ಇಂದು ಅಡಿಗಲ್ಲು ಸಮಾರಂಭ
ಯಾದಗಿರಿ, ಮಾರ್ಚ್ 07 (ಕರ್ನಾಟಕ ವಾರ್ತೆ): ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ವತಿಯಿಂದ 2019-20ನೇ ಸಾಲಿನ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಮೈಕ್ರೊ ಯೋಜನೆಯಡಿಯಲ್ಲಿ ಯಾದಗಿರಿ ತಾಲ್ಲೂಕಿನ ಹೊನಗೇರಾ ಗ್ರಾಮದಲ್ಲಿ ಚರಂಡಿ ಮೇಲೆ 40 ಲಕ್ಷ ರೂ. ವೆಚ್ಚದಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿಯ ಅಡಿಗಲ್ಲು ಸಮಾರಂಭವನ್ನು ಮಾರ್ಚ್ 8ರಂದು ಹಮ್ಮಿಕೊಳ್ಳಲಾಗಿದೆ.
ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಬಿ.ಚವ್ಹಾಣ್ ಅವರು ಶಿಲಾನ್ಯಾಸ ನೆರವೇರಿಸುವರು. ವಿಧಾನಸಭಾ ಸದಸ್ಯರಾದ ನಾಗನಗೌಡ ಕಂದಕೂರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಜಶೇಖರಗೌಡ ಪಾಟೀಲ್ ವಜ್ಜಲ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸುವರು.
ಲೋಕಸಭಾ ಸದಸ್ಯರಾದ ಡಾ.ಉಮೇಶ ಜಿ.ಜಾಧವ, ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ ಪಾಟೀಲ್, ಶರಣಪ್ಪ ಮಟ್ಟೂರ, ಬಿ.ಜಿ.ಪಾಟೀಲ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಗಿರಿಜಮ್ಮ ಸದಾಶಿವಪ್ಪಗೌಡ ರೊಟ್ನಡಗಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಭೀಮವ್ವ ಮಲ್ಲೇಶಪ್ಪ ಅಚ್ಚೋಲಾ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಲ್ಲಮ್ಮ ಮಲ್ಲಪ್ಪ, ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸರಸ್ವತಿ ಸುಭಾಶ್ ಕಟಕಟಿ, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಶೈಲಜಾ ಚನ್ನಸಂಗನಬಸವ ರ್ಯಾಖಾ ಅವರು ಅತಿಥಿಗಳಾಗಿ ಭಾಗವಹಿಸುವರು.
ಬೇಸಿಗೆಯ ನೈಸರ್ಗಿಕ ವಿಕೋಪ ದೂರುಗಳ ಸ್ವೀಕಾರಕ್ಕೆ ಸಹಾಯವಾಣಿ ಆರಂಭ
ಯಾದಗಿರಿ, ಮಾರ್ಚ್ 07 (ಕರ್ನಾಟಕ ವಾರ್ತೆ): 2020ರ ಏಪ್ರಿಲ್, ಮೇ ಮತ್ತು ಜೂನ್ ತಿಂಗಳುಗಳಲ್ಲಿನ ತೀವ್ರ ಉμÁ್ಣಂಶದ ಹೆಚ್ಚಳ ಹಾಗೂ ಬಿಸಿಗಾಳಿ ಪರಿಸ್ಥಿತಿಯನ್ನು ನಿರ್ವಹಿಸಲು ಮತ್ತು ಇತರೆ ನೈಸರ್ಗಿಕ ವಿಕೋಪದ ದೂರುಗಳನ್ನು ಸ್ವೀಕರಿಸಲು ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ 24*7 ಕಂಟ್ರೋಲ್ ರೂಮ್ ತೆರೆಯಲಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿನ ತೀವ್ರ ಉμÁ್ಣಂಶದ ಪರಿಣಾಮದಿಂದ ಸಾರ್ವಜನಿಕರಿಗೆ, ಜಾನುವಾರಗಳಿಗೆ ಮತ್ತು ಪ್ರಾಣಿ-ಪಕ್ಷಿಗಳಿಗೆ ಸಂಭವಿಸಬಹುದಾದ ದುಷ್ಪರಿಣಾಮಗಳನ್ನು ತಪ್ಪಿಸಲು ಮುನ್ನೆಚ್ಚರಿಕೆ ಹಾಗೂ ಸಿದ್ಧತೆಗಳನ್ನು ಕೈಗೊಳ್ಳುವುದು ಅನಿವಾರ್ಯವಾದ ಕಾರಣ ಕಂಟ್ರೋಲ್ ರೂಮ್ ತೆರೆಯಲಾಗಿದ್ದು, ದೂರವಾಣಿ ಸಂಖ್ಯೆ:08473-253950 ಇರುತ್ತದೆ. ಸದರಿ ಕಂಟ್ರೋಲ್ ರೂಮ್ ನಲ್ಲಿ ಮಾರ್ಚ್ 5ರಿಂದ ಮೇ 31ರ ವರೆಗೆ ವಿವಿಧ ಅಧಿಕಾರಿ/ಸಿಬ್ಬಂದಿ ವರ್ಗದವರು 24*7 ಕರ್ತವ್ಯ ನಿರ್ವಹಿಸುತ್ತಿದ್ದು, ಸಾರ್ವಜನಿಕರು ಸದರಿ ವಿಷಯಕ್ಕೆ ಸಂಬಂಧಿಸಿದಂತೆ ಕರೆ ಮಾಡಬಹುದಾಗಿದೆ.
