು ಇಲಾಖೆ/ ಇತರೆ ಇಲಾಖೆಗಳಲ್ಲಿ ಮಹಿಳೆಯರಿಗಾಗಿ ಇರುವ ಯೋಜನೆಗಳು, ಕಾರ್ಯಕ್ರಮಗಳ ಗ್ರಾಮಸಭೆ ಕುರಿತು, ಎಸ್.ಬಿ.ಐ ಆರ್‍ಎಸ್.ಟಿ.ಐ ನ ಉಪನ್ಯಾಸಕರಾದ ಲಕ್ಷ್ಮಣರೆಡ್ಡಿ ಅವರು “ಸ್ತ್ರೀಶಕ್ತಿ ಉತ್ಪನ್ನಗಳ ಗುಣಮಟ್ಟ ನಿರ್ವಹಣೆ ಹಾಗೂ ಮಾರುಕಟ್ಟೆ ಸಹಾಯ ಸ್ಥಳೀಯವಾಗಿ ಅವಶ್ಯಕತೆ” ಕುರಿತು ಉಪನ್ಯಾಸ ನೀಡುವರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...