ಶುಕ್ರವಾರ, ಮಾರ್ಚ್ 6, 2020

ಮದ್ಯ ಮಾರಾಟ ನಿಷೇಧ
ಯಾದಗಿರಿ, ಮಾರ್ಚ್ 07 (ಕರ್ನಾಟಕ ವಾರ್ತೆ): ಜಿಲ್ಲೆಯಾದ್ಯಂತ ಹೋಳಿ ಹಬ್ಬ ಆಚರಣೆ ಪ್ರಯುಕ್ತ ಮಾರ್ಚ್ 8ರ ಸಂಜೆ 6 ಗಂಟೆಯಿಂದ ಮಾ.10ರ ಮಧ್ಯರಾತ್ರಿಯವರೆಗೆ ಸಾರ್ವಜನಿಕ ಹಿತಾಸಕ್ತಿ ಕಾಪಾಡುವ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಮದ್ಯಪಾನ ಹಾಗೂ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಆದೇಶ ಹೊರಡಿಸಿದ್ದಾರೆ. ಹಬ್ಬದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21ರ ಪ್ರಕಾರ ಮದ್ಯಪಾನ ಹಾಗೂ ಮದ್ಯ ಮಾರಾಟ ನಿಷೇಧಿಸಲಾಗಿದೆ. ಜಿಲ್ಲೆಯ ಎಲ್ಲಾ ವೈನ್‍ಶಾಪ್, ಬಾರ್‍ಗಳು ಸಗಟು ಮತ್ತು ಚಿಲ್ಲರೆ ಮದ್ಯ ಮಾರಾಟ ಮಾಡುವಂತಿಲ್ಲ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಸ್ತ್ರೀಶಕ್ತಿ ಸಮಾವೇಶದಲ್ಲಿ ಭಾಗವಹಿಸಲು ಮನವಿ
ಯಾದಗಿರಿ, ಮಾರ್ಚ್ 07 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಮಟ್ಟದ ಸ್ತ್ರೀಶಕ್ತಿ ಸಮಾವೇಶ, ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಸ್ತ್ರೀಶಕ್ತಿ ಸಂಘಗಳಿಂದ ಉತ್ಪಾದಿತ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಮಾರ್ಚ್ 8ರಂದು ಬೆಳಿಗ್ಗೆ 10 ಗಂಟೆಗೆ ಯಾದಗಿರಿ ನಗರದ ರೈಲ್ವೆ ಸ್ಟೇಷನ್ ರಸ್ತೆಯಲ್ಲಿರುವ ವಿದ್ಯಾಮಂಗಲ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶದಲ್ಲಿ ಸ್ತ್ರೀಶಕ್ತಿ ಸಂಘಗಳು ಉತ್ಪಾದಿಸಿದ ವಸ್ತುಗಳನ್ನು ಖರೀದಿಸಲು ಅವಕಾಶವಿರುತ್ತದೆ. ಜಿಲ್ಲೆಯ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಪ್ರಭಾಕರ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...