ಬಿಸಿಗಾಳಿ ಪರಿಸ್ಥಿತಿ ನಿಭಾಯಿಸಲು ಸಲಹೆ: 2020ರ ಬೇಸಿಗೆ ಬಿಸಿಗಾಳಿ ಪರಿಸ್ಥಿತಿ ನಿಭಾಯಿಸಲು ಸಾರ್ವಜನಿಕರು ಈ ಕೆಳಕಂಡ ಕ್ರಮಗಳನ್ನು ಅನುಸರಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ ಅವರು ತಿಳಿಸಿದ್ದಾರೆ.
ಬೇಸಿಗೆ ಬಿಸಿಲು ಹೆಚ್ಚು ಇರುವುದರಿಂದ ಆಗಾಗ ಉಪ್ಪು ಅಥವಾ ಸಕ್ಕರೆ ಮಿಶ್ರಿತ ನೀರನ್ನು ನಿಧಾನವಾಗಿ ಕುಡಿಯಬೇಕು. ಅಲ್ಲದೇ ಹಣ್ಣಿನ ರಸ, ಪಾನಕ, ಮಜ್ಜಿಗೆ, ಎಳನೀರನ್ನು ಸೇವಿಸಬೇಕು. ಮೈಮೇಲೆ ಸಡಿಲವಾದ, ತೆಳು ಬಣ್ಣದ ಹತ್ತಿಯ ಬಟ್ಟೆ ಧರಿಸಬೇಕು. ಕೈಗೆಟುಕುವಂತೆ ಕುಡಿಯುವ ನೀರನ್ನು ಇಟ್ಟುಕೊಳ್ಳಬೇಕು. ಮನೆಯಿಂದ ಹೊರಗಡೆ ಹೋಗುವಾಗ ಜೊತೆಗೆ ಶುದ್ಧ ಕುಡಿಯುವ ನೀರು ಇರಲಿ. ಬೆವರನ್ನು ಹತ್ತಿಯ ನುಣುಪಾದ ಬಟ್ಟೆ/ಟಿಶ್ಯೂ ಕರವಸ್ತ್ರದಿಂದ ಒರೆಸಬಹುದು. ಬೆಚ್ಚಗಿನ ಮಸಾಲೆ ರಹಿತವಾದ ಶುದ್ಧ ಸಾತ್ವಿಕ ಆಹಾರ ಸೇವಿಸಬೇಕು.
ವ್ಯಕ್ತಿ ತೊದಲು ಮಾತು ಅಥವಾ ಅರ್ಥರಹಿತವಾಗಿ ಬಡಬಡಿಸಿದಲ್ಲಿ ಕೂಡಲೇ ನೆರಳಿನ ಪ್ರದೇಶಕ್ಕೆ ಸ್ಥಳಾಂತರಿಸಿರಿ. ಕೆಳಗೆ ಮಲಗಿಸಿ, ಕಾಲುಗಳನ್ನು ಮೇಲಕ್ಕೆತ್ತಿ. ಆತ/ಆಕೆಯ ಹಣೆ, ಕತ್ತು ಪಾದ ತೊಡೆಯ ಸಂದುಗಳನ್ನು ಒದ್ದೆ ಬಟ್ಟೆಯಿಂದ ಒರೆಸಿರಿ. (ತಂಪಾದ ಅಥವಾ ಐಸ್ ನೀರಿನಿಂದ ಒರೆಸಬಾರದು). ಚರ್ಮ ಕೆಂಪಾದರೆ, ಬೆವರು ಕಡಿಮೆಯಾದರೆ, ದೇಹದ ಉಷ್ಣತೆ ಜಾಸ್ತಿಯಾದರೆ, ದೀರ್ಘವಾದ ತೀವ್ರ ಉಸಿರಾಟವಿದ್ದಲ್ಲಿ ತುರ್ತಾಗಿ ವೈದ್ಯರನ್ನು ಸಂಪರ್ಕಿಸಬೇಕು. ಹತ್ತಿರದ ವೈದ್ಯರನ್ನು ಕರೆಸಬಹುದು ಅಥವಾ 108ಕ್ಕೆ ಕರೆ ಮಾಡಿರಿ. ಆಪತ್ಕಾಲದಲ್ಲಿ ನೀವು ಕೈಗೊಳ್ಳುವ ಶ್ರೀಘ್ರ ಸಮಯೋಚಿತ ಪ್ರಜ್ಞಾಪೂರ್ವಕ ಕ್ರಮವು ಆಘಾತಕ್ಕೂಳಗಾದ ವ್ಯಕ್ತಿಯ ಪ್ರಾಣ ಉಳಿಸಬಲ್ಲದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆಸ್ಪತ್ರೆ ಹಾಗೂ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಂಪರ್ಕಿಸಬಹುದು. ಜಿಲ್ಲಾ ವಿಪತ್ತು ನಿರ್ವಹಣಾ ಘಟಕ 1077ಕ್ಕೆ ಕರೆ ಮಾಡಬಹುದು.
ಮಾಡಬಾರದ ಅಂಶಗಳು: ಬಿಗಿಯಾದ, ಗಾಢ ಬಣ್ಣದ ಸಿಂಥೆಟಿಕ್ ಬಟ್ಟೆ ಧರಿಸಬಾರದು. ಕುಷನ್‍ಯುಕ್ತ ಕುರ್ಚಿಯಲ್ಲಿ ಕೂಡಬಾರದು. ಸೋಡಾ, ಇತ್ಯಾದಿ ಕಾರ್ಬೋನೇಟೆಡ್ ತಂಪು ಪಾನೀಯಗಳನ್ನು ಹೆಚ್ಚಾಗಿ ಕುಡಿಯಬಾರದು. ಕಾಫೀ, ಟೀ, ಸಕ್ಕರೆ ಅಂಶವುಳ್ಳ ಪಾನೀಯ ಅತಿಯಾಗಿ ಸೇವಿಸಬಾರದು. ಬಿಸಿಯಾದ ಮಸಾಲೆಯುಕ್ತ ಆಹಾರ ತಿನ್ನಬೇಡಿ. ಮಾಂಸಾಹಾರ ಮತ್ತು ಮದ್ಯಪಾನ ವರ್ಜಿಸಬೇಕು. ಗಾಳಿಯಾಡದ ಪಾದರಕ್ಷೆ/ ಶೂ ಧರಿಸಬೇಡಿ. ಉಷ್ಣತೆಯಿಂದ ಸುಸ್ತಾದ ವ್ಯಕ್ತಿಯನ್ನು ತುಂಬಾ ತಣ್ಣಗಿನ / ಶೀಥÀಲೀಕರಿಸಿದ ನೀರಿನಿಂದ ಒರೆಸಬಾರದು. ಇದರಿಂದ ವ್ಯಕ್ತಿಯ ದೇಹದ ಹೊರಪದರದಲ್ಲಿನ ರಕ್ತನಾಳಗಳು ಸಂಕುಚಿತಗೊಂಡು ದೇಹದ ಒಳಗಿನ ಉಷ್ಣತೆ ದೇಹದೊಳಗೆ ಬಂಧಿತವಾಗಿ ಆತನ ಅಂಗಾಂಗಗಳು ನಿಷ್ಕ್ರಿಯಗೊಂಡು ಹೆಚ್ಚಿನ ಹಾನಿಯಾಗಬಹುದು. ವ್ಯಕ್ತಿಯು ತೊದಲು ತೊದಲಾಗಿ ವಿಚಿತ್ರವಾಗಿ ಮಾತನಾಡಿದರೆ ಆತಂಕಪಡಬೇಡಿ. ಶಾಂತಿ ಸಮಾಧಾನದಿಂದ ಶೀಘ್ರವಾಗಿ ಕ್ರಮ ಕೈಗೊಳ್ಳಬೇಕು.ಸಂಭ್ರಾಂತಿ, ಅಸಂಗತ ಮಾತು, ವ್ಯತ್ಯಸ್ಥ ಪ್ರಜ್ಞೆ ಶಾಖಾಘಾತದ ಲಕ್ಷಣಗಳಾಗಿವೆ. ಈ ಲಕ್ಷಣಗಳು ಕಂಡುಬಂದಲ್ಲಿ ನೆರಳಿರುವೆಡೆಗೆ ವ್ಯಕ್ತಿಯನ್ನು ಸ್ಥಳಾಂತರಿಸಿ. ವ್ಯಕ್ತಿಯನ್ನು ಅಂಗಾತ ಮಲಗಿಸಿ, ಕಾಲುಗಳನ್ನು ಎತ್ತರಿಸಬೇಕು. ಸಾಮಾನ್ಯ ನೀರಿನಿಂದ ದೇಹವನ್ನು ಒರೆಸಿರಿ. ಹತ್ತಿರದ ವೈದ್ಯರನ್ನು ಕರೆಸಿರಿ ಎಂದು ಅವರು ಸಲಹೆ ನೀಡಿದ್ದಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